ಮಾರುಕಟ್ಟೆಗೆ ಲಗ್ಗೆಯಿಡಲಿದೆ ಮೋಟೋ ಜಿ 8 ಪ್ಲಸ್: ಏನಿದರ ವಿಶೇಷತೆ ? ಬೆಲೆ ಎಷ್ಟು ?
Team Udayavani, Oct 24, 2019, 4:00 PM IST
ಮಣಿಪಾಲ: ಮೋಟೋ ಕಂಪೆನಿ ಸಿದ್ದಪಡಿಸಿದ ಮೋಟೋ ಜಿ 8 ಪ್ಲಸ್ ಇಂದು ಮಾರುಕಟ್ಟೆಗೆ ಬಿಡುಗಡೆಯಾಗಲಿದ್ದು ಭಾರೀ ಕುತೂಹಲ ಕೆರಳಿಸಿದೆ. ಬ್ರೆಜಿಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಈ ಸ್ಮಾರ್ಟ್ ಫೋನ್ ಅಧಿಕೃತವಾಗಿ ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಇದು ಮೋಟೋ ಜಿ 7 ಪ್ಲಸ್ ನ ಹೋಲಿಕೆಯನ್ನು ಹೊಂದಿದ್ದು ಫೀಚರ್ ಗಳಲ್ಲಿ ಮಾತ್ರ ಕೆಲವೊಂದು ಬದಲಾವಣೆಗಳು ಕಂಡುಬರಲಿದೆ ಎಂದು ಅಂದಾಜಿಸಲಾಗಿದೆ.
ಮೋಟೋ ಕಂಪೆನಿ ಮಾರುಕಟ್ಟೆಗೆ ಪರಿಚಯಿಸಿರುವ ಸ್ಮಾರ್ಟ್ಫೋನ್ ಹಿಂಭಾಗದಲ್ಲಿ ಮೂರು ಕ್ಯಾಮಾರಗಳು ಇರಲಿದ್ದು 48 ಮೆಗಾಫಿಕ್ಸೆಲ್ ಕ್ಯಾಮೆರಾದ ಜೊತೆಗೆ, 16 ಮೆಗಾಫಿಕ್ಸೆಲ್ ವೈಡ್ ಆ್ಯಂಗಲ್ ಲೆನ್ಸ್ ಮತ್ತು 5 ಮೆಗಾಫಿಕ್ಸೆಲ್ ಡೆಪ್ತ್ ಸೆನ್ಸಾರ್ ಅಳವಡಿಸಲಾಗಿದೆ. ಸೆಲ್ಫಿಗಾಗಿ 25 ಮೆಗಾಫಿಕ್ಸೆಲ್ ಕ್ಯಾಮೆರಾವನ್ನು ನೀಡಲಾಗಿದೆ.
ಮೋಟೋ ಜಿ 8 ಪ್ಲಸ್ 6.3 ಇಂಚಿನ ಟಚ್ ಸ್ಕ್ರೀನ್ ಡಿಸ್ ಪ್ಲೇಯನ್ನು ಹೊಂದಿದ್ದು 1080*2280 ಫಿಕ್ಸೆಲ್ ರೆಶಲ್ಯೂಶನ್ ಒಳಗೊಂಡಿದೆ. ಅದರ ಜೊತೆಗೆ ಆ್ಯಂಡ್ರಾಯ್ಡ್ 9 ಪೈ ನಿಂದ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ ಸ್ನ್ಯಾಪ್ ಡ್ರ್ಯಾಗನ್ 665 ಓಕ್ವಾ ಕೋರ್ ಎಸ್ ಒಸಿ ಒಳಗೊಂಡಿದೆ. ಈ ಸ್ಮಾರ್ಟ್ ಫೋನ್ 4ಜಿಬಿ RAM ಮತ್ತು 64 ಜಿಬಿ ಸ್ಟೋರೆಜ್ ಮತ್ತು 128 ಜಿಬಿವರೆಗೆ ವಿಸ್ತರಿಸಬಹುದಾದ ಆಂತರಿಕ ಸ್ಟೋರೆಜ್ ಅನ್ನು ಒಳಗೊಂಡಿದೆ.
ಮೋಟೋ ಜಿ8 ಪ್ಲಸ್ ಸ್ಮಾರ್ಟ್ಫೋನ್ ನಲ್ಲಿ 4,000mAh ಬ್ಯಾಟರಿಯನ್ನು ನೀಡಲಾಗಿದೆ. ಜೊತೆಗೆ 3.5mm ಆಡಿಯೋ ಜಾಕ್, ಫಿಂಗರ್ ಪ್ರಿಂಟ್ ಸ್ಕ್ಯಾನರ್ ನೀಡಲಾಗಿದೆ. ಮಾತ್ರವಲ್ಲದೆ, ಬ್ಲೂಟೂತ್ ವಿ5, ಎಲ್ಇಡಿ, ಡುಯೆಲ್ ಸಿಮ್, ವೈ-ಫೈ, ಹೆಚ್ಚುವರಿ ಲೇಸರ್ ಅಟೋಫೋಕಸ್ ಆಯ್ಕೆ ಕೂಡ ಇರಲಿದೆ. ಇದರ ಬೆಲೆ ಬೆಲೆ 23,600 ರೂ. ವೆಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.