ದೇಶಾದ್ಯಂತ ಕಾಂಗ್ರೆಸ್‌ಗೆ ದಯನೀಯ ಸ್ಥಿತಿ: ಸುರೇಶ ಕುಮಾರ್
Team Udayavani, Oct 24, 2019, 9:15 PM IST
ಬಾಗಲಕೋಟೆ:ದೇಶದಲ್ಲಿ ಕಾಂಗ್ರೆಸ್ ದಯನೀಯ ಸ್ಥಿತಿಗೆ ತಲುಪಿದೆ. ಆಡಳಿತ ಪಕ್ಷಕ್ಕೆ ಒಂದು ಉತ್ತಮವಾದ ವಿರೋಧ ಪಕ್ಷವೂ ದೇಶದಲ್ಲಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ್ ಹೇಳಿದರು.
ಪ್ರವಾಹದಿಂದ ಹಾನಿಗೊಳಗಾದ ಮುಧೋಳ ತಾಲೂಕಿನ ಒಂಟಗೋಡಿ ಶಾಲೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಇಂದು ಪ್ರಚಾರಕ್ಕೂ ಬರದೇ ಇರುವಂತಹ ದಯನೀಯ ಸ್ಥಿತಿಗೆ ಬಂದು ತಲುಪಿದೆ. ರಾಜ್ಯದಲ್ಲಿ, ದೇಶದಲ್ಲಿ ಉತ್ತಮ ವಿರೋಧ ಪಕ್ಷ ಇರಬೇಕು. ಅದನ್ನು ಉಳಿಸಿಕೊಳ್ಳುವುದು ಅವರಿಗೆ ಬಿಟ್ಟದ್ದು. ಮಹಾರಾಷ್ಟ್ರ, ಹರಿಯಾಣ ಚುನಾವಣೆ ಫಲಿತಾಂಶ ಕಾಂಗ್ರೆಸ್‌ಗೆ ಎಚ್ಚರಿಕೆಯ ಗಂಟೆಯಾಗಿದೆ. ಇನ್ನಾದರೂ ಅವರು ಎಚ್ಚೆತ್ತುಕೊಳ್ಳಬೇಕು ಎಂದರು.
ಮಹಾರಾಷ್ಟ್ರದಲ್ಲಿ ನಮಗೂ, ಶಿವಸೇನೆಗೂ ಹಳೆಯ ಸಂಬಂಧವಿದೆ. ಶಿವಸೇನೆ ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಟ್ಟಿರುವ ವಿಷಯ ನಮ್ಮ ನಾಯಕರು ಬಗೆಹರಿಸುತ್ತಾರೆ. ಪಠ್ಯ ಪುಸ್ತಕದಿಂದ ಟಿಪ್ಪು ಪಾಠ ತೆಗೆದು ಹಾಕುವ ಕುರಿತು ಮಾಜಿ ಸಚಿವ ಅಪ್ಪಚ್ಚು ರಂಜನ್ ಅವರು ಬರೆದಿದ್ದು ಇನ್ನೂ ನನಗೆ ಬಂದಿಲ್ಲ. ಪತ್ರ ಬರೆಯುವ ಹಕ್ಕು ಎಲ್ಲರಿಗೂ ಇದೆ. ಪತ್ರ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ನೆಲದ ಮೇಲೆ ಮಕ್ಕಳ; ಬಿಇಒಗೆ ಕ್ಲಾಸ್
ಒಂಟಗೋಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಳೆದ ಆಗಸ್ಟ್‌ನಲ್ಲಿ ಸುರಿದ ಮಳೆಯಿಂದ ಬಿರುಕುಬಿಟ್ಟು ಬೀಳುವ ಸ್ಥಿತಿ ತಲುಪಿದ್ದು, ಇಲ್ಲಿನ ಮಕ್ಕಳಿಗೆ ತಾತ್ಕಾಲಿಕ ಶೆಡ್‌ನಲ್ಲಿ ಪಾಠ ಮಾಡಲಾಗುತ್ತಿದೆ. ಈ ಸ್ಥಳಕ್ಕೆ ಡಿಸಿಎಂ ಗೋವಿಂದ ಕಾರಜೋಳ ಜತೆಗೆ ಭೇಟಿ ನೀಡಿದ ಸಚಿವ ಸುರೇಶಕುಮಾರ, ನೆಲದ ಮೇಲೆ ಮಕ್ಕಳನ್ನು ಕೂಡಿಸಿರುವುದು ಕಂಡು ಗರಂ ಆದರು. ಶೆಡ್ ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಲು ಬೋರ್ಡ್ ಇಲ್ಲ. ದಾನಿಗಳು ನೀಡಿದ ಮ್ಯಾಟ್ ಮಕ್ಕಳು ಕುಳಿತಕೊಳ್ಳಲು ಹಾಕಿಲ್ಲ ಎಂದು ಮುಧೋಳ ಬಿಇಒ ವಿಠuಲ ಅವರನ್ನು ತರಾಟೆಗೆ ತೆಗೆದುಕೊಂಡರು.
ಮಕ್ಕಳಿಂದ ಮಗ್ಗಿ ಹೇಳಿಸಿದ ಸಚಿವರು
ಒಂಟಗೋಡಿಯಲ್ಲಿ ಶೆಡ್‌ನಲ್ಲಿ ನಡೆಯುತ್ತಿರುವ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಸುರೇಶಕುಮಾರ, ಮಕ್ಕಳೊಂದಿಗೆ ಆತ್ಮೀಯವಾಗಿ ಬೆರೆತು ಅವರಿಂದ ಮಗ್ಗಿ ಹೇಳಿಸಿದರು. ಸಚಿವರು, ವಿದ್ಯಾರ್ಥಿಗಳತ್ತ ಬೊಟ್ಟು ಮಾಡಿ ನೀನು ಮಗ್ಗಿ ಹೇಳು ಎಂದು ಕೇಳುತ್ತಿದ್ದರು. ಈ ವೇಳೆ ಡಿಸಿಎಂ ಕಾರಜೋಳ ಸಹಿತ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.