ಅನರ್ಹರ ಅಳಲು ಆಲಿಸಲು ಸಿದ್ಧ : ಕಾಗೇರಿ
Team Udayavani, Oct 25, 2019, 5:52 AM IST
ಹೊಸದಿಲ್ಲಿ: ಕರ್ನಾಟಕ ವಿಧಾನಸಭೆಯ ಹಿಂದಿನ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಅನರ್ಹಗೊಳಿಸಿದ್ದ 17 ಶಾಸಕರ ಅಹವಾಲನ್ನು ಆಲಿಸಲು ತಾವು ಸಿದ್ಧರಿರುವುದಾಗಿ ಈಗಿನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸುಪ್ರೀಂ ಕೋರ್ಟ್ಗೆ ತಿಳಿಸಿದರು.
ಗುರುವಾರ ಸುಪ್ರೀಂ ಕೋರ್ಟ್ನಲ್ಲಿ ನಡೆದ ಅನರ್ಹ ಶಾಸಕರ ವಿಚಾರಣೆಯ ವೇಳೆ, ಕರ್ನಾಟಕ ವಿಧಾನಸಭಾ ಸ್ಪೀಕರ್ರವರ ಕಚೇರಿಯ ಪರವಾಗಿ ಹಾಜರಾಗಿದ್ದ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನ್ಯಾ| ಎನ್.ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ಈ ವಿಚಾರ ತಿಳಿಸಿದರು.
ಮಾಜಿ ಸಿಎಂ ಕುಮಾರಸ್ವಾಮಿ ಪರ ವಕೀಲರಾದ ರಾಜೀವ್ ಧವನ್, ಶಾಸಕರ ಅನರ್ಹತೆಗೆ ಕೋರಿ ಕಾಂಗ್ರೆಸ್, ಜೆಡಿಎಸ್ ಸಲ್ಲಿಸಿದ್ದ ಅರ್ಜಿಗಳಲ್ಲಿ ರಾಜೀನಾಮೆ ನೀಡಿರುವ ಎಲ್ಲ ಶಾಸಕರು ಸರಕಾರ ಉರುಳಿಸುವ ತಂತ್ರಗಾರಿಕೆಗೆ ಸಿಲುಕಿದ್ದಾರೆ ಎಂದು ಆರೋಪಿಸಿದಾಗ ಅದನ್ನು ಸ್ಪೀಕರ್ರವರು ಪರಿಗಣಿಸದೇ ಇರಲು ಹೇಗೆ ಸಾಧ್ಯ? ಎಂದು ಕೇಳಿದರು. ಆದರೆ ಇದಕ್ಕೆ ಶಾಸಕರ ಪರವಾದ ವಕೀಲರು, ನಿಯಮಗಳನುಸಾರ, ರಾಜೀನಾಮೆ ಹಿಂದಿನ ಉದ್ದೇಶಗಳನ್ನು ಪ್ರಶ್ನಿಸುವ ಹಾಗಿಲ್ಲ ಎಂದು ವಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.