ಕೇಸರಿ ಮೈತ್ರಿಗೆ ಮಹಾರಾಷ್ಟ್ರ; ಹರಿಯಾಣ ಅತಂತ್ರ

ಮಹಾರಾಷ್ಟ್ರದಲ್ಲಿ ದೇವೇಂದ್ರಗೆ ಆನಂದ ಹರಿಯಾಣದಲ್ಲಿ ಸಿಗದ ಮನೋಹರ ಫ‌ಲಿತಾಂಶ

Team Udayavani, Oct 25, 2019, 6:14 AM IST

q-90

2019ರ ಲೋಕಸಭೆ ಚುನಾವಣೆ ಅನಂತರ ದೇಶದಲ್ಲಿ ಎದುರಾದ ಮೊದಲ ವಿಧಾನಸಭೆ ಚುನಾವಣೆಯಲ್ಲಿ ಮತದಾರ ಎಚ್ಚರಿಕೆಯ ತೀರ್ಪು ನೀಡಿದ್ದಾನೆ. ಮಹಾರಾಷ್ಟ್ರದಲ್ಲಿ ಭಾರೀ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಕಳೆದ ಬಾರಿಗಿಂತಲೂ ಕಡಿಮೆ ಸ್ಥಾನ ಸಿಕ್ಕಿದೆ. ಹಾಗೆಯೇ ಹರಿಯಾಣದಲ್ಲಿ 70+ ಸ್ಥಾನಗಳನ್ನು ಗೆಲ್ಲುವುದಾಗಿ ಹೇಳುತ್ತಿದ್ದ ಬಿಜೆಪಿಗೆ ದೊಡ್ಡ ಪೆಟ್ಟು ಬಿದ್ದಿದೆ. ಕೇವಲ 40 ಸ್ಥಾನಗಳಲ್ಲಿ ಗೆಲ್ಲುವ ಮೂಲಕ, ಬಹುಮತಕ್ಕೆ ಆರು ಸ್ಥಾನಗಳ ಕೊರತೆ ಎದುರಾಗಿದೆ.

ಮುಂಬಯಿ/ಚಂಡೀಗಢ: ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭೆ ಚುನಾವಣ ಫ‌ಲಿತಾಂಶ ಹೊರಬಿದ್ದಿದ್ದು, ಬಿಜೆಪಿಗೆ ಸಿಹಿ ಮತ್ತು ಕಹಿಯ ಮಿಶ್ರ ಅನುಭವವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಅವರ ಆಡಳಿತಕ್ಕೆ ಜನ ಜೈ ಅಂದಿದ್ದರೂ, ಬಿಜೆಪಿಗೆ ನಿರೀಕ್ಷಿಸಿದಷ್ಟು ಸ್ಥಾನ ಬಂದಿಲ್ಲ. ಈ ಬಾರಿ ಸ್ವತಂತ್ರವಾಗಿಯೇ 145ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂಬ ಗುರಿ ಹೊಂದಿದ್ದ ಬಿಜೆಪಿಯ ಕನಸಿಗೆ ಮತದಾರ ಸೈ ಅಂದಿಲ್ಲ. ಆದರೆ ಬಿಜೆಪಿ ಮತ್ತು ಶಿವಸೇನೆ ಮೈತ್ರಿಕೂಟಕ್ಕೆ 161 ಸ್ಥಾನ ಗಳನ್ನು ನೀಡುವ ಮೂಲಕ ಸರಕಾರ ರಚನೆಗೆ ಯಾವುದೇ ಅಡ್ಡಿಯನ್ನುಂಟು ಮಾಡಿಲ್ಲ.

ಅಂತೆಯೇ ಅತ್ತ ಹರಿಯಾಣದಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡಕ್ಕೂ ನಿರೀಕ್ಷಿತ ಫ‌ಲಿತಾಂಶ ಸಿಕ್ಕಿಲ್ಲ. 70+ ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಿದ್ದ ಬಿಜೆಪಿ ತೀವ್ರ ನಿರಾಸೆ ಅನುಭವಿಸಿದೆ. ಕಳೆದ ಬಾರಿ 47ರಲ್ಲಿ ಗೆದ್ದಿದ್ದ ಕಮಲ ಪಕ್ಷ ಈ ಬಾರಿ ಕೇವಲ 40 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಇದಕ್ಕಿಂತ ಹೆಚ್ಚಾಗಿ ಚಿಗುರು ಮೀಸೆಯ ಯುವಕ ದುಷ್ಯಂತ್‌ ಚೌಟಾಲ ಅವರ ಜನನಾಯಕ ಜನತಾ ಪಾರ್ಟಿ (ಜೆಜೆಪಿ) 10 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕಿಂಗ್‌ ಮೇಕರ್‌ ಸ್ಥಾನದಲ್ಲಿದ್ದಾರೆ. ಇನ್ನೂ ವಿಶೇಷವೆಂದರೆ ಯಾರೂ ನಿರೀಕ್ಷಿಸಿರದ ರೀತಿಯಲ್ಲಿ ಮತದಾರ ಕಾಂಗ್ರೆಸ್‌ಗೆ 31 ಸ್ಥಾನಗಳನ್ನು ನೀಡುವ ಮೂಲಕ ಭೂಪಿಂದರ್‌ ಸಿಂಗ್‌ ಹೂಡಾ ಮೇಲೂ ಆಶೀರ್ವಾದ ತೋರಿದ್ದಾನೆ. ಆದರೆ ಒಂಬತ್ತು ಸ್ಥಾನಗಳಲ್ಲಿ ಇತರರು ಗೆದ್ದಿದ್ದು, ಇವರೇನಾದರೂ ಬಿಜೆಪಿ ಕಡೆಗೆ ಹೋದರೆ ಸರಕಾರ ರಚನೆ ಸಲೀಸಾಗಬಹುದು. ಫ‌ಲಿತಾಂಶ ಹೊರಬೀಳುತ್ತಿದ್ದಂತೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಅವರು ಮತದಾರರಿಗೆ ಧನ್ಯವಾದ ಹೇಳಿದ್ದಾರೆ.

ಮಹಾರಾಷ್ಟ್ರ: ಕಸರತ್ತು ಶುರು
ಎರಡೂ ರಾಜ್ಯಗಳಲ್ಲೂ ಸರಕಾರ ರಚನೆಯ ಕಸರತ್ತು ಶುರುವಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಜತೆ ಮೈತ್ರಿ ಮಾಡಿಕೊಂಡಿರುವ ಶಿವಸೇನೆ ಚೌಕಾಸಿ ಶುರು ಮಾಡಿದೆ. ಈ ಬಾರಿ 50-50ರ ಮಾದರಿಯಲ್ಲೇ ಸರಕಾರ ರಚನೆಯಾಗಬೇಕು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಪಟ್ಟು ಹಿಡಿದಿದ್ದಾರೆ. ಅಂದರೆ ಸಚಿವ ಸ್ಥಾನದಲ್ಲೂ ಅರ್ಧ ಮತ್ತು ಮುಖ್ಯಮಂತ್ರಿ ಸ್ಥಾನವೂ ತಲಾ ಎರಡೂವರೆ ವರ್ಷ ಸಿಗಬೇಕು ಎಂದಿದ್ದಾರೆ. ಸೀಟು ಹಂಚಿಕೆಯಲ್ಲಿ ಕಡಿಮೆ ಸ್ಥಾನದಲ್ಲಿ ಸ್ಪರ್ಧಿಸಲು ಒಪ್ಪಿಕೊಂಡೆವು ಎಂದಾಕ್ಷಣ ಸರಕಾರ ರಚನೆ ಸಂದರ್ಭದಲ್ಲೂ ಬಾಗುತ್ತೇವೆ ಎಂದರ್ಥವಲ್ಲ ಎಂದಿದ್ದಾರೆ.

ಹರಿಯಾಣ: ಜಂಜಾಟ ಆರಂಭ
ಹರಿಯಾಣದಲ್ಲಿ ಯಾರೊಬ್ಬರಿಗೂ ಬಹುಮತ ಬಾರದ ಹಿನ್ನೆಲೆಯಲ್ಲಿ ಸರಕಾರ ರಚನೆಯ ಜಂಜಾಟ ಶುರುವಾಗಿದೆ. ಮುಖ್ಯಮಂತ್ರಿ ಮನೋಹರ್‌ ಖಟ್ಟರ್‌ ಅವರು ಗುರುವಾರ ಸಂಜೆಯೇ ರಾಜ್ಯಪಾಲರನ್ನು ಭೇಟಿಯಾಗಿ ಹಕ್ಕು ಮಂಡಿಸಿದ್ದಾರೆ. ಮೂಲಗಳ ಪ್ರಕಾರ ಬಿಜೆಪಿಗೆ ಸ್ವತಂತ್ರ ಅಭ್ಯರ್ಥಿಗಳು ಬೆಂಬಲ ನೀಡುವ ಸಾಧ್ಯತೆ ಇದೆ. ಇದರ ನಡುವೆಯೇ ಕಾಂಗ್ರೆಸ್‌ ಕೂಡ ಸರಕಾರ ರಚನೆಯ ಕಸರತ್ತು ಶುರು ಮಾಡಿದ್ದು, ಜೆಜೆಪಿ ನಾಯಕ ದುಷ್ಯಂತ್‌ ಚೌಟಾಲ ಅವರ ಓಲೈಕೆಯಲ್ಲಿ ತೊಡಗಿದೆ. ಆದರೆ ಚೌಟಾಲ ಮಾತ್ರ ಯಾರ ಕಡೆಗೂ ಇನ್ನೂ ವಾಲಿಲ್ಲ.

ಮಹಾರಾಷ್ಟ್ರ ಮತ್ತು ಹರಿಯಾಣದ ಜನ ಅಲ್ಲಿನ ಸಿಎಂಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ಮುಂದೆಯೂ ಅವರಿಬ್ಬರೂ ಇನ್ನಷ್ಟು ಶ್ರಮದಿಂದ ಕೆಲಸ ಮಾಡಲಿದ್ದಾರೆ.
-ನರೇಂದ್ರ ಮೋದಿ, ಪ್ರಧಾನಿ

ಟಾಪ್ ನ್ಯೂಸ್

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.