ರಾಶಿಗೆ ಬಂದ ಲಕ್ಷಾಂತರ ಮೌಲ್ಯದ ಬೆಳೆ ಹಾನಿ

ನೀರಿನ ರಭಸಕ್ಕೆ ಸೇತುವೆ ಕೊಚ್ಚಿ ಸಂಪರ್ಕ ಕಡಿತವಿ.ಕೆ. ಸಲಗರ ಮಾರ್ಗದ ರಸ್ತೆ ತಾತ್ಕಾಲಿಕ ದುರಸ್ತಿ

Team Udayavani, Oct 25, 2019, 10:52 AM IST

25-October–1

ಮಹಾದೇವ ವಡಗಾಂವ
ಆಳಂದ: ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಶಿಗೆ ಬಂದಿದ್ದ ಸೋಯಾಬಿನ್‌, ಎಳ್ಳು, ಸೂರ್ಯಕಾಂತಿ ಸೇರಿದಂತೆ ಇನ್ನಿತರ ಬೆಳೆ ನೀರಿಗೆ ನೆನೆದು ಲಕ್ಷಾಂತರ ರೂ. ಹಾನಿಯಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ, ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮಳೆ ನೀರಿನ ರಭಸಕ್ಕೆ ತಾಲೂಕಿನ ಅಲ್ಲಲ್ಲಿನ ರಸ್ತೆಗಳಿಗೆ ಹಾನಿಯಾದರೆ, ಮತ್ತೊಂದೆಡೆ ನಂದಗೂರ ಕೋತನಹಿಪ್ಪರಗಾ ಸೇತುವೆ ರಸ್ತೆ ಕೊಚ್ಚಿ ಸಂಪರ್ಕ ಕಡಿತಗೊಂಡಿದೆ.

ಇನ್ನೊಂದೆಡೆ ಕಣಮಸ್‌ ತಡಕಲ್‌ ಮಾರ್ಗದಲ್ಲಿನ ಎರಡ್ಮೂರು ತಿಂಗಳ ಹಿಂದೆಯೇ ಸೇತುವೆ ಭಾಗಶಃ ಕೊಚ್ಚಿಹೋಗಿ ವಾಹನ ಸಂಪರ್ಕ ಕಡಿತಗೊಂಡಿದ್ದರೂ ಸಂಬಂಧಪಟ್ಟ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ.
ಸಂಪರ್ಕ ಕಡಿತದಿಂದ ಪ್ರಯಾಣಿಕರು, ವಾಹನ ಸವಾರರು ಮಾರ್ಗ ಬದಲಿಸಿ ಸಂಚರಿಸುವಂತೆ ಆಗಿದೆ.

ರಾಜ್ಯ ಹೆದ್ದಾರಿ 34 ಪಟ್ಟಣದಿಂದ ವಿ.ಕೆ. ಸಲಗರ ಮಾರ್ಗದಲ್ಲಿನ ಹೊರವಲಯದ ಸೇತುವೆ ಹತ್ತಿರ ಹದಗೆಟ್ಟ ರಸ್ತೆಯ ತಾತ್ಕಾಲಿಕ ದುರಸ್ತಿ ಕಾರ್ಯವನ್ನು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ. ಇನ್ನೊಂದೆಡೆ ಗಾಣಗಾಪುರ-ಆಳಂದ ಮಾರ್ಗದ ಬಟ್ಟರಗಾ ಮತ್ತು ನಿಂಬರಗಾ ಮಧ್ಯದ ಸೇತುವೆಯಲ್ಲಿ ನೀರಿನ ರಭರಸಕ್ಕೆ ದೊಡ್ಡ ಗಾತ್ರದ ಗುಂಡಿಯೊಂದು ಬಿದ್ದಿದೆ. ಹೀಗಾಗಿ ಕಳೆದ ಮೂರು ದಿನಗಳಿಂದ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.

ದೂರದ ನೆರೆಹೊರೆ ಪ್ರಯಾಣಿಕರು, ವಾಹನ ಸವಾರರು, ವಿದ್ಯಾರ್ಥಿಗಳು ಇದರಿಂದ ಪರದಾಡುವಂತೆ ಆಗಿದೆ. ರಾಶಿಗೆ ಬಂದಿದ್ದ ಸೋಯಾಬಿನ್‌, ಸೂರ್ಯಕಾಂತಿ, ಎಳ್ಳನ್ನು ಅನೇಕ ರೈತರು ಕೊಯ್ಲು ಮಾಡಿದ್ದರು. ಆದರೆ ಮಳೆ ನೀರಿಗೆ ಇವುಗಳು ನೆನೆದು ಧಾನ್ಯ ಕೈಗೆ ಬಾರದೆ ನಷ್ಟ ಅನುಭವಿಸುವಂತೆ ಆಗಿದೆ. ಇನ್ನು ಅನೇಕ ಹೊಲಗಳಲ್ಲಿ ಬೆಳೆಯಲ್ಲ ಕೊಳೆತು ನಷ್ಟವಾಗಿದೆ. ಆಳಂದ ಸೇರಿದಂತೆ ಹಳ್ಳದ ದಡದ ಹೊಲಗಳಲ್ಲಿ ನೀರಿನ ಒತ್ತಡಕ್ಕೆ ಫಲವತ್ತಾದ ಮಣ್ಣು ಕೊಚ್ಚಿ ಹೋಗಿ, ಬೆಳೆ ಹಾಳಾಗಿದೆ. ಅಲ್ಲದೇ, ಭೂಮಿಯಲ್ಲಿ ತೆಗ್ಗುದಿನ್ನೆಬಿದ್ದು, ಕೃಷಿ ಚಟುವಟಿಕೆಗೆ ಅಡಚಣಿ ಆಗಿದೆ.

ಟಾಪ್ ನ್ಯೂಸ್

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.