ಸಂಶೋಧನಾ ವಿದ್ಯಾರ್ಥಿಗಳ ಅನಿರ್ದಿಷ್ಟ ಮುಷ್ಕರ
ಮುಷ್ಕರಕ್ಕೆ ವಿವಿಧ ಸಂಘಟನೆಗಳ ಬೆಂಬಲ ಹೋರಾಟ ಹತ್ತಿಕ್ಕುವ ಯತ್ನ: ಆರೋಪ
Team Udayavani, Oct 25, 2019, 12:55 PM IST
ಹೊಸಪೇಟೆ: ಸಹಾಯಧನ ಬಿಡುಗಡೆಗಾಗಿ ಆಗ್ರಹಿಸಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ವಿಶ್ವ ವಿದ್ಯಾಲಯ ಗೇಟ್-ಬಿ ಬಳಿ ಗುರುವಾರ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.
ಸಂಶೋಧನಾ ವಿದ್ಯಾರ್ಥಿಗಳ ಬಾಕಿ ಉಳಿಸಿಕೊಂಡಿರುವ ಮಾಸಿಕ ಸಹಾಯ ಧನ ಹಾಗೂ ಅಪೂ ರ್ಣಗೊಂಡ ಎಸ್‌ಸಿ, ಎಸ್‌ಟಿ ವಸತಿ ನಿಲಯ ಪೂರ್ಣಗೊಳಿಸುವುದು ಹಾಗೂ ಬಿಸಿಎಂ ವಸತಿ ನಿಲಯಕ್ಕೆ ನೂತನ ಕಟ್ಟಡ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ನಗರದ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಮುಷ್ಕರ ನಡೆಸಿದರು.
ವಿದ್ಯಾರ್ಥಿಗಳನ್ನು ಪ್ರಚೋದಿಸಿ, ಆಡಳಿತ ಕಾರ್ಯ ಚಟುವಟಿಕೆಗೆ ಅಡ್ಡಿ ಪಡಿಸಿದ ಆರೋಪದ ಮೇಲೆ ವಿದ್ಯಾರ್ಥಿ ಮುಖಂಡರ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಬುಧವಾರ ಉಪಕುಲಪತಿ ಸುಬ್ಬಣರೈ ದೂರು ದಾಖಲಿಸಿ ದ್ದಾರೆ. ಆದರೆ, ವಿದ್ಯಾರ್ಥಿಗಳ ಹೋರಾಟ ಹತ್ತಿ ಕ್ಕಲು, ವಿದ್ಯಾರ್ಥಿ ಮುಖಂಡರ ವಿರುದ್ಧ ದೂರು ನೀಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಿವಿಧ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ.
ಬೇಡಿಕೆಗಾಗಿ ಹಲವು ಬಾರಿ ವಿದ್ಯಾರ್ಥಿಗಳು ಕುಲಪತಿ ಮತ್ತು ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿ ಒತ್ತಾಯ ಮಾಡಿದ್ದರು. ವಿಶ್ವದ್ಯಾಲಯದ ಆಡಳಿತ ಕಚೇರಿಯ ಮುಂದೆ ಹೋರಾಟ ನಡೆಸಿದ್ದರು. ಕುಲಪತಿಗಳ ಭರವಸೆ ಮೇರೆಗೆ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದಿದ್ದರು.
ಈ ನಡುವೆ ವಿಭಾಗಗಳಿಗೆ ನೀಡಿದ ಸುತ್ತೋಲೆಯಲ್ಲಿ ಎಸ್ಸಿ ಸಂಶೋಧನಾರ್ಥಿಗಳಿಗೆ ಒಂದು ತಿಂಗಳು ಹಾಗೂ ಎಸ್ಟಿ ಸಂಶೋಧನಾರ್ಥಿಗಳಿಗೆ ಎರಡು ತಿಂಗಳು ಮಾತ್ರ ಸಹಾಯಧನ ನೀಡಲಾಗುತ್ತದೆ ಸೂಚಿಸಲಾಗಿತ್ತು.
ನಂತರ ಕಳೆದ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಮಾಸಿಕ ಸಹಾಯಧನ ನೀಡಲು ಮುಂದಾಗಿತ್ತು. 2016-17ನೇ ಸಾಲಿನಲ್ಲಿ ನಾಲ್ಕು ತಿಂಗಳು ಮತ್ತು 2017-18ನೇ ಸಾಲಿನಲ್ಲಿ 19 ತಿಂಗಳ ಮಾಸಿಕ ಸಹಾಯಧನವನ್ನು ಕೂಡಲೇ ಹಣ ವಿತರಣೆ ಮಾಡ ಬೇಕು ಎಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ.
ಬೇಡಿಕೆ: ಕನ್ನಡ ವಿಶ್ವವಿದ್ಯಾಲಯವು ಬಾಕಿ ಉಳಿಸಿಕೊಂಡಿರುವ ಎಸ್ಸಿ, ಎಸ್ಟಿ ಸಂಶೋಧನಾರ್ಥಿಗಳ ಸಹಾಯಧನವನ್ನು ಕೂಡಲೇ ನೀಡಬೇಕು. ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ ಇಲಾಖೆಗಳು ನೀಡುವಂತೆ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೂ ಆನ್‌ಲೈನ್ ಮೂಲಕವೇ ಮಾಸಿಕ ಸಹಾಯಧನವನ್ನು ನೀಡಬೇಕು.
ಮೂರು ವರ್ಷಗಳ ಬದಲಿಗೆ ಐದು ವರ್ಷಗಳಿಗೆ ಹೆಚ್ಚಿಸಬೇಕು. ಸಂಶೋಧನಾರ್ಥಿಗಳಿಗೆ ಈಗ ನೀಡುತ್ತಿರುವ ಆರ್ಥಿಕ ಸಹಾಯಧನವನ್ನು 10 ಸಾವಿರದಿಂದ 20 ಸಾವಿ ರ ರೂಗೆ ಹೆಚ್ಚಿಸಬೇಕು. ನಿರ್ಮಾಣ ಹಂತದಲ್ಲಿರುವ ವಸತಿ ನಿಲಯವನ್ನು ಈ ಕೂಡಲೇ ತೆರೆದು ಎಸ್ಸಿ ಎಸ್ಟಿ ಸಂಶೋಧನಾರ್ಥಿಗಳಿಗೆ ವಸತಿ ನಿಲಯ ವ್ಯವಸ್ಥೆ ಕಲ್ಪಿಸಬೇಕು. ಹಿಂದುಳಿದ ವರ್ಗದ ಸಂಶೋಧನಾರ್ಥಿಗಳಿಗೆ ವಸತಿ ನಿಲಯದ ಹೊಸ ಕಟ್ಟಡವನ್ನು ನಿರ್ಮಿಸಿ ಸೌಲಭ್ಯ ಕಲ್ಪಿಸಬೇಕು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯು ಈ ಭಾಗದ ಎಸ್ಸಿ, ಎಸ್ಟಿ ಓಬಿಸಿ ಮತ್ತು ಮೈನಾರಿಟಿ ಸಂಶೋಧನಾರ್ಥಿಗಳಿಗೆ ಸಂಶೋಧನೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಸಹಾಯಧನವನ್ನು ಮತ್ತು ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅನುದಾನವನ್ನು ನೀಡಬೇಕು.
ಇತರೆ ವಿಶ್ವವಿದ್ಯಾಲಯಗಳಿಗೆ ಇರುವಂತೆ ಕನ್ನಡ ವಿಶ್ವವಿದ್ಯಾಲಯಕ್ಕೆ ಅನ್ಯ ಆದಾಯ ಮೂಲಗಳು ಇಲ್ಲದೆ ಇರುವುದರಿಂದ ಮತ್ತು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡುವ ಸಲುವಾಗಿ ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಹೆಚ್ಚಿನ ಅನುದಾನವನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಭಾರತ ವಿದ್ಯಾರ್ಥಿ ಫೆಡರೇಶನ್, ಅಖೀಲ ಭಾರತ ವಿದ್ಯಾರ್ಥಿ ಫೆಡರೇಶನ್, ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್, ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳ ಮುಷ್ಕರದಲ್ಲಿ ಭಾಗಿಯಾಗಿವೆ. ಎಸ್‌ಎಫ್ಐ ರಾಜ್ಯಾಧ್ಯಕ್ಷ ವಿ.ಅಂಬರೀಷ್, ರಾಜ್ಯ ಕಾರ್ಯದರ್ಶಿ ರಮೇಶ್ ನಾಯಕ್, ಎಐ ಡಿ ಎಸ್‌ಓ ಜಿಲ್ಲಾಧ್ಯಕ್ಷ ಸುರೇಶ್, ಕೆವಿಎಸ್ ರಾಜ್ಯ ಸಂಚಾಲಕ ಸರೋವರ ಬೆಂಕಿಕೆರೆ ಇತರರು ಮುಂಚೂಣಿಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.