ಬೆಂಬೆಲೆ ಕೊಟ್ಟರೂ ಹೇಳ ಹೆಸರಿಲ್ಲದಂತಾಯ್ತು!


Team Udayavani, Oct 25, 2019, 1:03 PM IST

huballi-tdy-3

ಧಾರವಾಡ: ಪ್ರತಿ ವರ್ಷ ಹೆಸರು ಬೆಳೆಗೆ ಬೆಂಬಲ ಬೆಲೆ ಕೊಡಿ ಎಂದು ದುಂಬಾಲು ಬಿದ್ದರೂ ರೈತರಿಗೆ ಸರ್ಕಾರದಿಂದ ಸಕಾಲಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿರಲಿಲ್ಲ. ಆದರೆ ಈ ವರ್ಷ ಬೆಂಬಲ ಬೆಲೆಯಡಿ ಹೆಸರು ಕಾಳು ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಣಿ ಪ್ರಕ್ರಿಯೆ ಮುಕ್ತಾಯಗೊಂಡು ಖರೀದಿ ಪ್ರಕ್ರಿಯೆಗೆ ಚಾಲನೆ ದೊರೆತಿದ್ದರೂ, ಹೆಸರು ಬೆಳೆ ಇಲ್ಲದೇ ಇರುವುದರಿಂದ ರೈತರಿಂದ ಉತ್ತಮ ಸ್ಪಂದನೆ ದೊರೆಯದಂತಾಗಿದೆ.

ಕಳೆದ ಬಾರಿ 1.35 ಲಕ್ಷ ರೈತರು ಹೆಸರು ಬೆಳೆ ಮಾರಾಟಕ್ಕಾಗಿ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿದ್ದರು. ಆದರೆ ಈ ಸಲ ಇಡೀ ರಾಜ್ಯದಲ್ಲಿ ನೋಂದಣಿ ಮಾಡಿದ ರೈತರ ಸಂಖ್ಯೆ ಕೇವಲ 29,311. ನೆರೆ ಹೊಡೆತಕ್ಕೆ ಹೆಸರು ಕೈಗೆ ಬಾರದೇ ಹಾಳಾಗಿದ್ದು, ಅಳಿದುಳಿದ ಬೆಳೆಗೆ ಗುಣಮಟ್ಟದ ನಿಯಮಗಳ ಸಹವಾಸ ಬೇಡವೇ ಬೇಡ ಎನ್ನುತಿದ್ದಾರೆ.

ಈಗ ಹೆಸರು ಬೆಳೆ ಮಾರಾಟ ಮಾಡಿದರೆ ಬೆಳೆ ವಿಮೆ ಸಿಗದು ಎಂಬ ಲೆಕ್ಕಾಚಾರದಿಂದಲೂ ಹೆಸರು ಮಾರಾಟಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಕಳೆದ ಬಾರಿ ರಾಜ್ಯದಲ್ಲಿ 23 ಸಾವಿರ ಮೆಟ್ರಿಕ್‌ ಟನ್‌ ಹೆಸರು ಖರೀದಿಗೆ ಚಾಲನೆ ನೀಡಿ, ಜಿಲ್ಲೆಗಳ ಆಯಾ ಕೇಂದ್ರಗಳಿಗೆ ಇಂತಿಷ್ಟು ಪ್ರಮಾಣ ನಿಗದಿ ಮಾಡಿ ಅಷ್ಟೇ ಖರೀದಿ ಮಾಡುವಂತೆ ಸೂಚಿಸಲಾಗಿತ್ತು. ಆದರೆ ರೈತರಿಂದ ಖರೀದಿ ಪ್ರಮಾಣ ಹೆಚ್ಚಿಸುವಂತೆ ಒತ್ತಡ ಹೆಚ್ಚಾಗಿದ್ದರಿಂದ ರಾಜ್ಯ ಸರ್ಕಾರ ಒಟ್ಟು 27,500 ಮೆಟ್ರಿಕ್‌ ಟನ್‌ ಹೆಸರು ಖರೀದಿ ಮಾಡಿತ್ತು. ಈ ಸಲ ನೆರೆ ಹೊಡೆತಕ್ಕೆ ಹೆಸರು ಬೆಳೆ ಕೈ ಕೊಟ್ಟಿರುವುದನ್ನು ಅರಿತಿರುವ ಕೇಂದ್ರ ಸರ್ಕಾರವು ರಾಜ್ಯದಿಂದ 12 ಸಾವಿರ ಮೆಟ್ರಿಕ್‌ ಟನ್‌ ಖರೀದಿಗೆ ಅಷ್ಟೇ ಅವಕಾಶ ಮಾಡಿ ಕೊಟ್ಟಿದೆ. ಇದಲ್ಲದೇ ರಾಜ್ಯದ ಯಾವ ಖರೀದಿ ಕೇಂದ್ರಗಳಿಗೂ ಇಂತಿಷ್ಟೇ ಪ್ರಮಾಣದಲ್ಲಿ ಖರೀದಿಸುವಂತೆ ನಿಗದಿಯನ್ನೂ ಮಾಡಿಲ್ಲ. ಆರಂಭಗೊಳ್ಳದ ಖರೀದಿ: ಅ.2ರಿಂದ ಹೆಸರು ನೋಂದಣಿ ಆರಂಭಗೊಂಡು 9ರೊಳಗೆ ಮುಕ್ತಾಯಗೊಳ್ಳಬೇಕಿತ್ತು. ಆದರೆ ಹೆಸರು ನೋಂದಣಿ ಮಾಡಬೇಕಾದ ಸಾಫ್ಟ್‌ವೇರ್‌ ತಡವಾಗಿ ಬಂದಿದ್ದರಿಂದ ಅ.8ರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿತ್ತು. ಹೀಗಾಗಿ ಅ.19ರವರೆಗೆ ನೋಂದಣಿಗೆ ಅವಕಾಶ ಮಾಡಿಕೊಡಲಾಗಿತ್ತು. ಅದರಂತೆ ಈಗ ನೋಂದಣಿ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅ.20ರಿಂದಲೇ ಖರೀದಿ ಆರಂಭ ಮಾಡುವಂತೆ ಎಲ್ಲ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ. ಅ.20 ರವಿವಾರ ರಜೆ ಹಿನ್ನೆಲೆಯಲ್ಲಿ ಸೋಮವಾರದಿಂದ ಖರೀದಿ ಪ್ರಕ್ರಿಯೆ ಆರಂಭಗೊಂಡಿದ್ದರೂ ರೈತರಿಂದ ಸ್ಪಂದನೆ ಲಭಿಸಿದಂತಾಗಿದೆ.

ರೈತರು ಮಾರಾಟ ಮಾಡಿದ ಹೆಸರನ್ನು ತುಂಬಿ ಇಡಲು ಖಾಲಿ ಚೀಲಗಳು ಕೇಂದ್ರಗಳಿಗೆ ಬಂದಿದ್ದು, ಆದರೆ ಹೆಸರು ಮಾರಾಟಕ್ಕೆ ಕೇಂದ್ರಗಳತ್ತ ಹೆಜ್ಜೆ ಹಾಕಲು ರೈತರು ಹಿಂದೇಟು ಹಾಕುತ್ತಿದ್ದಾರೆ. ಇದಲ್ಲದೇ ಖರೀದಿ ಕೇಂದ್ರಗಳಲ್ಲಿ ಗ್ರೇಡಿಂಗ್‌ ಕಾರ್ಯ ಮಾಡಲು ನೇಮಕಗೊಂಡ ಕೃಷಿ ಇಲಾಖೆ ಸಿಬ್ಬಂದಿಯೂ ಕೇಂದ್ರಗಳತ್ತ ಮುಖ ಮಾಡಿಲ್ಲ. ಹೀಗಾಗಿ ಖರೀದಿ ಕೇಂದ್ರಗಳಿಗೆ ಬರುವ ರೈತರಿಂದ ಮಾದರಿ ಕಾಳನ್ನು ತೆಗೆದುಕೊಂಡು, ಅವರ ಮಾಹಿತಿ ಪಡೆದು ಸಂಗ್ರಹಿಸಿ ಇಟ್ಟಿಕೊಳ್ಳುವ ಕೆಲಸವಷ್ಟೇ ಕೇಂದ್ರದ ಸಿಬ್ಬಂದಿ ಮಾಡುತ್ತಿದ್ದಾರೆ. ಗ್ರೇಡಿಂಗ್‌ ಕಾರ್ಯ ಮುಗಿದ ಬಳಿಕವೇ ಗುಣಮಟ್ಟದ ಹೆಸರು ಕಾಳಿನ ಖರೀದಿ ಆರಂಭಗೊಳ್ಳಲಿದ್ದು, ಸಂಬಂಧಪಟ್ಟವರು ಇತ್ತ ಲಕ್ಷ್ಯ ವಹಿಸಬೇಕಿದೆ.

ಗುಣಮಟ್ಟದ ಕೊರತೆ : ಎಫ್‌ಎಕ್ಯೂ ಗುಣಮಟ್ಟದ ಕಾಳು ಖರೀದಿಸುವ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿದ ರೈತರು ತಂದ ಕಾಳಿನಲ್ಲಿ ಅತಿಯಾದ ಮಳೆ ಹಿನ್ನೆಲೆಯಲ್ಲಿ ತೇವಾಂಶ ಹೆಚ್ಚಾಗಿದೆ. ಇದೇ ಕಾರಣವೊಡ್ಡಿ ಕಾಳು ತಿರಸ್ಕರಿಸುತ್ತಿರುವುದು ರೈತರ ಕೆಂಗಣ್ಣಿಗೆ ಗುರಿ ಆಗಿದೆ. ಹುಬ್ಬಳ್ಳಿಯ ಅಮರಗೋಳದ ಖರೀದಿ ಕೇಂದ್ರದಲ್ಲಿ ಮಂಗಳವಾರ ಈ ಕಾರಣದಿಂದಲೇ ರೈತರು ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ. ಈ ರೀತಿಯ ಗಲಾಟೆಗಳು ಬಹುತೇಕ ಎಲ್ಲ ಕೇಂದ್ರಗಳಲ್ಲಿ ನಡೆಯುತ್ತಿವೆ

ಟಾಪ್ ನ್ಯೂಸ್

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

accident

Vitla: ರಿಕ್ಷಾ- ಬೈಕ್‌ ಢಿಕ್ಕಿ; ಮೂವರಿಗೆ ಗಾಯ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.