ಅನುದಾನವಿದೆ; ಸ್ಥಳವಿಲ್ಲ

ಈಗಿನ ಕಟ್ಟಡದಲ್ಲಿ ಓದುಗರಿಗೆ ಜಾಗ-ಬೆಳಕಿನ ಕೊರತೆ „ ಸೌಲಭ್ಯ ಮರೀಚಿಕೆ

Team Udayavani, Oct 25, 2019, 5:36 PM IST

25-October–29

ಬಳಗಾನೂರು: ಪಟ್ಟಣದ ಶ್ರೀ ಬಸವೇಶ್ವರ ವೃತ್ತದ ಬಳಿ ಪಟ್ಟಣ ಪಂಚಾಯಿತಿ ಕಟ್ಟಡವೊಂದರಲ್ಲಿ ನಡೆಯುತ್ತಿರುವ ಗ್ರಂಥಾಲಯ ಸ್ವಂತ ಕಟ್ಟಡ, ಜಾಗೆ,
ಗಾಳಿ-ಬೆಳಕಿನ ಕೊರತೆ ಎದುರಿಸುತ್ತಿದೆ.

ಹೀಗಾಗಿ ಗ್ರಂಥಾಲಯಕ್ಕೆ ಒದುಗರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಬಳಗಾನೂರು ಮಂಡಲ ಪಂಚಾಯಿತಿ, ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಈ ಮೂರು ಆಡಳಿತದಲ್ಲಿ ಇಲ್ಲಿನ ಗ್ರಂಥಾಲಯ ಅಭಿವೃದ್ಧಿಯಿಂದ ವಂಚಿತಗೊಂಡಿದೆ.

1989ರಲ್ಲಿ ಬಳಗಾನೂರಲ್ಲಿ ಮಂಡಲ ಪಂಚಾಯಿತಿ ಆಡಳಿತವಿತ್ತು. ನಂತರ ಗ್ರಾಮ ಪಂಚಾಯಿತಿಯಾಗಿತ್ತು. ಸುಮಾರು 20 ವರ್ಷ ಗ್ರಾಮ ಪಂಚಾಯಿತಿ ಆಡಳಿತವಿತ್ತು. ಈಗ ಕಳೆದ ಮೂರು ವರ್ಷಗಳಿಂದ ಪಟ್ಟಣ ಪಂಚಾಯಿತಿಯಾಗಿ ಬಡ್ತಿ ಪಡೆದಿದೆ. ಆದರೂ ಗ್ರಂಥಾಲಯ ಮಂಡಲ ಪಂಚಾಯಿತಿ ಅವಧಿಯಲ್ಲಿದ್ದಂತೆಯೇ ಇದೆ. 2011-12ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿ ಆಡಳಿತಾವಧಿಯಲ್ಲಿ ರಾಜ್ಯವಲಯ ಯೋಜನೆಯಡಿ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ 5 ಲಕ್ಷ ರೂ. ಬಿಡುಗಡೆ ಆಗಿದೆ. ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದರೂ ಗ್ರಂಥಾಲಯಕ್ಕೆ ಸ್ಥಳ ಒದಗಿಸಿ ಕಟ್ಟಡ ನಿರ್ಮಾಣಕ್ಕೆ ಜಿಲ್ಲಾ ಕೇಂದ್ರ ಗ್ರಂಥಾಲಯ ಇಲಾಖೆ ಅ ಧಿಕಾರಿಗಳಾಗಲಿ, ಸ್ಥಳೀಯ ಪಪಂ ಆಡಳಿತವಾಗಲಿ ಮುಂದಾಗಿಲ್ಲ.

ಗ್ರಾಂಥಾಲಯದಲ್ಲಿ ಈಗ ಸುಮಾರು 3 ಸಾವಿರಕ್ಕೂ ಹೆಚ್ಚು ಪುಸ್ತಕಗಳಿವೆ. ಮೂರು ದಿನಪತ್ರಿಕೆಗಳು, 2 ವಾರ ಪತ್ರಿಕೆ, 2 ಮಾಸಪತ್ರಿಕೆಗಳು ಇಲ್ಲಿಗೆ ಬರುತ್ತಿವೆ. ಆದರೆ ಇನ್ನೂ ಹೆಚ್ಚಿನ ಪುಸ್ತಕ ಮತ್ತು ಇತರೆ ಪತ್ರಿಕೆಗಳನ್ನು ಒದಗಿಸಲು ಅನುದಾನ ಬಿಡುಗಡೆ ಆಗುತ್ತಿಲ್ಲ ಎಂಬ ದೂರು ಕೇಳಿಬರುತ್ತಿವೆ.

ಗ್ರಂಥಪಾಲಕರ ವೇತನ: ಗ್ರಂಥಾಲಯ ಆರಂಭ ವಾದಾಗ ಗ್ರಂಥಪಾಲಕನಿಗೆ ತಿಂಗಳಿಗೆ 300 ರೂ. ಸಂಬಳವಿತ್ತು. ಈಗ ತಿಂಗಳಿಗೆ ಸುಮಾರು 7 ಸಾವಿರ ರೂ. ಆಗಿದೆ. ಅದೂ ಮೂರು ತಿಂಗಳಿಗೊಮ್ಮೆ ಬಿಡುಗಡೆ ಆಗುತ್ತಿದೆ. 2013ರಿಂದ ಸರಕಾರ ಕನಿಷ್ಠ ವೇತನ 13,300 ನೀಡಲು ಆದೇಶಿಸಿತ್ತು. ಆದರೆ ಈ ವೇತನ ಪಡೆಯಲು ಗ್ರಂಥಪಾಲಕರು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಕೊರತೆ: ಬಳಗಾನೂರು ಗ್ರಂಥಾಲಯಕ್ಕೆ ಸ್ವಂತ ಕಟ್ಟಡವಿಲ್ಲ. ಈಗಿರುವ ಕಟ್ಟಡದಲ್ಲಿ ಜಾಗೆ, ಗಾಳಿ, ಬೆಳಕಿನ ಕೊರತೆ ಇದೆ. ಗ್ರಂಥಾಲಯ ನಿರ್ವಹಣೆಗೆ ಅನುದಾನ ಕೊರತೆ ಕಾಡುತ್ತಿದೆ. ಕೇಂದ್ರ ಗ್ರಂಥಾಲಯ ನಿರ್ದೇಶಕರು, ಉಪನಿರ್ದೇಶಕರು ಹಾಗೂ ಸ್ಥಳೀಯ ಪಪಂ ಆಡಳಿತ ಸುಸಜ್ಜಿತ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಸ್ಥಳ ಒದಗಿಸಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು. ಓದುಗರನ್ನು ಆಕರ್ಷಿಸಲು ಯೋಜನೆ ರೂಪಿಸ ಬೇಕೆಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.