ಸಕಾಲ ಸೇವೆ: ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯಕ್ಕೆ ಪ್ರಥಮ


Team Udayavani, Oct 26, 2019, 3:00 AM IST

sakala-seve

ಚಿಕ್ಕಬಳ್ಳಾಪುರ: ಹಲವು ವರ್ಷಗಳ ಹಿಂದೆ ಸಕಾಲ ಸೇವೆಯಲ್ಲಿ ಹಿಂದೆ ಬಿದ್ದಿದ್ದ ಜಿಲ್ಲಾಡಳಿತ ಮತ್ತೆ ಪುಟಿದೇಳಿದ್ದು, ಸಕಾಲ ಸಾಧನೆಯಲ್ಲಿ ಈಗ ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ತಾಲೂಕು ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸುವ ಮೂಲಕ ರಾಜ್ಯ ಸರ್ಕಾರದ ಪ್ರಶಂಸೆಗೆ ಪಾತ್ರವಾಗಿದೆ. ಜಿಲ್ಲೆಯಲ್ಲಿ ಸೆಪ್ಟೆಂಬರ್‌ ತಿಂಗಳ‌ಲ್ಲಿ ಸಕಾಲ ಅಧಿನಿಯಮದಡಿ ಒಟ್ಟು 1.08,471 ಅರ್ಜಿಗಳು ಸ್ವೀಕೃತವಾಗಿದ್ದು, ಆ ಪೈಕಿ 1,05,276 ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ಶುಕ್ರವಾರ ತಿಳಿಸಿದರು.

ಚಿಕ್ಕಬಳ್ಳಾಪುರ ತಾಲೂಕು ಪ್ರಥಮ: ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಸೆಪ್ಟೆಂಬರ್‌ ತಿಂಗಳಲ್ಲಿ ಒಟ್ಟು 38,809 ಅರ್ಜಿ ಸ್ವೀಕೃತವಾಗಿದ್ದು, ಈ ಪೈಕಿ 37,476 ಅರ್ಜಿ ವಿಲೇವಾರಿ ಮಾಡುವ ಮೂಲಕ ಚಿಕ್ಕಬಳ್ಳಾಪುರ ತಾಲೂಕು ಕೂಡ ಜಿಲ್ಲೆಯ ಇತರೇ ತಾಲೂಕುಗಳಿಗಿಂತ ಸಕಾಲ ಸಾಧನೆಯ ಪಟ್ಟಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಗಮನ ಸೆಳೆದಿದೆ. ರಾಜ್ಯ ಸರ್ಕಾರ ನಿಗದಿಪಡಿಸಿರುವ ಸಕಾಲ ಸೇವೆಗಳು ಇತ್ತೀಚೆಗೆ ಆಡಳಿತದಲ್ಲಿ ಪಾರದರ್ಶಕತೆ ಜೊತೆಗೆ ಸೂಕ್ತ ಸಮಯಕ್ಕೆ ಸರಿಯಾಗಿ ಸಾರ್ವಜನಿಕರಿಗೆ ವಿಲೇವಾರಿ ಮಾಡಲಾಗುತ್ತಿದ್ದು, 3 ದಿನದಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರಗಳ ವಿತರಿಸಲಾಗುತ್ತದೆ.

ಸಕಾಲ ವ್ಯಾಪ್ತಿಗೆ ಬರುವ ಇಲಾಖೆಗಳು: ಪೊಲೀಸ್‌ ಇಲಾಖೆ ಸೇರಿದಂತೆ ಕಂದಾಯ, ಸ್ಥಳೀಯ ಪ್ರಾಧಿಕಾರದ ಪುರಸಭೆ, ನಗರಸಭೆ ಹಾಗೂ ಪಟ್ಟಣ ಪಂಚಾಯತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಆಹಾರ ಮತ್ತು ನಾಗರಿಕ ಸರಬರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕಾರ್ಮಿಕ, ಅಂಗವಿಕಲರ ಕಲ್ಯಾಣಾಭಿವೃದ್ಧಿ, ಸಾರಿಗೆ ಇಲಾಖೆ ಸೇರಿದಂತೆ ಮತ್ತಿತರ 36ಕ್ಕೂ ಹೆಚ್ಚು ಇಲಾಖೆಗಳು ಸಕಾಲದ ವ್ಯಾಪ್ತಿಗೆ ಬರುತ್ತವೆ.

ಎಲ್ಲಾ ಪ್ರಕ್ರಿಯೆ ಆನ್‌ಲೈನ್‌ ಮೂಲಕ: “ಇಂದು ನಾಳೆ ಇನ್ನಿಲ್ಲ, ಹೇಳಿದ ಸಮಯಕ್ಕೆ ತಪ್ಪೊಲ್ಲ” ಎಂಬ ಘೋಷ ವಾಕ್ಯದಡಿ ಜಾರಿಗೆ ಬಂದಿರುವ ಸಕಾಲ ಸೇವೆಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ನಿಯಂತ್ರಿಸಲಾಗುತ್ತದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯಿಂದ ಹಿಡಿದು ಅರ್ಜಿ ವಿಲೇವಾರಿ ಆಗುವ ತನಕ ಎಲ್ಲಾ ಪ್ರಕ್ರಿಯೆಯು ಆನ್‌ಲೈನ್‌ ಮೂಲಕವೇ ನಡೆಯುತ್ತದೆ.

ಇದರಿಂದ ಸಾರ್ವಜನಿಕರಿಗೆ ಸಮಯ ಉಳಿತಾಯ, ಸರ್ಕಾರಿ ಕಚೇರಿಗಳ ಸುತ್ತಮುತ್ತ ಕಳೆಯುವ ಅವಶ್ಯಕತೆ ಇಲ್ಲವಾಗಿದೆ. ಇಂತಹ ಸಕಾಲ ಸೇವೆಯಲ್ಲಿ ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದೆ. ಸಕಾಲ ಸೇವೆ ಸಂಪೂರ್ಣ ಗಣಕೀಕೃತಗೊಂಡಿದ್ದು, ಸೇವೆಗೆ ಅರ್ಜಿ ಸಲ್ಲಿಸಿದೊಡನೆ ರಸೀದಿ ನೀಡಲಾಗುತ್ತದೆ. ರಸೀದಿಯಲ್ಲಿ ಸೇವೆ ನೀಡಬೇಕಾಗಿರುವ ಅವಧಿಯನ್ನು ನಮೂದಿಸಲಾಗುತ್ತದೆ. ಇದರಿಂದ ನಾಗರಿಕರು ಸಮಯವು ಉಳಿತಾಯವಾಗುತ್ತದೆ.

3 ದಿನಗಳಲ್ಲಿ ಖಾತಾ ನಕಲು: 30 ದಿನದಲ್ಲಿ ವಾಣಿಜ್ಯ ಪರವಾನಗಿ ನೀಡುವಿಕೆ, 3 ದಿನಗಳಲ್ಲಿ ಖಾತಾ ನಕಲು, 30 ದಿನಗಳಲ್ಲಿ 2,400 ಚದುರ ಅಡಿ ವರೆಗಿನ ವಸತಿ ನಿರ್ಮಾಣ ಮಾದರಿಯ ಕಟ್ಟಡ ಯೋಜನೆ ಅನುಮೋದಿಸುವುದು, 15 ದಿನಗಳಲ್ಲಿ ವಸತಿ ಕಟ್ಟಡಗಳಿಗೆ ನೀರು ಸರಬರಾಜು ಮತ್ತು ಒಳ ಚರಂಡಿಯ ಹೊಸ ಸಂಪರ್ಕಕ್ಕಾಗಿ ಅನುಮತಿ ನೀಡುವುದು ಹಾಗೂ 30 ದಿನಗಳಲ್ಲಿ ವಾಸ ದೃಢೀಕರಣ ಪ್ರಮಾಣ ಪತ್ರ ನೀಡಿಕೆ ಮತ್ತಿತರ ಸೇವೆಗಳನ್ನು ವಿಲೇವಾರಿ ಮಾಡಲಾಗಿದೆ.

ಸಂತಸ ತಂದಿದೆ ಎಂದ ಜಿಲ್ಲಾಧಿಕಾರಿ ಆರ್‌.ಲತಾ: ಅ.28 ರಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್‌.ಲತಾ ಮತ್ತು ಚಿಕ್ಕಬಳ್ಳಾಪುರ ತಾಲೂಕು ತಹಶೀಲ್ದಾರ್‌ ಕೆ.ನರಸಿಂಹಮೂರ್ತಿ ಜೊತೆಗೆ ಜಿಲ್ಲೆಯ ಸಕಾಲ ತಂಡದವರಿಗೆ ಪ್ರಶಂಸೆ ಪತ್ರ ಪ್ರದಾನ ಮಾಡಲಾಗುತ್ತದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಆರ್‌.ಲತಾ, ಸಕಾಲ ಸೇವೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ತಾಲೂಕು ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿರುವುದು ಸಂತಸದ ವಿಷಯ. ಜಿಲ್ಲೆ ಹಾಗೂ ತಾಲೂಕು ಸಕಾಲ ತಂಡದ ಕಾರ್ಯವೈಖರಿ ಅತ್ಯುತ್ತಮ ಎಂದರು.

ಟಾಪ್ ನ್ಯೂಸ್

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.