ಸಿಐಸಿ ಅಧಿಕಾರಾವಧಿ 3 ವರ್ಷ ಮಾತ್ರ: ಆರ್ಟಿಐ ಅಧಿಸೂಚನೆ
Team Udayavani, Oct 26, 2019, 4:27 AM IST
ಹೊಸದಿಲ್ಲಿ: ದೇಶಾದ್ಯಂತ ಇರುವ ಮಾಹಿತಿ ಆಯುಕ್ತರ ಅಧಿಕಾರಾವಧಿಯನ್ನು ಈಗಿರುವ 5 ವರ್ಷಗಳಿಂದ 3 ವರ್ಷಗಳಿಗೆ ಇಳಿಸಲಾಗಿದ್ದು, ಅವರಿಗೆ ನೀಡಲಾಗುವ ವೇತನ ಹಾಗೂ ಇತರೆ ಭತ್ಯೆಗಳನ್ನು ಇನ್ನು ಮುಂದೆ ಕೇಂದ್ರ ಸರಕಾರವೇ ನಿರ್ಧರಿಸಲಿದೆ. ಆರ್ಟಿಐ ಕಾಯ್ದೆಗೆ ತಂದ ತಿದ್ದುಪಡಿಯ ಅನ್ವಯ ಹೊಸ ಆರ್ಟಿಐ ನಿಯಮಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಗುರುವಾರ ರಾತ್ರಿ ಪ್ರಕಟಿಸಲಾಗಿದೆ.
ಮಾಹಿತಿ ಹಕ್ಕು ಕಾಯ್ದೆ 2005ರಂತೆ ಮುಖ್ಯ ಮಾಹಿತಿ ಆಯುಕ್ತರು ಮತ್ತು ದೇಶಾದ್ಯಂತ ಇರುವ ಇತರೆ ಮಾಹಿತಿ ಆಯುಕ್ತರು ಈವರೆಗೆ ಕೇಂದ್ರ ಚುನಾವಣ ಆಯುಕ್ತರು ಹಾಗೂ ಇತರೆ ಚುನಾವಣಾ ಆಯುಕ್ತರ ಮಾದರಿಯಲ್ಲೇ ಸೇವಾವಧಿ ಮತ್ತು ಇತರೆ ಸ್ವಾಯತ್ತ ಅಧಿಕಾರವನ್ನು ಹೊಂದಿದ್ದರು. ಆದರೆ, ಕೇಂದ್ರ ಸರಕಾರ ಜುಲೈನಲ್ಲಿ ಈ ಕಾಯ್ದೆಗೆ ತಿದ್ದುಪಡಿ ತಂದಿದ್ದು, ಅದರಂತೆ ಈಗ ಆಯುಕ್ತರ ಸೇವಾವಧಿ 3 ವರ್ಷಗಳಿಗೆ ಕಡಿತಗೊಳಿಸಲಾಗಿದೆ. ಜತೆಗೆ, ಅವರ ವೇತನ ಮತ್ತಿತರ ಭತ್ಯೆಗಳನ್ನು ನಿರ್ಧರಿಸುವುದು ಕೇಂದ್ರದ ವಿವೇಚನೆಗೆ ಬಿಟ್ಟದ್ದಾಗಿರುತ್ತದೆ. ಇದೇ ವೇಳೆ, ಕೇಂದ್ರ ಸರಕಾರದ ಈ ಕ್ರಮವು ತಮ್ಮ ಸ್ವಾತಂತ್ರ್ಯ ಹಾಗೂ ಸ್ವಾಯತ್ತೆಯ ಮೇಲಿನ ಹಲ್ಲೆ ಎಂದು ಆರ್ಟಿಐ ಹೋರಾಟಗಾರರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.