“ವಿಪಕ್ಷಗಳಿಗೆ ಅಸ್ತಿತ್ವವೇ ಇಲ್ಲ’
Team Udayavani, Oct 26, 2019, 5:39 AM IST
ಉಡುಪಿ: ರಾಜ್ಯದಲ್ಲಿ ಉಪಚುನಾವಣೆ ನಡೆದರೆ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದೆ. ಎದುರಾಳಿ ಪಕ್ಷಗಳು ಸಂಪೂರ್ಣ ಅಸ್ತಿತ್ವ ಕಳೆದುಕೊಂಡಿದ್ದು, ಸಮಾಜವನ್ನು ಒಡೆಯುವ ಕೆಲಸದಲ್ಲಿ ತೊಡಗಿವೆ ಎಂದು ಉಪಮುಖ್ಯ ಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.
ವಿಪಕ್ಷಗಳು ಸುಳ್ಳು ಹೇಳಿಕೆಗಳನ್ನು ನೀಡುವುದರಲ್ಲೇ ನಿರತವಾಗಿವೆ. ಅತಿವೃಷ್ಟಿ, ಅನಾವೃಷ್ಟಿ ಸಂದರ್ಭ ಅವರು ಪ್ರವಾಸ ಮಾಡುತ್ತಿರಲಿಲ್ಲ. ಆದರೆ ಬಿಜೆಪಿ ಸರಕಾರ ಎಲ್ಲ ಜಿಲ್ಲೆಗ ಳಿಗೂ ಪರಿಹಾರ ಕಲ್ಪಿಸಿದೆ. ಈ ಪರಿಹಾರ ವಿತರಣೆ ಕಾರ್ಯ ದಲ್ಲೂ ಕೆಲವೊಂದು ಸವಾಲುಗಳಿದ್ದು, ಪೂರ್ಣಗೊಳ್ಳಲು 1ರಿಂದ 2 ವರ್ಷ ತಗಲಬಹುದು ಎಂದರು.
ಮುಖಂಡರ ನಿರ್ಣಯ
ಡಿಕೆಶಿ ಬಿಡುಗಡೆ ಉಪಚುನಾವಣೆ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಸಮ್ಮಿಶ್ರ ಸರಕಾರದ ಪತನದಲ್ಲಿ ಅತೃಪ್ತ ಶಾಸಕರ ಕೊಡುಗೆ ಬಹಳಷ್ಟಿದೆ. ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿದ್ದೇ ಆದಲ್ಲಿ ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ಮುಖಂಡರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.