ನ. 1ರಿಂದ ಕನ್ನಡ ನಾಮಫಲಕ ಕಡ್ಡಾಯ
Team Udayavani, Oct 26, 2019, 10:11 AM IST
ಬೆಂಗಳೂರು: ನವೆಂಬರ್ 1ರಿಂದ ನಗರದ ಎಲ್ಲ ಅಂಗಡಿ ಮುಂಗಟ್ಟುಗಳು, ಹೋಟೆಲ್ಗಳು ಹಾಗೂ ಖಾಸಗಿ ಕಂಪನಿಗಳು ಕನ್ನಡ ನಾಮಫಲಕ ಅಳಡಿಕೆ ಮಾಡುವುದು ಕಡ್ಡಾಯ ಎಂದು ಪಾಲಿಕೆ ಆಯುಕ್ತ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಕನ್ನಡ ಭಾಷೆಗೆ ನಾಮಫಲಕಗಳಲ್ಲಿ ಅಗ್ರಸ್ಥಾನ ನೀಡದಿದ್ದರೆ ಅಂತಹ ಮಳಿಗೆಗಳ ವಾಣಿಜ್ಯ ಪರವಾನಗಿಯನ್ನು ರದ್ದುಗೊಳಿಸ ಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.
ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಮಾಡಬೇಕು. ಫಲಕಗಳಲ್ಲಿ ಕನ್ನಡ ಪದಗಳು ಸ್ಪಷ್ಟವಾಗಿ ಕಾಣುವಂತೆ ಮುದ್ರಿಸಬೇಕು ಎಂದು ಆಯುಕ್ತರು ಸ್ಪಷ್ಟ ಸೂಚನೆ ನೀಡಿದ್ದಾರೆ. ಜತೆಗೆ ಹೊಸದಾಗಿ ಪರವಾನಗಿ ಅರ್ಜಿ ಸಲ್ಲಿಸುವಂತಹ ಅರ್ಜಿದಾರರಿಗೂ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳು ಸೂಚನೆ
ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಕೆಲವು ಕನ್ನಡಪರ ಸಂಘಟನೆಗಳು ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವಂತೆ ಮೇಯರ್ ಸೇರಿದಂತೆ ಸಂಬಂಧ ಪಟ್ಟ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದವು. ಮೇಯರ್ ಗೌತಮ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ನ.1ರಿಂದ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡ ಲಾಗುವುದು ಎಂದು ಘೋಷಿಸಿದ್ದರು. ಮೇಯರ್ ಅವರ ಘೋಷಣೆ ಬೆನ್ನಲ್ಲೇ ಆಯುಕ್ತ ಅನಿಲ್ ಕುಮಾರ್ ಅವರು ನ.1ರಿಂದ ಕನ್ನಡ ಭಾಷೆ ಕಡ್ಡಾಯಕ್ಕೆ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.