ಮೂಲ ಸೌಕರ್ಯ ವಂಚಿತ ಬಸವಕಲ್ಯಾಣ ಗ್ರಂಥಾಲಯ
Team Udayavani, Oct 26, 2019, 4:00 PM IST
ಬಸವಕಲ್ಯಾಣ: ಜಿಲ್ಲೆಯಲ್ಲಿ ಬೀದರ ನಂತರ ದೊಡ್ಡ ನಗರ ಹಾಗೂ ವಾಣಿಜ್ಯ ವ್ಯವಹಾರ ನಡೆಯುವ ಕೇಂದ್ರ ಸ್ಥಾನ ಎಂದು ಕರೆಯಲಾಗುವ ಬಸವಕಲ್ಯಾಣ ನಗರದ ಸಾರ್ವಜನಿಕ ಗ್ರಂಥಾಲಯ ಅವ್ಯವಸ್ಥೆ ಆಗರವಾಗಿದೆ. ಆದರೂ ನಿವೃತ್ತ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವ ಜನಿಕರು ಇಲ್ಲಿಗೆ ಬಂದು ಓದುವುದು ಅನಿವಾರ್ಯವಾಗಿದೆ.
ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ರಸ್ತೆಯಲ್ಲಿ 1970ರಲ್ಲಿ ಸ್ವಂತ ಸ್ಥಳದಲ್ಲಿ ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಿಸಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಗ್ರಂಥಾಲಯದಲ್ಲಿ ಮರಾಠಿ, ಕನ್ನಡ ಹಿಂದಿ, ಕಥೆ, ಕಾದಂಬರಿಗಳು ಸೇರಿದಂತೆ ಒಟ್ಟು 21,600 ಪುಸ್ತಗಳಿವೆ. ಎಲ್ಲ ಕನ್ನಡ ಪತ್ರಿಕೆಗಳು ಲಭ್ಯವಿರುತ್ತವೆ. ಒಟ್ಟು 1,450 ಜನರು ಇಲ್ಲಿ ಸದಸ್ಯತ್ವ ಪಡೆದುಕೊಂಡಿದ್ದಾರೆ.
ಹೀಗಾಗಿ ನಿತ್ಯ ಸುಮಾರು 200ರಿಂದ 300 ಜನ ಇಲ್ಲಿಗೆ ಬಂದು ಓದುವುದು ಸಾಮಾನ್ಯ. ಆದರೆ
ಇಲ್ಲಿನ ಅವ್ಯವಸ್ಥೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಂಥಾಲಯಕ್ಕೆ ಓದಲು ಬರುವ ಹಾಗೂ ಸಿಬ್ಬಂದಿಗಾಗಿ ಕನಿಷ್ಠ ಮೂಲಭೂತ ಸೌಲಭ್ಯ ಇಲ್ಲದ ಕಾರಣ ಸಿಬ್ಬಂದಿ ಹಾಗೂ ಸಾರ್ವಜನಿಕರು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ.
ಗ್ರಂಥಾಲಯದಲ್ಲಿ ಸದ್ಯ ಇಬ್ಬರು ಕಾಯಂ ಮತ್ತು ಒಬ್ಬರು ಅರೆ ಕಾಲಿಕ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿದೆ. ಆದರೂ ಗಡಿ ತಾಲೂಕಿನ ಸಾರ್ವಜನಿಕರ ಗ್ರಂಥಾಲಯ ಹೆಸರಿಗೆ ಮಾತ್ರ ಎಂಬಂತಾಗಿದ್ದು, ಕನ್ನಡಾಭಿಮಾನಿಗಳ ಮತ್ತು ಸಾರ್ವಜನಿಕರ ಆಕ್ರೋಷಕ್ಕೆ ಕಾರಣವಾಗಿದೆ.
ಶಿಥಿಲಾವಸ್ಥೆಯಲ್ಲಿ ಕಟ್ಟಡ: ಗ್ರಂಥಾಲಯ ಕಟ್ಟಡ ಹಳೆದಾಗಿರುವುದರಿಂದ ಶಿಥಿಲಾವಸ್ಥೆಗೆ ತಲುಪಿದೆ. ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಮಳೆ ಬಂದರೆ ಸಾಕು ನೀರು ಒಳಗೆ ನುಗ್ಗುತ್ತವೆ. ಆದರೂ ಸಂಬಂಧ ಪಟ್ಟವರು ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ. ಇದರಿಂದ ಓದುಗರು ನಿತ್ಯ ಭಯದಲ್ಲಿ ಕುಳಿತುಕೊಳ್ಳುವಂತಾಗಿದೆ ಎಂಬುದು ಸಾರ್ವಜನಿಕರ ಆರೋಪ.
ಕೇಂದ್ರ ಮತ್ತು ರಾಜ್ಯ ಸರ್ಕಾರ ಬಯಲು ಶೌಚಮುಕ್ತ ಭಾರತ ನಿರ್ಮಾಣಕ್ಕಾಗಿ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತಿದೆ. ಆದರೆ ತಾಲೂಕು ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಾಲಯ ಹಾಗೂ ಸಾಮಾನ್ಯ ಕುಡಿಯುವ ನೀರಿನ ವ್ಯವಸ್ಥೆ ಕೂಡ ಇಲ್ಲದಾಗಿದೆ. ಹೀಗಾಗಿ ಇಲ್ಲಿಗೆ ಓದಲು ಬರುವವರು ಗ್ರಂಥಾಲಯ ಮುಂಭಾಗ ಹಾಗೂ ಹಿಂಬದಿ ಸ್ಥಳವನ್ನೇ ಶೌಚಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಇದರಿಂದ ಸೊಳ್ಳೆಗಳ ಕಾಟ ಜಾಸ್ತಿಯಾಗಿದ್ದು, ಒಳಗೆ ಕುಳಿತುಕೊಳ್ಳಲಾರದಂಥ ಸ್ಥಿತಿ ನಿರ್ಮಾಣವಾಗಿದೆ.
ಕಂಪ್ಯೂಟರ್-ಝರಾಕ್ಸ್ ಇಲ್ಲ: ರಾಜ್ಯದ ಕೆಲ ದೊಡ್ಡ ತಾಲೂಕಿನ ಸಾರ್ವಜನಿಕ ಗ್ರಂಥಾಲಯಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಈ ಗ್ರಂಥಾಲಯದಲ್ಲಿ ಇನ್ನೂ ನೋಟ್‌ಬುಕ್‌ನಲ್ಲಿ ಬರೆದುಕೊಳ್ಳುವ ವ್ಯವಸ್ಥೆ ಇದೆ. ಕನಿಷ್ಟ ಪುಸ್ತಕಗಳ ಮಾಹಿತಿಹಾಗಿ ಒಂದು ಕಂಪ್ಯೂಟರ್ ಸೌಲಭ್ಯ ನೀಡಿಲ್ಲ ಹಾಗೂ ಝರಾಕ್ಸ್ ಇಲ್ಲಿದಿರುವುದರಿಂದ ಓದುಗರಿಗೆ ಬೇಕಾದ ಮಾಹಿತಿಯನ್ನು ಪಡೆದುಕೊಳ್ಳಬೇಕಾದರೆ ಹೊರಗೆ ಅಂಗಡಿಗೆ ಹೋಗಿ ಝರಾಕ್ಸ್ ಮಾಡಿಕೊಳ್ಳುವುದು ಪರಿಸ್ಥಿತಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.