ಪೈಪ್‌ಲೈನ್ ಕಾಮಗಾರಿಗೆ ಹದಗೆಟ್ಟ ರಸ್ತೆ
Team Udayavani, Oct 26, 2019, 4:12 PM IST
ತಿಪಟೂರು: ಕಸಬಾ ಹೋಬಳಿ ಈಚನೂರು ಗ್ರಾಮದ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಯಿಂದ ಮಣ್ಣು ಕುಸಿಯುತ್ತಿದ್ದು, ಮಳೆ ಬಂದ ಕಾರಣ ಕೆಸರುಗದ್ದೆಯಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ದುರಸ್ತಿಗೊಳಿಸ ಬೇಕೆಂದು ಗ್ರಾಮಸ್ಥರು ಹಾಗೂ ವಾಹನ ಸವಾರರು ಒತ್ತಾಯಿಸಿದ್ದಾರೆ.
ಈಚನೂರು ಕೆರೆಯಿಂದ ತಿಪಟೂರು ಅಮಾನಿ ಕೆರೆಗೆ ಪೈಪ್‌ಲೈನ್ ಮೂಲಕ 24×7 ಕುಡಿಯುವ ನೀರು ತರಲಾಗುತ್ತಿದೆ. ಈಚನೂರು ಗ್ರಾಮದ ಸಂಪರ್ಕ ರಸ್ತೆ ಬದಿಯಲ್ಲಿ ಪೈಪ್‌ಲೈನ್ ಕಾಮಗಾರಿಗೆ ತೆಗೆದಿದ್ದ ಮಣ್ಣು ಸರಿಯಾಗಿ ಮುಚ್ಚದಿರುವುದರಿಂದ ಕೆಸರು ಗದ್ದೆಯಂತಾಗಿದೆ.
ರಸ್ತೆಯು ಕರಡಾಳು, ಅರಳಗುಪ್ಪೆ ಸೇರಿ ಹಲವು ಗ್ರಾಮಗಳಿಗೆ ಸಂಪರ್ಕ ರಸ್ತೆಯಾಗಿದೆ. ಅಲ್ಲದೆ ಪ್ರತಿನಿತ್ಯ 10ಕ್ಕೂ ಹೆಚ್ಚು ಕೆಎಸ್‌ಆರ್‌ಟಿ ಬಸ್, ಆಟೋ, ಬೈಕ್‌ಗಳು ಓಡಾಡುತ್ತವೆ. ಆದರೆ ಅವೈಜ್ಞಾನಿಕ ಕಾಮಗಾರಿ ಒಂದೆಡೆಯಾದರೆ ರಸ್ತೆ ತುಂಬ ಗುಂಡಿಗಳು ಬಿದ್ದಿದ್ದು, ಮಳೆ ನೀರು ಶೇಖರಣೆಯಾಗಿ ಗುಂಡಿ ಗಳು ಕಾಣದಂತಾಗಿ ಸರ್ಕಸ್ ಮಾಡಿಕೊಂಡು ಓಡಾಡುವಂತಾಗಿದೆ. ಇದರಿಂದ ಒಂದಲ್ಲೊಂದು ಅಪಘಾತಗಳು ಸಂಭವಿ ಸುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ. ಕೂಡಲೇ ರಸ್ತೆ ದುರಸ್ತಿಗೊಳಿಸಬೇಕೆಂದು ವಾಹನ ಸವಾರರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ
MUST WATCH
ಹೊಸ ಸೇರ್ಪಡೆ
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.