2020ರ ಆಟೋ ಎಕ್ಸ್ಫೋದಲ್ಲಿ ಫೋಕ್ಸ್ ವ್ಯಾಗನ್ ಟಿ-ರಾಕ್ ಅನಾವರಣ
Team Udayavani, Oct 26, 2019, 8:48 PM IST
ಹೊಸದಿಲ್ಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಫೋಕ್ಸ್ ವ್ಯಾಗನ್ ಭಾರತದಲ್ಲಿಯೂ ಕಾರ್ಯನಿರ್ವಹಿಸುತ್ತಿದ್ದು, ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಕೆಲವು ವಿನೂತನ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ.
ಮಧ್ಯಮ ಕ್ರಮಾಂಕದ ಟಿ-ರಾಕ್ ಕಂಪ್ಯಾಕ್ಟ್ ಎಸ್ಯುವಿ ಕಾರನ್ನು 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಎಕ್ಸ್ಪೋದಲ್ಲಿ ಬಿಡುಗಡೆಗೊಳಿಸುವ ಸುಳಿವು ನೀಡಿದೆ. ಕೇಂದ್ರ ಸರಕಾರ ಘೋಷಣೆ ಮಾಡಿರುವ ಹೊಸ ಆಮದು ನೀತಿ ಅಡಿಯಲ್ಲಿ ವಿದೇಶಿ ಮಾರುಕಟ್ಟೆಗಳಿಂದ ಆಮದು ಮಾಡಿಕೊಂಡು ಈ ಕಾರನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆ.
ಸದ್ಯ ಫೋಕ್ಸ್ ವ್ಯಾಗನ್ ಸಂಸ್ಥೆ ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗಾಗಿ ವಿವಿಧ ಕಾರು ಮಾದರಿಗಳನ್ನು ಪರಿಚಯಿಸುವ ಇರಾದೆಯಲ್ಲಿದ್ದು, “ಇಂಡಿಯಾ 2.0 ಪೊ›ಜೆಕ್ಟ್’ ಎಂಬ ಬೃಹತ್ ಯೋಜನೆ ಒಂದನ್ನು ಹಾಕಿಕೊಂಡಿದೆ. ಇನ್ನು ಇದರ ಜವಾಬ್ದಾರಿಯನ್ನು ಸ್ಕೋಡಾ ಸಂಸ್ಥೆಗೆ ವಹಿಸಲಿದ್ದು, ಫೋಕ್ಸ್ ವ್ಯಾಗನ್ ಸಂಸ್ಥೆಯ ಮುಂದಿನ ಎಲ್ಲಾ ಕಾರುಗಳ ಆವೃತ್ತಿಯ ಮಾದರಿಯು ಸ್ಕೋಡಾ ತಂತ್ರಜ್ಞಾನ ಪ್ರೇರಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.