ಓದುಗರಿದ್ದರೂ ಪುಸ್ತಕಗಳದ್ದೇ ಕೊರತೆ
ನಿಯತಕಾಲಿಕೆಗಳಿಗಿದೆ ಬೇಡಿಕೆಪ್ರತಿನಿತ್ಯ 300ಕ್ಕೂ ಹೆಚ್ಚು ಓದುಗರ ಭೇಟಿ
Team Udayavani, Oct 27, 2019, 4:16 PM IST
ಶಿಕಾರಿಪುರ: ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪನರು ಮೊದಲ ಬಾರಿ ಮುಖ್ಯಮಂತ್ರಿಯಾದ ಬಳಿಕ ಶಿಕಾರಿಪುರ ತಾಲೂಕಿನಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಅದರಲ್ಲಿ ಗ್ರಂಥಾಲಯವೂ ಒಂದಾಗಿದೆ. ಶಿಶುವಿಹಾರ ರಸ್ತೆಯಲ್ಲಿ ಬಸ್ ನಿಲ್ದಾಣಕ್ಕೆ ಹತ್ತಿರವಿರುವ ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಿಸಲಾಗಿದ್ದು ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಗ್ರಂಥಪಾಲಕ ಸಹಾಯಕರ ಕೊರತೆ ಪ್ರಮುಖ ಸಮಸ್ಯೆಯಾಗಿದೆ.
ಪಟ್ಟಣದ ಗ್ರಂಥಾಲಯದಲ್ಲಿ ಒಟ್ಟು 46000 ಸಾವಿರಕ್ಕೂ ಹೆಚ್ಚು ಪುಸ್ತಕಗಳಿದ್ದು ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ತೆಲುಗು, ತಮಿಳು ಹೀಗೆ ಅನೇಕ ಭಾಷಾ ಪುಸ್ತಕಗಳಿವೆ. 2657 ಒಟ್ಟು ಸದಸ್ಯರು ನೋಂದಣಿಯಾಗಿದ್ದಾರೆ. ಅದರಲ್ಲಿ 1515 ಪುರುಷರು ಹಾಗೂ 1142 ಮಹಿಳಾ ಸದಸ್ಯರು ಇದ್ದಾರೆ.
ಪ್ರತಿನಿತ್ಯ 300ಕ್ಕೂ ಹೆಚ್ಚು ಓದುಗರು ಭೇಟಿ ನೀಡಿ ತಮ್ಮ ಜ್ಞಾನದ ಹಸಿವನ್ನು ನೀಗಿಸಿಕೊಳ್ಳುತ್ತಿದ್ದಾರೆ. ಗ್ರಂಥಾಲಯ ಎರಡು ಮಹಡಿಯ ಬೃಹತ್ ಸುಸಜ್ಜಿತವಾದ ಕಟ್ಟಡ ಹೊಂದಿದೆ. ಉತ್ತಮ ಸೌಲಭ್ಯಗಳಿವೆ. ಕೆಳ ಮಹಡಿಯಲ್ಲಿ ಪತ್ರಿಕಾ ವಿಭಾಗ ಇದ್ದು ಇಲ್ಲಿ ದಿನಕ್ಕೆ 30 ಕನ್ನಡ ಪತ್ರಿಕೆಗಳು, ಎರಡು ಇಂಗ್ಲಿಷ್ ಪತ್ರಿಕೆಗಳು, 21 ನಿಯತಕಾಲಿಕೆಗಳು ಬರುತ್ತವೆ. ಒಂದನೇ ಮಹಡಿಯಲ್ಲಿ ಪುಸ್ತಕಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪುಸ್ತಕಗಳನ್ನು ಓದಲು ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಂಥಾಲಯಕ್ಕೆ ಸಂಪೂರ್ಣ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.
ಆದರೆ ಜಿಲ್ಲಾ ಕೇಂದ್ರ ಗ್ರಂಥಾಲಯವಾಗಿದ್ದು ಅಧಿಕೃತವಾಗಿ ಗ್ರಂಥಾಲಯದಲ್ಲಿ ಗ್ರಂಥಪಾಲಕರು ಒಬ್ಬರೇ ಇದ್ದಾರೆ. ಎರಡು ವಿಭಾಗಗಳನ್ನು ಒಬ್ಬರೇ ನಿರ್ವಹಿಸಬೇಕಾಗಿರುವುದರಿಂದ ಸಾಕಷ್ಟು ಸಮಸ್ಯೆಯಾಗಿದೆ.
ಗ್ರಾಮೀಣ ಭಾಗದಲ್ಲಿ 44 ಉಪ ಗ್ರಂಥಾಲಯ: ತಾಲೂಕಿನ ಎಲ್ಲಾ ಗ್ರಾಪಂಗಳಲ್ಲೂ ಗ್ರಂಥಾಲಯಗಳು ಇದ್ದು ಒಂದು ಅಲೆಮಾರಿ ಗ್ರಂಥಾಲಯ ಕೆಂಗಟ್ಟೆ ಗ್ರಾಮದಲ್ಲಿದೆ. ಒಂದು ಉಪ ಗ್ರಂಥಾಲಯಕ್ಕೆ ತಿಂಗಳಿಗೆ 400 ರೂ. ಗಳನ್ನು ಮಾತ್ರ ನೀಡಲಾಗುತ್ತಿದ್ದು ದಿನಕ್ಕೆ 2 ಪತ್ರಿಕೆಗಳು ಮತ್ತು ತಿಂಗಳಿಗೆ 1 ನಿಯತಕಾಲಿಕೆಯನ್ನು ತರಿಸಲಾಗುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವ ನಿಯತಕಾಲಿಕೆಗಳ ಬೇಡಿಕೆ ಇದೆ. ಇನ್ನು ಪುಸ್ತಕಗಳ ಕೊರತೆ ಇದೆ. ಸರ್ಕಾರಿ ಹುದ್ದೆಗಳಿಗೆ ಅನುಕೂಲವಾಗುವ ಪುಸ್ತಕಗಳ ಅವಶ್ಯಕತೆ ಇದೆ.
ಡಿಜಿಟಲ್ ಗ್ರಂಥಾಲಯ ಆರಂಭ: 2ನೇ ಮಹಡಿಯಲ್ಲಿ ಡಿಜಿಟಲ್ ಗ್ರಂಥಾಲಯ ನಿರ್ಮಾಣವಾಗಲಿದೆ. ಎರಡನೇ ಡಿಜಿಟಲ್ ಗ್ರಂಥಾಲಯ ಈಗಾಗಲೇ ಇಲಾಖೆಯ ವತಿಯಿಂದ ಮಂಜೂರಾಗಿದ್ದು ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ ಎಂದು ಗ್ರಂಥಪಾಲಕ ಸಚಿನ್ ತಿಳಿಸಿದ್ದಾರೆ. ತಾಲೂಕಿನಲ್ಲಿ ಬಹುತೇಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುವ ವಿದ್ಯಾರ್ಥಿಗಳು ಹೆಚ್ಚಾಗಿ ಗ್ರಂಥಾಲಯಕ್ಕೆ ಆಗಮಿಸುತ್ತಿದ್ದು ಬಡ ವಿದ್ಯಾರ್ಥಿಗಳಿ ಡಿಜಿಟಲ್ ಮಾಧ್ಯಮದ ಬಳಕೆಗೆ ಅನುಕೂಲವಾಗಲಿದೆ. ಇಂಟರ್ನೆಟ್ ಬಳಕೆಯಿಂದ ಸಾಕಷ್ಟು ಮಾಹಿತಿಗಳನ್ನು ತಿಳಿದುಕೊಳ್ಳುವ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.