ಪ್ರತಿ ಕೆಲಸಕ್ಕೂ ಪ್ರತಿಫಲ ಸೃಷ್ಟಿಸುತ್ತದೆ ಆತ್ಮ: ರವಿಕಲ್‌

ಜೀವನದ ಕಲೆಯಲ್ಲಿ ರಾಜಯೋಗ ಧ್ಯಾನ ಅವಶ್ಯ

Team Udayavani, Oct 27, 2019, 4:38 PM IST

27-October-31

ಸಿಂದಗಿ: ಪರಮಾತ್ಮನ ಮಾರ್ಗದರ್ಶನದಲ್ಲಿ ಭೂಮಿ ಮೇಲೆ ನಾವು ಸೃಜನಶೀಲ ಪ್ರಕ್ರಿಯೆ ಮೂಲಕ ಕೆಲಸ ಮಾಡುವುದು ಒಂದು ಜೀವನ ಕಲೆಯಾಗಿದೆ ಎಂದು ಮೌಂಟ್‌ ಅಬು ಪರ್ವತದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ ಬ್ರಹ್ಮಕುಮಾರಿ ರವಿಕಲ್‌ ಹೇಳಿದರು.

ಪಟ್ಟಣದ ಓಂಶಾತಿ ನಗರರದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಜೀವನ ಕಲೆ-
ವಚನ ಮಾಲೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜೀವನವನ್ನು ನಿಜವಾದ ಸೃಜನಶೀಲ ಪ್ರಕ್ರಿಯೆಯಾಗಿ ವಿನ್ಯಾಸಗೊಳಿಸಲಾಗಿದೆ. ನಮ್ಮ ದೈನಂದಿನ ಜೀವನದಲ್ಲಿ ತೊಡಗಿಸಿಕೊಂಡಾಗ ಕಾರ್ಯಗಳ ಮೇಲೆ ನಿಯಂತ್ರಿಸಲು ಧ್ಯಾನ ಅತ್ಯವಶ್ಯ. ನಾವು ನಮ್ಮ ಜೀವನದಲ್ಲಿ ಶುದ್ಧ ಭಾವನೆಗಳನ್ನು ಅಳವಡಿಸಿಕೊಳ್ಳಬೇಕು, ಆಗ ನಮ್ಮ ಬದುಕು ಶುಭವಾಗುತ್ತದೆ. ನಾವು ಅಧ್ಯಾತ್ಮಿಕ ಮೌಲ್ಯಗಳ ದೃಷ್ಟಿಯಿಂದ ಬದಲಾದಾಗ, ಪ್ರಪಂಚ ಬದಲಾಗುತ್ತದೆ. ಇದುವೇ ಜೀವನದ ಕಲೆಯಾಗಿದೆ ಎಂದು ಹೇಳಿದರು.

ಆತ್ಮ ಮಾಡುವ ಪ್ರತಿಯೊಂದು ಕ್ರಿಯೆ ಅದಕ್ಕೆ ತಕ್ಕಂತೆ ಪ್ರತಿಫಲವನ್ನು ಸೃಷ್ಟಿಸುತ್ತದೆ ಮತ್ತು ಆತ್ಮದ ಮುಂದಿನ ದೇಹದ ಹಣೆಬರಹವು ಈ ಜೀವನದಲ್ಲಿ ಅದು ಹೇಗೆ ಕಾರ್ಯ ನಿರ್ವಹಿಸುತ್ತದೆ ಮತ್ತು ವರ್ತಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಧ್ಯಾನದ ಮೂಲಕ, ಆಲೋಚನಾ ಕ್ರಮಗಳನ್ನು ಮತ್ತು ಅಂತಿಮವಾಗಿ ಕ್ರಿಯೆಗಳನ್ನು ಪರಿವರ್ತಿಸುವ ಮೂಲಕ, ಜನರು ತಮ್ಮ ಕರ್ಮ ಖಾತೆಯನ್ನು ಶುದ್ಧೀಕರಿಸಬಹುದು ಮತ್ತು ಪ್ರಸ್ತುತ ಮತ್ತು ಮುಂದಿನ ಜನ್ಮದಲ್ಲಿ ಉತ್ತಮ ಜೀವನವನ್ನು ನಡೆಸಬಹುದು ಎಂದರು.

ಸ್ಥಳಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ಪವಿತ್ರಾ ಮಾತನಾಡಿ, ಜೀವನದ ಕಲೆಯಲ್ಲಿ ರಾಜಯೋಗ ಧ್ಯಾನವು ಅತ್ಯವಶ್ಯಕ. ಜೀವನ ವೇಗವಾಗಿ ಬೆಳೆಯುತ್ತಿದೆ ಮತ್ತು ನಮ್ಮ ನಿಜವಾದ ಆಂತರಿಕ ಶಾಂತಿ ಮತ್ತು ಶಕ್ತಿಯೊಂದಿಗೆ ನಾವು ಸಂಪರ್ಕವನ್ನು ಕಳೆದುಕೊಳ್ಳುತ್ತಿದ್ದೇವೆ. ಈ ಹಂತದಲ್ಲಿಯೇ ನಾವು ಒತ್ತಡದ ಭಾವನೆಯನ್ನು ಅನುಭವಿಸಲು ಪ್ರಾರಂಭಿಸುತ್ತೇವೆ. ಕ್ರಮೇಣ ಈ ಭಾವನೆ ಅನಾರೋಗ್ಯ ಮತ್ತು ಕಾಯಿಲೆಗೆ ಕಾರಣವಾಗುತ್ತದೆ ಎಂದರು.

ನಮ್ಮ ಮಾನಸಿಕ, ಭಾವನಾತ್ಮಕ ಮತ್ತು ದೈಹಿಕ ಆರೋಗ್ಯವನ್ನು ಸಮತೋಲನದಿಂದ ಇರಲು ರಾಜಯೋಗ ಧ್ಯಾನ ಅಗತ್ಯ. ರಾಜಯೋಗ ಧ್ಯಾನವು ಎಲ್ಲ ಹಿನ್ನೆಲೆಯ ಜನರಿಗೆ ಪ್ರವೇಶಿಸಬಹುದಾದ ಧ್ಯಾನದ ಒಂದು ರೂಪವಾಗಿದೆ. ಇದು ಆಚರಣೆಗಳು ಅಥವಾ ಮಂತ್ರಗಳಿಲ್ಲದ ಧ್ಯಾನವಾಗಿದೆ ಮತ್ತು ಯಾವುದೇ ಸಮಯದಲ್ಲಿ ಎಲ್ಲಿ ಬೇಕಾದರೂ ಅಭ್ಯಾಸ ಮಾಡಬಹುದು.

ರಾಜ ಯೋಗ ಧ್ಯಾನವನ್ನು ತೆರೆದ ಕಣ್ಣುಗಳಿಂದ ಅಭ್ಯಾಸ ಮಾಡಲಾಗುತ್ತದೆ ಎಂದು ಹೇಳಿದರು. ಅಧ್ಯಾತ್ಮಿಕ ಅರಿವು ನಕಾರಾತ್ಮಕ ಮತ್ತು ವ್ಯರ್ಥವಾದವುಗಳ ಮೇಲೆ ಉತ್ತಮ ಮತ್ತು ಸಕಾರಾತ್ಮಕ ಆಲೋಚನೆಗಳನ್ನು ಆಯ್ಕೆ ಮಾಡುವ ಶಕ್ತಿಯನ್ನು ನಮಗೆ ನೀಡುತ್ತದೆ. ನಾವು ಸಾಮರಸ್ಯದಿಂದ ಬದುಕಲು ಪ್ರಾರಂಭಿಸುತ್ತೇವೆ. ನಾವು ಉತ್ತಮ ಮತ್ತು ಸಂತೋಷದಾಯಕ, ಆರೋಗ್ಯಕರ ಸಂಬಂಧಗಳನ್ನು ಸೃಷ್ಟಿಸುತ್ತೇವೆ ಮತ್ತು ನಮ್ಮ ಜೀವನವನ್ನು ಅತ್ಯಂತ ಸಕಾರಾತ್ಮಕ ರೀತಿಯಲ್ಲಿ ಬದಲಾಯಿಸುತ್ತೇವೆ ಎಂದರು.

ಆಲಮೇಲ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ರೇಣುಕಾ ಮಾತನಾಡಿ, ವಿಶ್ವದ 180
ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಈ ಸಂಸ್ಥೆಯು ವಿಶ್ವಸಂಸ್ಥೆಯ ಸಲಹಾ ಸಮಿತಿ ಅಂಗ ಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಸ್ಟೇಟ್‌ ಬ್ಯಾಂಕ್‌ ಉಪ ಪ್ರಂಬಂಧಕಿ ಅಬುಜಾ ರಾಯದುರ್ಗ, ಅಧ್ಯಕ್ಷತೆ ವಹಿಸಿದ್ದ ಅರ್ಬನ್‌ ಬ್ಯಾಂಕ್‌ ಅಧ್ಯಕ್ಷ ಶರಣಪ್ಪ ವಾರದ, ಗುತ್ತಿಗೆದಾರ ಭೀಮಣ್ಣ ಸುಣಗಾರ ಮಾತನಾಡಿದರು. ಮಂಜುಳಾ ಸ್ವಾಗತಿಸಿದರು. ಡಾ| ಬಿ.ಜಿ. ಪಾಟೀಲ ನಿರೂಪಿಸಿದರು. ಎಸ್‌.ಎಸ್‌. ಬುಳ್ಳಾ ವಂದಿಸಿದರು.

ಟಾಪ್ ನ್ಯೂಸ್

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

courts

Kundapura: ಅಪ್ರಾಪ್ತ ವಯಸ್ಕಳ ಜತೆ ಸಂಪರ್ಕ; ಮದುವೆಯಾಗುವುದಾಗಿ ಮೋಸ; 20 ವರ್ಷ ಶಿಕ್ಷೆ

ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.