ಶಾಸಕರ ಸೂಚನೆ ಪಾಲಿಸದ ಗ್ರಾಪಂ ಪಿಡಿಒ: ಸತ್ತಾರ್
Team Udayavani, Oct 27, 2019, 5:18 PM IST
ಬಾಳೆಹೊನ್ನೂರು: ಬಿ.ಕಣಬೂರು ಗ್ರಾಪಂ ವ್ಯಾಪ್ತಿಯ ಹಕ್ಕುಪತ್ರದ ನಿವೇಶನದಲ್ಲಿ ನಿರ್ಮಿಸಿರುವ ಕಾಂಪೌಂಡ್ ತೆರವುಗೊಳಿಸದಂತೆ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡರು ಸೂಚಿಸಿದ್ದರೂ ಗ್ರಾಪಂ ಪಿಡಿಒ ತೆರವುಗೊಳಿಸಿದ್ದಾರೆಂದು ನಿವೇಶನದ ಮಾಲಿಕ ಅಬ್ದುಲ್ ಸತ್ತಾರ್ ಆರೋಪಿಸಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಪಂ ಅಧ್ಯಕ್ಷರ ಸೂಚನೆ ಮೇರೆಗೆ ಪಿಡಿಒ ಕಾಂಪೌಂಡ್ ತೆರವುಗೊಳಿಸಿದ್ದಾರೆಂದು ದೂರಿದರು. ಕಂದಾಯ ಇಲಾಖೆಯಿಂದ ಸರ್ವೆ ನಂ.139ರಲ್ಲಿ ಪೋಡಿ ನಂ.457ರಂತೆ ನಮ್ಮ ನಿವೇಶನ ದಾಖಲೆಯಿದ್ದು, ಕಾಂಪೌಂಡ್ ನಿರ್ಮಿಸಲಾಗುತ್ತಿತ್ತು. ಪಕ್ಕದ ವಾಣಿಜ್ಯ ಮಳಿಗೆ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಂಪೌಂಡ್ ತೆರವುಗೊಳಿಸಿದ್ದಾರೆ. ಗ್ರಾಪಂ ವ್ಯಾಪ್ತಿಯಲ್ಲಿ ನೂರಾರು ಎಕರೆ ಕಂದಾಯ, ಅರಣ್ಯ ಹಾಗೂ ಗ್ರಾಮ ಠಾಣಾ ಒತ್ತುವರಿಯಾಗಿದ್ದರೂ ಪಿಡಿಒ ದುರುದ್ದೇಶದಿಂದ ಶಾಸಕರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದೆ ತೆರವುಗೊಳಿಸಿ ನಷ್ಟ ಉಂಟು ಮಾಡಿದ್ದಾರೆ ಎಂದರು.
ಪರವಾನಗಿ ಪಡೆಯದೇ ಕಾಂಪೌಂಡ್ ನಿರ್ಮಾಣ ಹಾಗೂ ನಮ್ಮ ಮನೆ ಪಕ್ಕದ
ಜಾಗದ ಹಿಂಭಾಗದ ಮನೆಯವರಿಗೆ ದಾರಿ ಬೇಕೆಂಬ ನೆಪವೊಡ್ಡಿ ಕಾಂಪೌಂಡ್ ಕೆಡವಿದ್ದಾರೆ. ಪ್ರಕರಣ ನ್ಯಾಯಾಲಯದಲ್ಲಿದ್ದರೂ ಪಿಡಿಒ ತೆರವುಗೊಳಿಸಿದ್ದಾರೆ. ಈ ಸಂಬಂಧ ನನಗೆ ನ್ಯಾಯ ಕೊಡಿಸಬೇಕೆಂದು ಒತ್ತಾಯಿಸಿದರು.
ಬಿ.ಕಣಬೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಕೆ.ಇಬ್ರಾಹಿಂ ಮಾತನಾಡಿ, ಗ್ರಾಪಂನಲ್ಲಿ ಹಣ ನೀಡಿದರೆ ದಾಖಲೆ ಇಲ್ಲದಿರುವ ಸರಕಾರಿ ಜಾಗಕ್ಕೂ ಇ ಸ್ವತ್ತು ಮಾಡಿಕೊಟ್ಟಿದ್ದಾರೆ. ಕಂದಾಯ ಇಲಾಖೆ ನೌಕರರ ನಿವೇಶನಕ್ಕೆ ಮೀಸಲಿಟ್ಟ ಪ್ರದೇಶವನ್ನು ಕೆಲವು ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡಿದ್ದು, ಪ್ರಭಾವಿಗಳ ಒತ್ತಡಕ್ಕೆ ಮಣಿದು ಗ್ರಾಪಂನಲ್ಲಿ ಖಾತೆ ಮಾಡಿಕೊಟ್ಟಿದ್ದಾರೆ.
ನೀರಾವರಿ ಕೆರೆ ಒತ್ತುವರಿ ಮಾಡಿದ್ದನ್ನು ತೆರವುಗೊಳಿಸುವಂತೆ ಜಿಲ್ಲಾ ಧಿಕಾರಿಗಳು ಆದೇಶ ಮಾಡಿದ್ದರೂ ಗ್ರಾಪಂನವರು ಕ್ರಮ ಕೈಗೊಂಡಿಲ್ಲ ಎಂದರು.
ನಮ್ಮ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾರೆ. ಈ ಎಲ್ಲ ಸಂಗತಿಗಳ ಸಮಗ್ರ ಮಾಹಿತಿ ಸಿಸಿ ಕ್ಯಾಮರಾಧಲ್ಲಿ ರ್ಸೆಏಯಾಗಿದ್ದು, ಪರಿಶೀಲಿಸಿದರೆ ಸತ್ಯಾಂಶ ಬೆಳಕಿಗೆ ಬರುತ್ತದೆ. ಈ ಬಗ್ಗೆಯೂ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
ಇತ್ತೀಚೆಗೆ ರಸ್ತೆ ಅಗಲೀಕರಣ ಸಂದರ್ಭದಲ್ಲಿ ಬಸ್ ನಿಲ್ದಾಣ ಆವರಣದಲ್ಲಿದ್ದ 19 ಅಂಗಡಿ- ಮಳಿಗೆಗಳನ್ನು ಯಾವುದೇ ಟಂಡರ್ ಹಾಗೂ ಪತ್ರಿಕಾ ಪ್ರಕಟಣೆ ನೀಡದೇ ಕಡೆವಿಸಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿಸಿದರು. ಗ್ರಾಪಂ ಮಾಜಿ ಸದಸ್ಯ ವಿನ್ಸಿಲೋಬೊ ಮಾತನಾಡಿ, ಗ್ರಾಪಂ ವ್ಯಾಪ್ತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ಅಕ್ರಮ ಇಸ್ವತ್ತಿಗೆ ಸಂಬಂಧಿಸಿದಂತೆ ಹಿಂದಿನ ಜಿಪಂ ಸಿಇಒ ದಾಖಲೆ ಪರಿಶೀಲಿಸಿ 450ಕ್ಕೂ ಹೆಚ್ಚು ಕಡತಗಳನ್ನು ತನಿಖೆಗೆ ಒಳಪಡಿಸಿದ್ದಾರೆ. ಅಕ್ರಮ ಕಾಂಪೌಂಡ್ ಹೆಸರಿನಲ್ಲಿ ಕ್ರಮ ಕೈಗೊಂಡಿರುವುದು ಸರಿಯಲ್ಲ.
ಬಸ್ ನಿಲ್ದಾಣ ದುರಸ್ತಿ, ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡದ ಇವರು ಭದ್ರಾ ಹಿನ್ನೀರು ನಿಲ್ಲುವ ಪ್ರದೇಶದಲ್ಲಿ ಸುಮಾರು 80ಲಕ್ಷ ರೂ. ವೆಚ್ಚದಲ್ಲಿ ಸಂತೆ ಮಾರ್ಕೆಟ್ ನಿರ್ಮಾಣ ಮಾಡಿದ್ದಾರೆ. ಇದರ ಬಗ್ಗೆ ತನಿಖೆ ಮಾಡಬೇಕೆಂದು ಒತ್ತಾಯಿಸಿದರು.
ಈ ಸಂಬಂಧ ಜಿಲ್ಲಾ ಧಿಕಾರಿ ಹಾಗೂ ಜಿಪಂ ಸಿಇಒ ಹಾಗೂ ಎಬಿಸಿ ಮತ್ತು ಲೋಕಾಯುಕ್ತಕ್ಕೆ ನಿಯೋಗದಲ್ಲಿ ತೆರಳಿ ದೂರು ಸಲ್ಲಿಸಿ, ತನಿಖೆಗೆ ಒತ್ತಾಯಿಸುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜೀವನ್, ಜೋಸೆಫ್ ಎಚ್.ಎಲ್, ಟಿಪ್ಪು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.