ಸುಜಿತ್ ಇನ್ನಿಲ್ಲ: ಸತತ ಮೂರು ದಿನಗಳ ಕಾರ್ಯಾಚರಣೆ: ಬದುಕಿಬರಲಿಲ್ಲ ಎರಡು ವರ್ಷದ ಕಂದಮ್ಮ
Team Udayavani, Oct 29, 2019, 7:55 AM IST
ತಿರುಚಿರಪಳ್ಳಿ: ಸತತ ಮೂರು ದಿನಗಳ ಕಾರ್ಯಾಚರಣೆ ನಡೆಸಿದರೂ ಕೊಳವೆಬಾವಿಯೊಳಗೆ ಬಿದ್ದಿದ್ದ ಎರಡು ವರ್ಷದ ಮಗು ಸುಜಿತ್ ವಿಲ್ಸನ್ ಉಳಿಸಿಕೊಳ್ಳಲಾಗಿಲ್ಲ, ಆತ ಮೃತಪಟ್ಟಿದ್ದಾನೆ, ಮಗುವಿನ ದೇಹ ಸಂಪೂರ್ಣ ಕೊಳೆತು ಹೋಗಿದ್ದು, ಛಿದ್ರವಾಗಿದೆ ಎಂದು ಅಧಿಕಾರಿಗಳು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಮಗುವನ್ನು ಉಳಿಸಿಕೊಳ್ಳಲೇಬೇಕೆಂದು ಎನ್ ಡಿಆರ್ ಎಫ್ ಮತ್ತು ಎಸ್ ಡಿಆರ್ ಎಫ್ ತಂಡಗಳು ನಿರಂತರವಾಗಿ ಕಾರ್ಯಾಚರಣೆ ನಡೆಸಿತ್ತು ಸೋಮವಾರ ಸಂಜೆಯವರೆಗೂ ರಕ್ಷಣಾ ಕಾರ್ಯ ಮುಂದುವರಿದಿದ್ದರೂ ಅದಾಗಲೇ ಕೊಳವೆಬಾವಿಯಿಂದ ಕೆಟ್ಟ ವಾಸನೆ ಹೊರಬರುತ್ತಿತ್ತು. ಕೂಡಲೇ ಮೃತದೇಹ ಹೊರತೆಗೆದು ಪೋಸ್ಟ್ ಮಾರ್ಟಂಗೆ ರವಾನಿಸಲಾಗಿದೆ ಎಂದು ಇಂದು ಬೆಳಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ.
ಮನೆಯ ಬಳಿ ಆಟವಾಡುತ್ತಿದ್ದ ಸುಜಿತ್ ಶುಕ್ರವಾರ ಸಂಜೆಯ ವೇಳೆ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ. ಮೊದಲು 25 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ, ನಂತರ ಕೆಳಕ್ಕೆ ಜಾರಿ 100 ಅಡಿ ಆಳದಲ್ಲಿ ಸಿಲುಕಿದ್ದಾನೆಂದು ಮಾಹಿತಿ ತಿಳಿದುಬಂದಿತ್ತು. ಆದರೇ 3 ದಿನಗಳ ಕಾರ್ಯಚರಣೆ ನಂತರವೂ ಉಳಿಸಿಕೊಳ್ಳಲಾಗಿಲ್ಲ
ತಮಿಳುನಾಡಿನ ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಮ್ ಸೇರಿದಂತೆ ಇತರ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಮಗುವಿನ ಹೆತ್ತವರನ್ನು ಭೇಟಿಯಾಗಿ ಸಾಂತ್ವಾನ ಹೇಳಿದ್ದರು. ಇದೀಗ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.