ಗುಳೇದಗುಡ್ಡ ಬಸ್ ನಿಲ್ದಾಣ ಕಾಮಗಾರಿ ಕಳಪೆ
Team Udayavani, Oct 29, 2019, 12:01 PM IST
ಗುಳೇದಗುಡ್ಡ: ಕೋಟ್ಯಂತರ ರೂ. ಖರ್ಚು ಮಾಡಿ ನವೀಕರಿಸಿದ್ದ ಪಟ್ಟಣದ ಬಸ್ ನಿಲ್ದಾಣದ ಮೇಲ್ಛಾವಣಿ ಮಳೆ ಬಂದಾಗ ಸೋರುತ್ತಿದೆ. ಪಟ್ಟಣದಲ್ಲಿನ ಬಸ್ ನಿಲ್ದಾಣದ ನವೀಕರಣ, ರಸ್ತೆ ಕಾಂಕ್ರೀಟ್ ಕಾಮಗಾರಿ ಕೈಗೊಳ್ಳಲಾಗಿತ್ತು. ಗುತ್ತಿಗೆದಾರ, ಅ ಧಿಕಾರಿಗಳ ನಿರ್ಲಕ್ಷ್ಯಕ್ಕೆ ಯೋಜನೆ ವ್ಯರ್ಥವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಎಷ್ಟು ಹಣ: 2018ರಲ್ಲಿ ನಂಜುಡಂಪ್ಪ ವರದಿ ಯೋಜನೆಯಲ್ಲಿ ಸುಮಾರು 2.25 ಕೋಟಿ ವೆಚ್ಚದಲ್ಲಿ ಪಟ್ಟಣದ ಬಸ್ ನಿಲ್ದಾಣದ ರಸ್ತೆ ಕಾಂಕ್ರೀಟ್, ನಿಲ್ದಾಣ ಮೇಲ್ದರ್ಜೆಗೇರಿಸುವ ಕಾಮಗಾರಿ ಕೈಗೆತ್ತಿಕೊಂಡಿತ್ತು. ಆದರೆ, ಕಾಮಗಾರಿ ಕಳಪೆಯಾಗಿದೆ. ಇದರಿಂದ ಮಳೆ ಬಂದರೆ ಬಸ್ ನಿಲ್ದಾಣ ಸೋರುತ್ತದೆ. ಇದರಿಂದ ಪ್ರಯಾಣಿಕರು ಕುರ್ಚಿ ಬಿಟ್ಟು ಎದ್ದು ನಿಲ್ಲುವಂತಹ ಸ್ಥಿತಿಯಿದೆ. ಬಸ್ ನಿಲ್ದಾಣದ ಮೇಲ್ಛಾವಣಿಗೆ ತಗಡುಗಳನ್ನು ಹಾಕಿ, ಮೇಲ್ದರ್ಜೆಗೇರಿಸಲಾಗಿದೆ. ಆದರೆ ಮೇಲ್ಛಾವಣಿಯ ತಗಡುಗಳಿಂದ ಹರಿಯುವ ಮಳೆ ನೀರು ಹರಿದು ಹೋಗಲು ವ್ಯವಸ್ಥೆ ಮಾಡಿಲ್ಲ. ಅಲ್ಲದೇ ನೀರು ಹರಿಯುವ ಜಾಗದಲ್ಲಿ ಹಳೆಯ ತಗಡುಗಳನ್ನು ಸಹ ಅಳವಡಿಸಿದ್ದು, ನಿಲ್ದಾಣ ಸೋರಲು ಕಾರಣ ಎನ್ನುತ್ತಾರೆ ಸಾರ್ವಜನಿಕರು.
ಆರಂಭದಲ್ಲಿ ಕಳಪೆಯಾಗಿತ್ತು: ಈ ಬಸ್ ನಿಲ್ದಾಣಕ್ಕೆ ಪರಸಿ ಜೋಡಿಸುವಾಗ ಒಡೆದು ಹೋದ ಕಲ್ಲುಗಳನ್ನು ಹಾಕಿ, ಬೇಕಾಬಿಟ್ಟಿಯಾಗಿ ಕಾಮಗಾರಿ ಕೈಗೊಂಡಿದ್ದರು. ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸಿದ್ದರು. ಅಧಿಕಾರಿಗಳು ಗುತ್ತಿಗೆದಾರರಿಗೆ ನೋಟಿಸ್ ನೀಡಿದ್ದರೂ ಎಚ್ಚೆತ್ತುಕೊಂಡಿಲ್ಲ.
ಈ ಸಂದರ್ಭದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದರಿಂದ ಮತ್ತೆ ಸರಿಯಾಗಿ ಕಲ್ಲುಗಳನ್ನು ಜೋಡಣೆ ಮಾಡಿದ್ದರು. ಅಲ್ಲದೇ ಬಸ್ ನಿಲ್ದಾಣದ ತಗಡುಗಳು ಸೋರುವ ಬಗ್ಗೆ ಆರಂಭದಲ್ಲಿಯೇ ಎಚ್ಚರಿಕೆ ನೀಡಿದರೂ ಗಮಹರಿಸಿಲ್ಲ.
ಬಸ್ ನಿಲ್ದಾಣದ ಮೇಲ್ಛಾವಣಿಗೆ ಕೆಲವು ಹೊಸ ಹಾಗೂ ಕೆಲ ಹಳೆಯ ತಗಡುಗಳನ್ನು ಜೋಡಿಸಲಾಗಿದೆ. ಕೋಟ್ಯಂತರ ರೂ. ಖರ್ಚು ಮಾಡಿ ಸರಕಾರ ಕಾಮಗಾರಿ ಮಾಡಿಸಿದೆ. ಕಾಮಗಾರಿ ಕಳಪೆಯಾಗಿದ್ದು, ಸರಕಾರದ ಹಣ ಪೋಲಾಗಿದೆ. ಈ ಬಗ್ಗೆ ತನಿಖೆಯಾಗಬೇಕು. ಇಲಾಖೆ ಬಸ್ ನಿಲ್ದಾಣದ ಮೇಲ್ಛಾವಣಿ ಸೋರದಂತೆ ಕ್ರಮ ಕೈಗೊಳ್ಳಬೇಕು. –ರಾಜು ತಾಪಡಿಯಾ, ಪುರಸಭೆ ಮಾಜಿ ಅಧ್ಯಕ್ಷರು, ಗುಳೇದಗುಡ್ಡ
ಗುಳೇದಗುಡ್ಡ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಈ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ದುರಸ್ತಿ ಮಾಡಲು ಸೂಚನೆ ನೀಡಿದ್ದು, ದುರಸ್ತಿಗೊಳಿಸಲಾಗುವುದು. ಬಸ್ ನಿಲ್ದಾಣದಲ್ಲಿ ಬಸ್ ಹೊರಡುವ ವೇಳಾಪಟ್ಟಿ ಹಾಕಲು ಹಾಗೂ ನಿಲ್ದಾಣ ಸ್ವತ್ಛವಾಗಿಟ್ಟುಕೊಳ್ಳುವಂತೆ ಸೂಚನೆ ನೀಡಿದ್ದೇನೆ. ಬಸ್ ನಿಲ್ದಾಣಕ್ಕೆ ಪೇಟಿಂಗ್ ಮಾಡಲು, ಹೆಸರು ಬರೆಸಲು ಕೂಡಾ ಸೂಚಿಸಿದ್ದೇನೆ. –ಬಸವರಾಜ ಅಮ್ಮನ್ನವರ, ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕೆಎಸ್‌ಆರ್‌ಟಿಸಿ ಬಾಗಲಕೋಟ
-ಮಲ್ಲಿಕಾರ್ಜುನ ಕಲಕೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.