ಮಲೆ ಮಹದೇಶ್ವರ ರಥೋತ್ಸವ ಸಂಪನ್ನ
Team Udayavani, Oct 30, 2019, 3:00 AM IST
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಬೆಳಗ್ಗೆ 7.45 ರಿಂದ 9 ರವರೆಗಿನ ಶುಭ ಕಾಲದಲ್ಲಿ ಮಹಾರಥೋತ್ಸವ ನಡೆಯಿತು. ಮಹಾರಥೋತ್ಸವದ ಹಿನ್ನೆಲೆಯಲ್ಲಿ ಬೆಳಗ್ಗೆ 7.45ರ ವೇಳೆಗೆ ಸಾಲೂರು ಬೃಹನ್ಮಠದ ಪಟ್ಟದ ಗುರುಸ್ವಾಮಿಗಳನ್ನು ಸತ್ತಿಗೆ ಸುರಪಾನಿ, ಮಂಗಳವಾದ್ಯಗಳ ಸಮೇತ ದೇವಾಲಯದ ಪ್ರಾಂಗಣಕ್ಕೆ ಕರೆ ತರಲಾಯಿತು.
ಬಳಿಕ, ಪಟ್ಟದ ಗುರುಸ್ವಾಮಿಗಳ ಸಾನ್ನಿಧ್ಯದಲ್ಲಿ ಬೇಡಗಂಪಣ ಅರ್ಚಕರು ಉತ್ಸವಮೂರ್ತಿಯನ್ನು ಸಿದ್ಧಗೊಳಿಸಿ ಧೂಪ, ದೀಪ, ಮಂಗಳಾರತಿ ಸೇರಿ ವಿಧಿ ವಿಧಾನಗಳೊಂದಿಗೆ ಪೂಜಾ ಕೈಂಕರ್ಯಗಳನ್ನು ಕೈಗೊಂಡು ಬಿಳಿ ಆನೆ ಉತ್ಸವ ನೆರವೇರಿಸಿದರು. ಬಳಿಕ, ಉತ್ಸವಮೂರ್ತಿಯನ್ನು ಹೂ ತಳಿರು ತೋರಣಗಳಿಂದ ಸಿಂಗರಿಸಿ, ಸಿದ್ಧಗೊಳಿಸಿದ್ದ ರಥೋತ್ಸವಕ್ಕೆ ಇಟ್ಟು ಬೂದುಗುಂಬಳಕಾಯಿ ಆರತಿ ಬೆಳಗುವ ಮೂಲಕ ಮಹಾರಥೋತ್ಸವಕ್ಕೆ 8.30ರ ವೇಳೆಗೆ ಚಾಲನೆ ನೀಡಲಾಯಿತು.
ಮಹಾರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ ನೆರೆದಿದ್ದ ಲಕ್ಷಾಂತರ ಭಕ್ತರು ಉಘೇ.. ಮಾದಪ್ಪ ಉಘೇ… ಮಾದಪ್ಪ ಎಂದು ಜಯ ಘೋಷಗಳನ್ನು ಕೂಗುತ್ತಾ ಭಕ್ತಿ ಮೆರೆದರು. ಮಹಾರಥೋತ್ಸವಕ್ಕೆ ಬೇಡಗಂಪಣ ಕುಲದ 101 ಹೆಣ್ಣುಮಕ್ಕಳು ಬೆಲ್ಲದ ಆರತಿ ಬೆಳಗಿ ರಂಗು ತಂದರು. ದೇವಾಲಯದ ಸುತ್ತಲೂ ಒಂದು ಸುತ್ತು ಪ್ರದಕ್ಷಿಣೆ ಹಾಕಿ ರಥೋತ್ಸವಕ್ಕೆ ತೆರೆ ಎಳೆಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.