ದಕ್ಷಿಣ ಕನ್ನಡದಲ್ಲಿ ನೆಲೆಸಲು ದಂಪತಿ ನಿರ್ಧಾರ!

Team Udayavani, Oct 30, 2019, 3:00 AM IST

Udayavani Kannada Newspaper

ಬೆಂಗಳೂರು: ಆಭರಣ, ಹಣದ ಆಸೆಗೆ ವೃದ್ಧ ದಂಪತಿಯನ್ನು ಕೊಲೆ ಮಾಡಿ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಕೊಲೆಪಾತಕ ಯುವ ದಂಪತಿ, ಧರ್ಮಸ್ಥಳಕ್ಕೂ ಭೇಟಿ ಕೊಟ್ಟು ಬಂದಿದ್ದರು ಎಂಬ ಸಂಗತಿ ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಅ.16ರಂದು ಗರುಡಾಚಾರ್‌ ಪಾಳ್ಯದಲ್ಲಿ ನಡೆದ ಚಂದ್ರೇಗೌಡ (66) ಅವರ ಪತ್ನಿ ಲಕ್ಷ್ಮಮ್ಮ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ವೆಂಕಟೇಶ್‌ ಆತನ ಪತ್ನಿ ಅರ್ಪಿತಾ ತಲೆಮರೆಸಿಕೊಂಡಿದ್ದರು.

ವೃದ್ಧ ದಂಪತಿಯನ್ನು ಕೊಂದ ಬಳಿಕ ಮಂಡ್ಯ ಕಡೆ ತೆರಳಿದರೆ ಕೆ.ಆರ್‌ ಪೇಟೆ ವ್ಯಾಪ್ತಿಯಲ್ಲಿ ನಡೆಸಿದ್ದ ಕೊಲೆಯಿಂದ ಅತ್ತ ಕಡೆ ಹೋಗುವುದು ಬೇಡ ಎಂದು ನಿರ್ಧರಿಸಿದ್ದರು. ಕಡೆಗೆ, ಈ ಹಿಂದೆ ಕಂಪನಿಯೊಂದರಲ್ಲಿ ಕೆಲಸ ಮಾಡಿದ್ದಾಗ ಪರಿಚಿತನಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಗೌತಮ್‌ ಮನೆಗೆ ತೆರಳುವುದು ಎಂದು ನಿರ್ಧರಿಸಿದ್ದರು.

ವಾಹಿನಿಗಳಲ್ಲಿ ಬರುವ ಕ್ರೈಂ ಸಂಬಂಧಿತ ಕಾರ್ಯಕ್ರಮಗಳನ್ನು ನೋಡುವ ಹವ್ಯಾಸ ಬೆಳೆಸಿಕೊಂಡಿರುವ ವೆಂಕಟೇಶ್‌, ಕೊಲೆ ನಡೆದ ಬಳಿಕ ಪೊಲೀಸರು ಯಾವೆಲ್ಲಾ ಕ್ರಮಗಳನ್ನು ಅನುಸರಿಸುತ್ತಾರೆ ಎಂಬುದನ್ನು ತಿಳಿದುಕೊಂಡಿದ್ದ. ಹೀಗಾಗಿಯೇ, ಪತ್ನಿ ಹಾಗೂ ಆತನ ಎರಡೂ ಮೊಬೈಲ್‌ಗ‌ಳನ್ನು ಅಮೃತಹಳ್ಳಿಯ ಮನೆಯಲ್ಲಿಯೇ ಬಿಟ್ಟು ಹೋಗಿದ್ದ. ಕಾರಿನ ಜಿಪಿಎಸ್‌ ಕಿತ್ತಿಟ್ಟು ಬಿಟ್ಟು ಹೋಗಿದ್ದ.

ಪೊಲೀಸರು ಹಿಂಬಾಲಿಸಿದರೂ ಸಿಗಬಾರದು ಎಂಬ ಉದ್ದೇಶದಿಂದ ಹಾಸನಕ್ಕೆ ಬಸ್‌ನಲ್ಲಿ ತೆರಳಿದ್ದ ಆರೋಪಿ ದಂಪತಿ ಅಲ್ಲಿಂದ ಧರ್ಮಸ್ಥಳಕ್ಕೆ ತೆರಳಿದ್ದರು. ಧರ್ಮಸ್ಥಳದಲ್ಲಿ ಕೆಲಕಾಲ ಇದ್ದು ದೇವಾಲಯಗಳಿಗೆ ಭೇಟಿ ನೀಡಿದ ಕೊಲೆಪಾತಕರು, ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಮಿತ್ತಮಂಜಲ್‌ ಗ್ರಾಮದ ಗೌತಮ್‌ ಮನೆಗೆ ಹೋಗಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಮನೆಯಲ್ಲಿ ಸಮಸ್ಯೆ ಇದೆ ಕೆಲವು ದಿವಸ ಇಲ್ಲಿಯೇ ಉಳಿದುಕೊಳ್ಳುತ್ತೇವೆ ಎಂದು ಗೌತಮ್‌ಗೆ ಸುಳ್ಳು ಹೇಳಿದ್ದ ಆರೋಪಿ ವೆಂಕಟೇಶ್‌ ದಂಪತಿ ಅವರಿಗೆ ಅನುಮಾನವೇ ಬರದಂತೆ ನಡೆದುಕೊಂಡಿದ್ದರು. ಎರಡು ಮೂರು ದಿನ ಕಳೆದಂತೆ ನಾವು ಇದೇ ಊರಲ್ಲಿ ಬಾಡಿಗೆ ಮನೆಯಲ್ಲಿ ಉಳಿದುಕೊಂಡು ಕೆಲಸ ಮಾಡಿಕೊಂಡು ಇರುತ್ತೇವೆ. ಊರಿನ ಕಡೆ ಹೋದರೆ ನೆಮ್ಮದಿ ಇರುವುದಿಲ್ಲ ಎಂದು ನಂಬಿಸಿದ್ದರು.

ಅಷ್ಟೇ ಅಲ್ಲದೆ, ಮನೆಗೆ ಅಗತ್ಯವಿರುವ ಕೆಲವು ವಸ್ತುಗಳನ್ನು ಖರೀದಿಸಿ ತಂದಿಟ್ಟುಕೊಂಡಿದ್ದರು. ಕೆಲವು ತಿಂಗಳುಗಳು ಕಳೆದ ಬಳಿಕ ಬೆಂಗಳೂರಿಗೆ ವಾಪಾಸ್‌ ಬರುವ ಯೋಚನೆ ಅವರದ್ದಾಗಿತ್ತು. ಈ ಮಧ್ಯೆಯೇ ಆರೋಪಿಗಳು ಬಲೆ ಬಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

6-dandeli

Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.