ಆರ್ಥಿಕತೆ ಉತ್ತೇಜನಕ್ಕೆ ಭರಪೂರ ಟಾನಿಕ್?
ಭಾರೀ ಪ್ರಮಾಣದ ತೆರಿಗೆ ಕಡಿತಕ್ಕೆ ಕೇಂದ್ರ ಸಿದ್ಧತೆ
Team Udayavani, Oct 30, 2019, 12:56 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಆರ್ಥಿಕ ವ್ಯವಸ್ಥೆ ಬಲಪಡಿಸಲು ಕೇಂದ್ರ ಸರಕಾರವು, ಭಾರೀ ಪ್ರಮಾಣದಲ್ಲಿ ತೆರಿಗೆ ಕಡಿತ ಹಾಗೂ ಸುಧಾರಣೆ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.
ಮುಂದಿನ ಫೆಬ್ರವರಿಗೆ ಕೇಂದ್ರ ಬಜೆಟ್ ಮಂಡಿಸಲಿದ್ದು, ಇದಕ್ಕೆ ನವೆಂಬರ್‌ನಲ್ಲೇ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ದೀರ್ಘಾವಧಿ ಬಂಡವಾಳ ಹೂಡಿಕೆ ಲಾಭ ತೆರಿಗೆ (ಎಲ್‌ಟಿಸಿಜಿ), ಷೇರು ವಹಿವಾಟು ತೆರಿಗೆ (ಎಸ್‌ಟಿಟಿ) ಹಾಗೂ ಲಾಭಾಂಶ ಹಂಚಿಕೆ ತೆರಿಗೆ (ಡಿಡಿಟಿ)ಯನ್ನು ಕಡಿತಗೊಳಿಸುವ ಸಾಧ್ಯತೆ ಇದೆ.
ಈ ಸಂಬಂಧ ಪ್ರಧಾನಮಂತ್ರಿ ಕಾರ್ಯಾಲಯವು, ಹಣಕಾಸು ಸಚಿವಾಲಯದ ತೆರಿಗೆ ಇಲಾಖೆ ಹಾಗೂ ನೀತಿ ಆಯೋಗದ ಜೊತೆ ಚರ್ಚೆ ನಡೆಸುತ್ತಿದೆ. ನವೆಂಬರ್ ತಿಂಗಳಾಂತ್ಯದಲ್ಲಿ ಅಂತಿಮ ರೂಪುರೇಷೆ ನಿಗದಿಪಡಿಸಲಿದೆ ಎಂದು ಮೂಲಗಳು ತಿಳಿಸಿವೆ. ಫೆಬ್ರವರಿ 3ರಂದು ಕೇಂದ್ರ ಬಜೆಟ್ ಮಂಡಿಸಲಿದ್ದು, ಇದಕ್ಕೂ ಮುನ್ನವೇ ತೆರಿಗೆ ಕಡಿತವನ್ನು ಘೋಷಿಸುವ ಸಂಭವ ಇದೆ.
ಏಷ್ಯಾದಲ್ಲೇ ಎರಡನೇ ಅತಿ ದೊಡ್ಡ ಆರ್ಥಿಕತೆ ಹೊಂದಿರುವ ಭಾರತದಲ್ಲಿ ಅಟೋಮೊಬೈಲ್ ಮತ್ತಿತರ ವಲಯಗಳಲ್ಲಿ ಹಿಂಜರಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜಿಎಸ್‌ಟಿ ಕಡಿತ ಸೇರಿದಂತೆ ಉದ್ಯಮಿಗಳಿಗೆ ಪೂರಕ ಸುಧಾರಣೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಷೇರು ಮಾರುಕಟ್ಟೆಯಲ್ಲಿ ಹುಮ್ಮಸ್ಸು: ಸೆನ್ಸೆಕ್ಸ್ 581 ಅಂಕ ಏರಿಕೆ
ಈ ದೀಪಾವಳಿಯು ಷೇರು ಹೂಡಿಕೆದಾರರಿಗೆ ಹೊಸ ಭರವಸೆಯ ಬೆಳಕು ಮೂಡಿಸಿದ್ದು, ಹಬ್ಬದ ಮಾರನೇ ದಿನದ ವಹಿವಾಟಿನಲ್ಲೇ ಸೆನ್ಸೆಕ್ಸ್ ಭರ್ಜರಿ ಏರಿಕೆ ದಾಖಲಿಸಿದೆ. ಕೇಂದ್ರ ಸರಕಾರವು ಆರ್ಥಿಕತೆಗೆ ಉತ್ತೇಜನ ನೀಡಲು ಇನ್ನಷ್ಟು ಕ್ರಮಗಳನ್ನು ಘೋಷಿಸಲಿದೆ ಹಾಗೂ ಆದಾಯ ತೆರಿಗೆ ಕಡಿತ ಮಾಡಲಿದೆ ಎಂಬ ಸುದ್ದಿಯು ಹೂಡಿಕೆದಾರರಿಗೆ ಹುಮ್ಮಸ್ಸು ನೀಡಿದೆ.
ಪರಿಣಾಮ ಮಂಗಳವಾರ ಇವರು ಷೇರುಗಳ ಖರೀದಿಯಲ್ಲಿ ಆಸಕ್ತಿ ವಹಿಸಿದ ಕಾರಣ, ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 581 ಅಂಕ ಏರಿಕೆಯಾಗಿ, 39,831ರಲ್ಲಿ ವಹಿವಾಟು ಅಂತ್ಯಗೊಳಿಸಿತು. ಇದು ಸುಮಾರು 4 ತಿಂಗಳ ಬಳಿಕದ ದಾಖಲೆಯಾಗಿದೆ. ಅದೇ ರೀತಿ ನಿಫ್ಟಿ 159 ಅಂಕ ಏರಿಕೆಯಾಗಿ ದಿನಾಂತ್ಯಕ್ಕೆ 11,786ಕ್ಕೆ ತಲುಪಿತು. ಟಾಟಾ ಮೋಟಾರ್ಸ್ ಷೇರುಗಳು ಶೇ.17, ಟಾಟಾ ಸ್ಟೀಲ್, ಯೆಸ್ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಮಾರುತಿ ಸುಜುಕಿ, ಟಿಸಿಎಸ್ ಷೇರುಗಳು ಶೇ.7.09 ಹೆಚ್ಚಳ ಕಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.