ತಾಕತ್ತಿದ್ದರೆ ಬಿ.ಎಸ್ ಯಡಿಯೂರಪ್ಪ ವಿಧಾನಸಭೆ ವಿಸರ್ಜನೆ ಮಾಡಲಿ: ಉಗ್ರಪ್ಪ


Team Udayavani, Oct 30, 2019, 12:34 PM IST

ugra

ಕೊಪ್ಪಳ: ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಜನಾದೇಶ ಇಲ್ಲದಿದ್ದರೂ ಅಡ್ಡ ದಾರಿ ಹಿಡಿದು ಅಧಿಕಾರಕ್ಕೆ ಬಂದಿದ್ದಾರೆ. ಇವರಿಗೆ ತಾಕತ್ತಿದ್ದರೆ ವಿಧಾನಸಭೆ ವಿಸರ್ಜನೆ ಮಾಡಿ‌ ಚುನಾವಣೆಗೆ ಹೋಗಲಿ ಎಂದು ಮಾಜಿ ಸಂಸದ ವಿ ಎಸ್ ಉಗ್ರಪ್ಪ ಸವಾಲೆಸಿದಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿ  ಮಾತನಾಡಿ, ಉತ್ತರ ಕರ್ನಾಟಕ ಹಲವು ಜಿಲ್ಲೆಯಲ್ಲಿ‌ ನೆರೆ ಬಂದು ಲಕ್ಷ ಕೋಟಿ ಹಾನಿಯಾಗಿದೆ. ರಾಜ್ಯ ಸರ್ಕಾರವೇ ಕೇಂದ್ರಕ್ಕೆ ವರದಿ ನೀಡಿದೆ. ನಾವು ರಾಜ್ಯಪಾಲರಿಗೆ ಅಧ್ಯಯನದ ವರದಿ ನೀಡಿದ್ದೇವೆ. ಕೇಂದ್ರಕ್ಕೂ ಒತ್ತಾಯ ಮಾಡಿದ್ದೇವೆ. ಸಾಲ ಮನ್ನಾ ಮಾಡಿ ಮನೆ ಕಟ್ಟಿ ಕೊಡಿ ಎಂದು ಹೇಳಿದ್ದೇವೆ. ಆದರೆ ಇದೇ ಯಡಿಯೂರಪ್ಪ ಈ ಹಿಂದೆ ನಾನು ಕೇಳಿದ ಪ್ರಶ್ನೆಗೆ ಸಾಲ ಮನ್ನಾ ಮಾಡಲು ನೋಟ್ ಪ್ರಿಂಟ್ ಮಾಡುವ ಮಿಷಿನ್ ಇಟ್ಟಿಲ್ಲ ಎಂದು ಪರಿಷತ್ ನಲ್ಲಿ ಉತ್ತರ ಕೊಟ್ಟಿದ್ದಾರೆ. ಕೇಂದ್ರ ಅಲ್ಪ ಅನುದಾನ ಕೊಟ್ಟಿದ್ದು ಬಿಟ್ಟರೆ ಈವರೆಗೂ ಪರ್ಯಾಯ ವ್ಯವಸ್ಥೆ ಮಾಡುವ ಕೆಲಸ ಆಗಿಲ್ಲ. ನೆರೆ ಸಂತ್ರಸ್ತರ ಸಮಸ್ಯೆ ಆಲಿಸುವುದು ಬಿಟ್ಟು ಉಪ ಚುನಾವಣೆಗೆ ಬಿಎಸ್ ವೈ  ಸಮಯ ನಿಗದಿ ಮಾಡುತ್ತಾರೆ.

ಕಾಂಗ್ರೆಸ್ ನಾಯಕರ ಮನೆ ಮೇಲೆ ಮಾತ್ರ ಐಟಿ ದಾಳಿ ನಡೆಯುತ್ತಿವೆ. ಹಾಗಾದರೆ ಬಿಜೆಪಿ ಅವರು ಸತ್ಯ ಹರಿಶ್ಚಂದ್ರರಾ ? ಐಟಿ ಅಧಿಕಾರಿಗಳಿಗೆ ಇದು ಕಣ್ಣಿಗೆ ಕಾಣುತ್ತಿಲ್ಲವಾ ? ಮಹಾರಾಷ್ಟ್ರ ಚುನಾವಣೆ ಸಂಬಂಧ ಸಾವರ್ಕರ್ ವಿಷಯ ಚರ್ಚೆಗೆ ತಂದರು. ರಾಮ ಮಂದಿರ ವಿಷಯ ಕೂಡ ಚರ್ಚಗೆ ಬಂದವು.  ಇವೆಲ್ಲ ಚುನಾವಣೆ ಇದ್ದಾಗ ಮಾತ್ರ ನೆನಪಾಗುತ್ತವೆ. ಜನರಿಗೆ ಭಾವನಾತ್ಮಕ ವಿಷಯ ಮುಂದಿಟ್ಟು ಸತ್ಯವನ್ನೆ  ಮರೆ ಮಾಚುತ್ತಿದ್ದಾರೆ. ದೇಶದ ಆರ್ಥಿಕ ಸ್ಥಿತಿ ಅಧೋಗತಿಗೆ ಹೋಗುತ್ತಿದ್ದರೂ ಅದರ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಗುಡುಗಿದರು.

ಇನ್ನೂ ಸಿದ್ದರಾಮಯ್ಯ ಅವರು ವಿಪಕ್ಷದ ನಾಯಕರಾಗಿ ನೆರೆ ಸಂತ್ರಸ್ತರ ಅಳಲು ಆಲಿಸಿದ್ದಾರೆ. ಆದರೆ ಬಿ ಎಸ್ ಯಡಿಯೂರಪ್ಪ ಅವರು, ಸಿದ್ದರಾಮಯ್ಯ ಪ್ರಚಾರಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಮೊದಲು ನೆರೆ ಸಂತ್ರಸ್ತರಿಗೆ ಅನುದಾನ ಬಿಡುಗಡೆ ಮಾಡಿಸಲಿ ಎಂದರು.

ಟಿಪ್ಪು ವಿಷಯ ಪಠ್ಯದಿಂದ ತೆಗೆಯುವ ವಿಚಾರದ ಕುರಿತು ಮಾತನಾಡಿದ ಅವರು   ಟಿಪ್ಪು ಜಯಂತಿಯಲ್ಲಿ ಜಗದೀಶ ಶೆಟ್ಟರ್ ಸಹಿತ ಬಿಜೆಪಿಯವರೇ ಪಾಲ್ಗೊಂಡಿದ್ದಾರೆ. ಈಗ ಅವರೇ ಟಿಪ್ಪು ಜಯಂತಿ ಆಚರಣೆಯನ್ನು ಕೈ ಬಿಟ್ಟಿದ್ದಾರೆ. ಇವರು ಭಾವನಾತ್ಮಕ ವಿಷಯ ಮುಂದಿಟ್ಡು ಜನರಿಗೆ ಯಾಮಾರಿಸುತ್ತಿದ್ದಾರೆ. ಇವರೆಲ್ಲ ಸತ್ಯ ಹರಿಶ್ಚಂದ್ರನ ಮೊಮ್ಮೊಕ್ಕಳಾ ಎಂದರಲ್ಲದೆ ರಾಷ್ಟ್ರಪತಿ ಕೋವಿಂದ್ ಅವರು ರಾಜ್ಯಕ್ಕೆ ಬಂದಾಗ ಟಿಪ್ಪು ಬಗ್ಗೆ‌ ಗುಣಗಾನ ಮಾಡಿ ದೇಶಪ್ರೇಮಿ ಎಂದಿದ್ದಾರೆ ಅದನ್ನ ಬಿಜೆಪಿ ಅರಿತುಕೊಳ್ಳಲಿ ಎಂದರು.

ಟಾಪ್ ನ್ಯೂಸ್

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.