ನಿಲ್ದಾಣ ಇದೆ; ಬಸ್‌ಗಳೇ ಬರ್ತಿಲ್ಲ!
ನಿರ್ಮಾಣಗೊಂಡು ಹಲವು ವರ್ಷಗಳಾದರೂ ನಿಲ್ದಾಣದ ಬಳಕೆಯೇ ಇಲ್ಲ
Team Udayavani, Oct 30, 2019, 3:16 PM IST
ಮಂಜುನಾಥ ಹಗೇದ್
ಚಿಕ್ಕಜಾಜೂರು: ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಾಣವಾಗಿ ವರ್ಷಗಳೇ ಕಳೆದಿವೆ. ಆದರೆ ನಿಲ್ದಾಣದ ಹತ್ತಿರ ನಿಲ್ಲಬೇಕಾದ ಬಸ್‌ಗಳು ಗ್ರಾಮದ ರಸ್ತೆ ಬದಿಗಳಲ್ಲಿ ನಿಲ್ಲುವುದರಿಂದ ನಿಲ್ದಾಣ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ಸುತ್ತಮುತ್ತಲಿನ 32 ಗ್ರಾಮಗಳಿಗೆ ವ್ಯಾಪಾರ-ವಹಿವಾಟಿಗೆ ಅನುಕೂಲವಾಗಿರುವ ಮಧ್ಯವರ್ತಿ ಸ್ಥಳ ಇದು. ಅಲ್ಲದೆ ರೈಲ್ವೆ ಜಂಕ್ಷನ್ ಕೂಡ ಹೊಂದಿದೆ. ಚೆನ್ನೈ, ಬೆಂಗಳೂರು, ಮೈಸೂರು, ಧಾರವಾಡ, ಹುಬ್ಬಳ್ಳಿ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಗುಂತಕಲ್, ಮಂತ್ರಾಲಯ, ವಾರಣಾಸಿಯಂತಹ ಪ್ರಮುಖ ನಗರಗಳಿಗೆ ಇಲ್ಲಿಂದ ಪ್ರಯಾಣಿಸಬಹುದು.
ಸುಮಾರು 5-6 ಸಾವಿರ ಜನಸಂಖ್ಯೆ ಇರುವ ಗ್ರಾಮಕ್ಕೆ ಬಹಳಷ್ಟು ವರ್ಷಗಳ ಕಾಲ ಬಸ್ ನಿಲ್ದಾಣವೇ ಇಲ್ಲದೆ ಜನರು ಸಮಸ್ಯೆ ಎದುರಿಸುತ್ತಿದ್ದರು. 2012-13ನೇ ಸಾಲಿನಲ್ಲಿ ಸುಮಾರು 6 ಲಕ್ಷ ರೂ. ವ್ಯಯಿಸಿ ನಿರ್ಮಿತಿ ಕೇಂದ್ರ ಮೇಲುಸ್ತುವಾರಿಯಲ್ಲಿ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ ಗ್ರಾಮಕ್ಕೆ ಆಗಮಿಸುವ ಎಲ್ಲಾ ಬಸ್‌ಗಳು ರಸ್ತೆ ಬದಿಯಲ್ಲೇ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ಹೋಗುತ್ತವೆ. ಇದರಿಂದ ಸಾಕಷ್ಟು ಅಪಘಾತಗಳಾಗಿದ್ದೂ ಉಂಟು.
ದಿನನಿತ್ಯ ಸಾವಿರಾರು ಜನ ಪ್ರಯಾಣಿಕರು ಬಂದು ಹೋಗುವ ಗ್ರಾಮದಲ್ಲಿ ಸರ್ಕಾರಿ ಬಸ್ ಸೇರಿದಂತೆ 50 ರಿಂದ 60 ಬಸ್‌ಗಳು ಸಂಚರಿಸುತ್ತವೆ. ಪ್ರಯಾಣಿಕರಿಗೆ ಅನುಕೂಲವಾಗಲೆಂದು ಎರಡು ವ್ಯಾಪಾರ ಮಳಿಗೆಗಳಿರುವ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಆದರೆ ಬಸ್ ನಿಲ್ದಾಣ ಉದ್ಘಾಟನೆಯಾಗಿ ವರ್ಷಗಳೇ ಕಳೆದರೂ ಇದುವರೆಗೂ ಒಂದೂ ಬಸ್ ಬಾರದಿರುವುದು ವಿಪರ್ಯಾಸ.
ಪ್ರಯಾಣಿಕರು ಕುಳಿತುಕೊಳ್ಳುವ ಸಿಮೆಂಟ್ ಆಸನವನ್ನು ಕಿಡಿಗೇಡಿಗಳು ಒಡೆದು ಹಾಳು ಮಾಡಿದ್ದಾರೆ. ಅಲ್ಲಿಯೇ ಮಲ ಮೂತ್ರ ವಿಸರ್ಜನೆಯನ್ನೂ ಮಾಡುತ್ತಾರೆ. ರಾತ್ರಿಯಾದರೆ ಮದ್ಯಪಾನಿಗಳ ಹಾಗೂ ಹರಟೆ ಪ್ರಿಯರ ಅಡ್ಡೆಯಾಗಿ ಮಾರ್ಪಟ್ಟಿದೆ. ಬಸ್ ನಿಲ್ದಾಣದ ಸುತ್ತ ಕೊಳಚೆ ನೀರು ಶೇಖರಣೆ ಆಗುತ್ತಿದ್ದು, ಗಿಡಗಂಟಿಗಳು ಬೆಳೆದು ವಿಷಜಂತುಗಳ ತಾಣವಾಗಿದೆ. ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಬಸ್ ನಿಲ್ದಾಣದ ಅಭಿವೃದ್ಧಿಗೆ ಒತ್ತು ನೀಡಿ ಮೂಲ ಸೌಕರ್ಯಗಳನ್ನು ಕಲ್ಪಿಸಲು ಇಚ್ಛಾಶಕ್ತಿ ತೋರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.