ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ


Team Udayavani, Oct 31, 2019, 3:00 AM IST

upa-chubnacva

ಕೊಳ್ಳೇಗಾಲ: ನ.12ರಂದು ಪಟ್ಟಣದ 19ನೇ ವಾರ್ಡಿನ ನಗರಸಭೆಯ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪದ್ಮಾ ವೀರಣ್ಣ ಬುಧವಾರ ನಾಮಪತ್ರ ಸಲ್ಲಿಸಿದರು. ಪಟ್ಟಣದ 19ನೇ ವಾರ್ಡಿನ ಕಾಂಗ್ರೆಸ್‌ ಸದಸ್ಯೆ ಸುಧಾ ನಿಧನರಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಚುನಾವಣಾ ಆಯೋಗ ದಿನಾಂಕವನ್ನು ನಿಗದಿಪಡಿಸಿ, ಪ್ರಕಟಣೆ ಹೊರಡಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪದ್ಮಾ ವೀರಣ್ಣ ನಾಮಪತ್ರವನ್ನು ಸಲ್ಲಿಸಿದರು.

ಮಾಜಿ ಶಾಸಕ ಜಿ.ಎನ್‌.ನಂಜುಂಡಸ್ವಾಮಿ ನೇತೃತ್ವ: ಪಟ್ಟಣದ ಡಾ.ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವ ವಿನಾಯಕ ದೇವಾಲಯದಲ್ಲಿ ಮಾಜಿ ಶಾಸಕ ಜಿ.ಎನ್‌.ನಂಜುಂಡಸ್ವಾಮಿ ನೇತೃತ್ವದಲ್ಲಿ ಸೇರಿದ ಕಾರ್ಯಕರ್ತರು ಮೆರವಣಿಗೆ ಮೂಲಕ ಆಗಮಿಸಿ ತಾಲೂಕು ಕಚೇರಿಯ ಆವರಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರವನ್ನು ಚುನಾವಣಾಧಿಕಾರಿ ಹೊನ್ನೇಗೌಡ ಅವರಿಗೆ ಸಲ್ಲಿಸಿದರು.

ನೂರಕ್ಕೆ ನೂರು ಗೆಲುವು ಖಚಿತ: ನಾಮಪತ್ರ ಸಲ್ಲಿಸಿದ ಬಳಿಕ ಮಾಜಿ ಶಾಸಕ ಜಿ.ಎನ್‌.ನಂಜುಂಡಸ್ವಾಮಿ ಮಾತನಾಡಿ, ಪಕ್ಷದಲ್ಲಿ ಒಡಕು ಉಂಟಾಗಿ ಮೂರು ಬಣಗಳಾಗಿತ್ತು. ಈಗ ಎಲ್ಲಾ ಮೂರು ಬಣಗಳನ್ನು ಒಟ್ಟಾಗಿ ಸೇರಿಸಿ ಉಪ ಚುನಾವಣೆಯನ್ನು ಎದುರಿಸಲು ಸಜ್ಜಾಗಿದ್ದು, ಬಿಜೆಪಿ ಅಭ್ಯರ್ಥಿ ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಚುನಾವಣಾ ಪ್ರಚಾರ: ವಾರ್ಡಿನಲ್ಲಿ ಈ ಹಿಂದೆ ಸ್ಪರ್ಧೆ ಮಾಡಿ ಗೆದ್ದಿದ್ದ ಕಾಂಗ್ರೆಸ್‌ನ ಸುಧಾ ನಿಧನರಾದರು. ಅವರ ಸಾವು ಅನಿರೀಕ್ಷಿತವಾಯಿತು. ತೆರವಾದ ಸ್ಥಾನಕ್ಕೆ ಚುನಾವಣೆ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಆಯೋಗದ ನೀತಿ, ನಿಯಮವನ್ನು ಸಂವಿಧಾನ ಚೌಕಟ್ಟಿನಲ್ಲಿ ಅನುಸರಿಸಿ ಚುನಾವಣಾ ಪ್ರಚಾರ ಕೈಗೊಳ್ಳುವುದಾಗಿ ಹೇಳಿದರು.

ಬಿಜೆಪಿಯಿಂದ ಮಾತ್ರ ವಾರ್ಡ್‌ ಅಭಿವೃದ್ಧಿ: ವಾರ್ಡ್‌ನ ಅಭಿವೃದ್ಧಿಗೆ ಬಿಜೆಪಿ ಅಭ್ಯರ್ಥಿಯಿಂದ ಮಾತ್ರ ಸಾಧ್ಯವಾಗಿದ್ದು, ವಾರ್ಡಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುವುದು. ಪ್ರಧಾನಿ ನರೇಂದ್ರಮೋದಿ ಆಡಳಿತ ಮತ್ತು ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ಆಡಳಿತವಿದ್ದು, ಮತದಾರರು ಬಿಜೆಪಿ ಅಭ್ಯರ್ಥಿಗೆ ಹೆಚ್ಚು ಮತ ನೀಡುವ ವಿಶ್ವಾಸ ಇದೆ ಎಂದರು.

ಅಭ್ಯರ್ಥಿ ಪದ್ಮಾ ವೀರಣ್ಣ ಮಾತನಾಡಿ, ಇದೇ ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದು, ವಾರ್ಡಿನ ಎಲ್ಲಾ ಮತದಾರರು ಮನೆಗೂ ಮನೆಗೂ ತೆರಳಿ ಮತಯಾಚನೆ ಮಾಡುವುದಾಗಿ ಹೇಳಿದ ಅವರು, ಮತ ನೀಡಿ ಗೆಲ್ಲಿಸಿದ ಮತದಾರರಿಗೆ ವಾರ್ಡಿನಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಹಿಂದುಳಿದ ಮೋರ್ಚಾ ನಗರ ಮಂಡಲದ ಅಧ್ಯಕ್ಷ ಮಹದೇವಪ್ಪ, ಬಿಜೆಪಿ ಟೌನ್‌ ಅಧ್ಯಕ್ಷ ಲಕ್ಷ್ಮಿಪತಿ, ನಗರಸಭಾ ಸದಸ್ಯರಾದ ಜಿ.ಪಿ.ಶಿವಕುಮಾರ್‌, ಕವಿತಾ, ನಾಗಣ್ಣ, ಚಿಂತು ಪರಮೇಶ್‌, ಜಿಪಂ ಸದಸ್ಯ ನಾಗರಾಜು, ಮುಖಂಡರಾದ ಇನ್ಸಾರ್‌, ಶಿವಕುಮಾರ್‌, ಕಿನಕನಹಳ್ಳಿ ರಾಚಯ್ಯ, ಟಿವಿಎಸ್‌ ಪ್ರಭು, ವಿರೂಪಾಕ್ಷ, ಶಿವಮೂರ್ತಿ ಇತರರು ಇದ್ದರು.

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.