ಕರಾವಳಿಯಲ್ಲಿ ಉತ್ತಮ ಮಳೆ ನಿರೀಕ್ಷೆ
Team Udayavani, Oct 31, 2019, 5:56 AM IST
ಮಂಗಳೂರು: ಅರಬಿ ಸಮುದ್ರ, ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯ ಕರಾವಳಿಯಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಮುನ್ನೆಚ್ಚರಿಕೆ ದೃಷ್ಟಿಯಿಂದ ಅಪೂರ್ವ, ಅಮರ್ತ್ಯ, ರಾಜಧೂತ್ ಮತ್ತು ಸಾವಿತ್ರಿ ಫುಲೆ ನೌಕೆಗಳು ಮಂಗಳೂರು ಬಂದರಿನಲ್ಲಿ ಸಿದ್ಧವಾಗಿ ನಿಂತಿವೆ.
ಹವಾಮಾನ ಇಲಾಖೆಯು ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿಯಲ್ಲಿ ಬುಧವಾರ ಉತ್ತಮ ಮಳೆಯಾಗಿತ್ತು. ಮಂಗಳೂರು ನಗರದಲ್ಲಿ ದಿನವಿಡೀ ಬಿಟ್ಟು ಬಿಟ್ಟು ಮಳೆಯಾಗಿದ್ದು, ಸಂಜೆ, ರಾತ್ರಿ ವೇಳೆಗೆ ಮಳೆ ಬಿರುಸು ಪಡೆದಿತ್ತು. ಪುತ್ತೂರು, ಬಂಟ್ವಾಳ, ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆಯಾಗಿದೆ. ಗೋವಾ ಗಡಿ ಸಮೀಪ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಸುವರ್ಣ ಜ್ಯೋತಿ ಬೋಟಿನಿಂದ ಸಮುದ್ರಕ್ಕೆ ಧುಮುಕಿ ಕಣ್ಮರೆ ಯಾಗಿರುವ ಒಡಿಶಾದ ಮೀನುಗಾರ ಚೋಟುವಿನ ದೇಹ ಇನ್ನೂ ಪತ್ತೆಯಾಗಿಲ್ಲ.
ಮೀನುಗಾರರು, ಪ್ರವಾಸಿಗರಿಗೆ ಎಚ್ಚರಿಕೆ
ಕಾಸರಗೋಡು: ಜಿಲ್ಲೆಯಲ್ಲಿ ಅ. 31 ಮತ್ತು ನಾಳೆ ನ. 1ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲೋ ಅಲೆರ್ಟ್ ಘೋಷಿಸಲಾಗಿದೆ ಎಂದು ತಿರುವನಂತಪುರ ಹವಾಮಾನ ನಿಗಾ ಕೇಂದ್ರ ತಿಳಿಸಿದೆ. ಸಮುದ್ರ ಅಬ್ಬರಿಸುತ್ತಿರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ತೆರಳಬಾರದು ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ಬಾಬು ತಿಳಿಸಿದ್ದಾರೆ.
ಮುಂದಿನ ಆದೇಶ ಬರುವ ತನಕ ಪ್ರವಾಸಿಗಳು ಬೀಚ್‌ಗಳಿಗೆ ತೆರಳದಂತೆ ಎಚ್ಚರಿಕೆ ನೀಡಿದ್ದಾರೆ. ಕರಾವಳಿ ಪ್ರದೇಶದಲ್ಲಿ ವಾಸಿಸುವವರು ಜಾಗ್ರತೆ ಪಾಲಿಸಬೇಕೆಂದೂ, ಕಡಲ ತೀರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕಾದ ಸಂದರ್ಭ ಬಂದಲ್ಲಿ ಶಿಬಿರಗಳನ್ನು ಆರಂಭಿಸಲು ಅಗತ್ಯದ ಕ್ರಮ ತೆಗೆದುಕೊಳ್ಳುವಂತೆ ಗ್ರಾಮಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.