ಶಿಕ್ಷಕರ ಕೊರತೆ ನೀಗಿಸಲು ಸ್ಥಳೀಯರಿಗೆ ಅವಕಾಶ
ಜಿಲ್ಲಾ ಶಿಕ್ಷಣ-ತರಬೇತಿ ಕೇಂದ್ರಗಳ ಕಾರ್ಯ ಪರಿಶೀಲನೆ
Team Udayavani, Oct 31, 2019, 10:55 AM IST
ಕಲಬುರಗಿ: ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ನೀಗಿಸಲು ನೇಮಕಾತಿ ಮತ್ತು ವರ್ಗಾವಣೆ ಸಂದರ್ಭದಲ್ಲಿ ಸ್ಥಳೀಯರಿಗೆ ಅವಕಾಶ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ ಹೇಳಿದರು.
ನಗರದ ಜಿ.ಪಂ ಸಭಾಂಗಣದಲ್ಲಿ ಬುಧವಾರ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಪ್ರಗತಿ ಪರಿಶೀಲನೆ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬೇರೆ ಭಾಗಗಳಿಗೆ ಹೋಲಿಕೆ ಮಾಡಿದರೆ, ಕಲ್ಯಾಣ ಕರ್ನಾಟಕದಲ್ಲಿ ಶೈಕ್ಷಣಿಕ ಗುಣಮಟ್ಟ ಮತ್ತು ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆ ಇದೆ. ಇದಕ್ಕೆ ಕೆಲ ಪ್ರಮುಖ ಕಾರಣಗಳನ್ನು ಸದ್ಯಕ್ಕೆ ಕಂಡುಕೊಳ್ಳಲಾಗಿದೆ ಎಂದರು.
ಮುಖ್ಯವಾಗಿ ಶಿಕ್ಷಕರ ಕೊರತೆ ಹೆಚ್ಚಾಗಿದೆ. ಹೀಗಾಗಿ ಶಿಕ್ಷಕರ ನೇಮಕಾತಿಯಲ್ಲಿ ಸ್ಥಳೀಯರಿಗೆ ಹೆಚ್ಚಿನ ಅವಕಾಶ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ, ಶಿಕ್ಷಕರ ವರ್ಗಾವಣೆ ವಿಭಾಗದ ಮಟ್ಟದಲ್ಲಿ ಪ್ರಕ್ರಿಯೆ ನಡೆಯುತ್ತದೆ. ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು ಬೇರೆ ವಿಭಾಗಗಳಿಗೆ ವರ್ಗಾವಣೆ ಆಗಿ ಹೋಗುತ್ತಿದ್ದಾರೆ. ಇದರಿಂದ ಮತ್ತಷ್ಟು ಶಿಕ್ಷಕರ ಕೊರತೆ ಕಾಡುವಂತೆ ಆಗುತ್ತದೆ. ಹೀಗಾಗಿ ಸ್ಥಳೀಯ ಶಿಕ್ಷಕರಿಗೆ ಅವಕಾಶ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದರು.
ಮಕ್ಕಳ ಹಾಜರಾತಿ ಸಮಸ್ಯೆ ಇದೆ. ಒಬ್ಬ ಮಗು ಒಂದು ದಿನ ಶಾಲೆಗೆ ಬಂದರೆ, ಮತ್ತೂಂದು ದಿನ ಬರಲ್ಲ. ಹೀಗಾಗಿ ಪ್ರತಿ ವರ್ಷ ಕನಿಷ್ಠ 10ರಷ್ಟು ಹಾಜರಾತಿ ಕೊರತೆಯಾಗುತ್ತಿದೆ. ಪಾಠ ಬೋಧನೆಯಲ್ಲಿ ಶಿಕ್ಷಕರ ನಿರ್ಲಕ್ಷ್ಯವೂ ಕಾಣುತ್ತಿದೆ. ಅವರು, ಪಾಠ ಹೇಳುವುದು ಬರೀ ಒಂದು ಕ್ರಿಯೆ ಎಂದು ತಿಳಿದುಕೊಂಡಿದ್ದಾರೆ.
ಇದರಿಂದ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯುವಂತೆ ಆಗಿದೆ. ಪಠ್ಯವನ್ನು ಅರ್ಥೈಸಿ ಶಿಕ್ಷಕರು ಪಾಠ ಮಾಡಬೇಕು. ಜತೆಗೆ ಈ ಭಾಗದಲ್ಲಿ ಉರ್ದು, ಮರಾಠಿ, ತೆಲುಗು ಬಹುಭಾಷೆ ಇರುವುದರಿಂದ ಫಲಿತಾಂಶಕ್ಕೆ ಪೆಟ್ಟು ಬೀಳುತ್ತಿದೆ ಎಂದು ಹೇಳಿದರು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಕೇಂದ್ರಗಳ (ಡಯಟ್) ಕಾರ್ಯ ಶೈಲಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಶಿಕ್ಷಕರಿಗೆ ಗುಣಮಟ್ಟದ ಶಿಕ್ಷಕ ತರಬೇತಿ ಮತ್ತು ನಿರಂತರವಾಗಿ ಶಿಕ್ಷಕರೊಂದಿಗೆ ಸಂಪರ್ಕ ಇರುವಂತೆ ನೋಡಿಕೊಳ್ಳಲಾಗುವುದು.
ಈ ಸಂಬಂಧ ಶೀಘ್ರವೇ ಸಭೆ ನಡೆಸಲಾಗುವುದು. ಅಲ್ಲದೇ, ಪ್ರಸ್ತಕ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇನ್ನು ಕೇವಲ ನಾಲ್ಕು ತಿಂಗಳಿದೆ. ಇಷ್ಟರಲ್ಲಿ ಆದಷ್ಟು ಸುಧಾರಣೆಗೆ ಕ್ರಮ ವಹಿಸಲಾಗುವುದು. ಜತೆಗೆ ಈ ಭಾಗದಲ್ಲಿ ಶೈಕ್ಷಣಿಕ ವ್ಯವಸ್ಥೆ ಸುಧಾರಣೆಗೆ ಕಲಬುರಗಿ ಶಿಕ್ಷಣ ಇಲಾಖೆ ಅಪರ ಆಯುಕ್ತ ನಳಿನಿ ಅತುಲ್ ಮತ್ತು ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಕಾಳಜಿ ಹೊಂದಿದ್ದಾರೆ. ಈಗಿನಿಂದಲೇ ಮುಂದಿನ ವರ್ಷದ ಪರೀಕ್ಷೆಗಳಿಗೆ ಸಿದ್ಧತೆಗಳನ್ನು ಮಾಡಿಕೊಳ್ಳುವಂತಹ ವ್ಯವಸ್ಥೆ ರೂಪಿಸಲಾಗುವುದು ಎಂದರು. ಶಿಕ್ಷಣ ಇಲಾಖೆಯ ಅಪರ ಆಯುಕ್ತ ನಳಿನ ಅತುಲ್, ವಿಧಾನ ಪರಿಷತ್ ಮಾಜಿ ಸದಸ್ಯ ಶಶೀಲ ನಮೋಶಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!
Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.