ಭೀಕರ ದುರಂತ: ಕರಾಚಿ-ರಾವಲ್ಪಿಂಡಿ ಎಕ್ಸ್ ಪ್ರೆಸ್ ರೈಲು ಬೆಂಕಿಗಾಹುತಿ: 65 ಮಂದಿ ಸಾವು
Team Udayavani, Oct 31, 2019, 11:09 AM IST
ಲಿಯಾಖತ್ಪುರ: ಪಾಕಿಸ್ತಾನದ ಕರಾಚಿಯಿಂದ ಲಾಹೋರ್ಗೆ ಸಂಚರಿಸುತ್ತಿದ್ದ ಕರಾಚಿ-ರಾವಲ್ಪಿಂಡಿ ತೇಜ್ಗಾಮ್ ಎಕ್ಸ್ಪ್ರೆಸ್ ರೈಲು ಬೆಂಕಿ ಅನಾಹುತಕ್ಕೀಡಾಗಿದ್ದು, ಕನಿಷ್ಠ 65 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಲಿಯಾಖತ್ಪುರಕ್ಕೆ ತಲುಪುತ್ತಿರುವ ವೇಳೆ ಮೂರು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅದು ಉಳಿದ ಬೋಗಿಗಳಿಗೂ ಆವರಿಸತೊಡಿಗಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಎಂದು ಪಾಕಿಸ್ತಾನ ರೈಲ್ವೇ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಯಾಣಿಕರು ಸಾಗಿಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಒಟ್ಟು ಮೂರು ಬೋಗಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಅದರಲ್ಲಿ 200 ಕ್ಕಿಂತ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂಧು ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಗಾಯಗೊಂಡವರನ್ನು ಕೂಡಲೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಂಕಿ ನಂದಿಸಿರುವ ಬೋಗಿಗಳಿಂದ ಪ್ರಯಾಣಿಕರ ಶವಗಳನ್ನು ಹೊರತೆಗೆಯಲಾಗುತ್ತಿದೆ.
Pakistan: Death toll rises to 16, in incident where fire broke out in Karachi-Rawalpindi Tezgam express train in Liaqatpur near Rahim Yar Khan today. pic.twitter.com/wDmxPfN6gh
— ANI (@ANI) October 31, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.