ಸರ್ಕಾರದಿಂದ ಕಲ್ಯಾಣ ಭಾಗ್ಯ! ನವಜೋಡಿಗೆ ಸರಕಾರದಿಂದ ಸಿಗುವ ಸೌಲಭ್ಯ, ಷರತ್ತುಗಳೇನು?
Team Udayavani, Oct 31, 2019, 1:21 PM IST
ಬೆಂಗಳೂರು: ರಾಜ್ಯದಲ್ಲಿ ಕ್ಷೀರ ಭಾಗ್ಯ, ಅನ್ನ ಭಾಗ್ಯ ಆಯ್ತು ಇದೀಗ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಸರಕಾರಿ ಮದುವೆ ಭಾಗ್ಯ ಘೋಷಿಸಿದೆ.
ಮುಜರಾಯಿ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ, 2020ರ ಏಪ್ರಿಲ್ 26ರಂದು ಹಾಗೂ ಮೇ 24ರಂದು ಸರಕಾರಿ ಸಾಮೂಹಿಕ ವಿವಾಹ ನಡೆಯಲಿದೆ ಎಂದು ತಿಳಿಸಿದರು.
ಉಚಿತ ಮದುವೆಯಾಗಬೇಕಾದರೆ ಷರತ್ತುಗಳೇನು?
*ವಧು, ವರನ ಪೋಷಕರ ಜತೆಯಲ್ಲಿಯೇ ಮದುವೆ ನಡೆಯಬೇಕು
*ವಧು, ವರನ ಪೋಷಕರು ಒಪ್ಪಿಗೆ ಸೂಚಿಸಿದ್ರೆ ಅಂತರ್ಜಾತಿ ವಿವಾಹ ಆಗಬಹುದು
*ಹುಡುಗ, ಹುಡುಗಿಯ ಪೋಷಕರ ಒಪ್ಪಿಗೆ ಅಗತ್ಯ
. ಪರೋಕ್ಷವಾಗಿ ಪ್ರೀತಿಸಿ ಮದುವೆಯಾಗುವವರಿಗೆ ಅವಕಾಶ ಇಲ್ಲ
*ಯಾವುದೇ ಕಾರಣಕ್ಕೂ ಎರಡನೇ ಮದುವೆಗೆ ಅವಕಾಶ ಇಲ್ಲ.
*ಕುಟುಂಬದ ಸದಸ್ಯರೊಂದಿಗೆ ಇರುವ ಬಗ್ಗೆ ದಾಖಲೆ ಕೊಡಬೇಕು
*ಸ್ಥಳದಲ್ಲಿಯೇ ಮದುವೆ ನೋಂದಣಿ ಪ್ರಕ್ರಿಯೆ ನಡೆಯುತ್ತೆ
ನವಜೋಡಿಗೆ ಸರಕಾರದಿಂದ ಸಿಗುವ ಸೌಲಭ್ಯಗಳೇನು?
*ವರನಿಗೆ 10 ಸಾವಿರ, ವಧುವಿಗೆ 15 ಸಾವಿರ(ಸೀರೆ) ರೂಪಾಯಿ ಅನುದಾನ
*ವಧುವಿಗೆ 40 ಸಾವಿರ ರೂ. ಮೌಲ್ಯದ 8 ಗ್ರಾಂ ಚಿನ್ನದ ತಾಳಿ
*ಒಂದು ಜೋಡಿಗೆ ಒಟ್ಟು 65 ಸಾವಿರ ರೂಪಾಯಿ ಸರಕಾರದ ವತಿಯಿಂದ ಖರ್ಚು
ಎಲ್ಲೆಲ್ಲಿ ಸಾಮೂಹಿಕ ವಿವಾಹ:
ಬೆಂಗಳೂರಿನ ಬನಶಂಕರಿ ದೇವಾಲಯ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಒಟ್ಟು ನೂರು ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಕೋಟ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.