ಕಳಪೆ ಶೂ ವಿತರಣೆ; ತನಿಖೆಗೆ ನಿರ್ಧಾರ
Team Udayavani, Oct 31, 2019, 9:42 PM IST
ಬೆಂಗಳೂರು: ಕೆಲ ಶಾಲೆಗಳಲ್ಲಿ ಮಕ್ಕಳಿಗೆ ಕಳಪೆ ಗುಣಮಟ್ಟದ ಶೂಗಳನ್ನು ವಿತರಿಸುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಸರಕಾರ ತನಿಖೆಗೆ ಮುಂದಾಗಿದೆ.
ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಶೂ ವಿತರಿಸುತ್ತಿದ್ದು, ಕೆಲವೆಡೆ ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿರುವ ಬಗ್ಗೆ ದೂರುಗಳು ಬಂದಿವೆ. ಇದನ್ನು ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ತನಿಖೆ ನಡೆಸುವಂತೆ ಎಲ್ಲ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
“ಪ್ರಮುಖ 15 ಬ್ರ್ಯಾಂಡ್‌ಗಳ ಪಟ್ಟಿಯನ್ನು ಶಾಲೆಗಳಿಗೆ ನೀಡಿದ್ದು, ಆ ಪೈಕಿ ಲಭ್ಯವಿರುವ ಶೂಗಳನ್ನು ಖರೀದಿಸಿ ಮಕ್ಕಳಿಗೆ ವಿತರಿಸುವಂತೆ ಸೂಚಿಸಲಾಗಿದೆ. ಆದರೆ ಮಕ್ಕಳ ಎಕ್ಕಡದಲ್ಲೂ ಅವ್ಯವಹಾರ ಮಾಡಲು ಮುಂದಾಗಿರುವುದು ಅತ್ಯಂತ ಬೇಸರದ ಸಂಗತಿ. ಗುಣಮಟ್ಟದಲ್ಲಿ ರಾಜಿ ಆಗುತ್ತಿರುವುದು ಮಕ್ಕಳಿಗೆ ಬಗೆಯುತ್ತಿರುವ ದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಈ ಸಂಬಂಧ ತುರ್ತು ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದರು.
ಎರಡನೇ ಜತೆ ಸಮವಸ್ತ್ರ ವಿತರಣೆ ಜವಾಬ್ದಾರಿಯನ್ನು ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಚ್‌ಡಿಎಂಸಿ)ಗಳಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಮಕ್ಕಳಿಗಾಗಿ ಐಸಿಯು
ಹೈದರಾಬಾದ್ ಕರ್ನಾಟಕದಲ್ಲಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕಲಿಕಾ ವೃದ್ಧಿಗಾಗಿ “ತೀವ್ರ ನಿಗಾ ಘಟಕ’ಗಳ ಮಾದರಿಯಲ್ಲಿ ಘಟಕಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಹಗಲು-ರಾತ್ರಿ ಮಕ್ಕಳಿಗೆ ರೊಟೇಷನ್ ಪದ್ಧತಿಯಲ್ಲಿ ಕಲಿಸಿಕೊಡಲಾಗುವುದು. ಎಸೆಸೆಲ್ಸಿಯಲ್ಲಿ ಬಳ್ಳಾರಿ ಮತ್ತು ಯಾದಗಿರಿಯಲ್ಲಿ ಕ್ರಮವಾಗಿ ಕನಿಷ್ಠ ಶೇ. 80 ಮತ್ತು ಶೇ. 70ರಷ್ಟು ಫಲಿತಾಂಶದ ಗುರಿ ಇದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಸಿಸಿಟಿವಿಯಿಂದ ಅಂಕ ಕಡಿಮೆ!
ಸಿಸಿಟಿವಿ ಅಳವಡಿಕೆಗೂ ಮತ್ತು ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಕೆಗೂ ಒಂದಕ್ಕೊಂದು ಸಂಬಂಧ ಇದೆಯಾ?
– “ಸಂಬಂಧ ಇದೆ’ ಎನ್ನುತ್ತಿದ್ದಾರೆ ಬೀದರ್ ಮತ್ತು ಯಾದಗಿರಿ ಜಿಲ್ಲೆಯ ಶಾಲಾ ಶಿಕ್ಷಕರು!
ಈಚೆಗೆ ಇಲಾಖೆಗೆ ಸಂಬಂಧಿಸಿದಂತೆ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಪ್ರಾದೇಶಿಕ ಆಯುಕ್ತರು, “ಎಸೆಸೆಲ್ಸಿಯಲ್ಲಿ ಕಡಿಮೆ ಅಂಕ ಗಳಿಕೆಗೆ ಕಾರಣ ಏನು ಎಂದು ಕೇಳಿದಾಗ, ಸಂಬಂಧಪಟ್ಟ ಶಿಕ್ಷಕರು ಮತ್ತು ಅಧಿಕಾರಿಗಳು ಸಿಸಿಟಿವಿಯತ್ತ ಬೆಟ್ಟು ಮಾಡಿದರು. ಕೆಮರಾಗಳು ತುಂಬಾ ಹಾಕಿದ್ದರಿಂದ, ಮಕ್ಕಳು ಹೆದರಿದರು ಎಂದರು. ಈ ಉತ್ತರ ನಮಗೂ ಅಚ್ಚರಿ ಮೂಡಿಸಿತು ಎಂದು ಸುರೇಶ್ ಕುಮಾರ್ ತಿಳಿಸಿದರು.
ಸಂವೇದನೆ’
ಫೋನ್ ಇನ್ ಕಾರ್ಯಕ್ರಮಕ್ಕೆ “ಸಂವೇದನೆ’ ಎಂದು ಹೆಸರಿಡಲಾಗಿದೆ. ಇದರ ದೂರವಾಣಿ ಸಂಖ್ಯೆ: 080- 26725654/ 26725655 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.