ಪ್ರಬಲಗೊಂಡ “ಮಹಾ’ ಚಂಡಮಾರುತ

ಕರಾವಳಿಯಲ್ಲಿಂದು ಭಾರೀ ಗಾಳಿ, ಮಳೆ ನಿರೀಕ್ಷೆ

Team Udayavani, Nov 1, 2019, 5:29 AM IST

41

ಮಂಗಳೂರು/ ಉಡುಪಿ: “ಮಹಾ’ ಚಂಡಮಾರುತವು ಮುಂದಿನ 24 ತಾಸುಗಳಲ್ಲಿ ಬಲಗೊಂಡು ವಾಯವ್ಯ ದಿಕ್ಕಿನತ್ತ ಸಾಗಲಿದೆ. ಇದರಿಂದಾಗಿ ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗಂಟೆಗೆ ಸುಮಾರು 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಇದೆ. ನ.4ರವರೆಗೆ ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಕರಾವಳಿ ಕಾವಲು ಪಡೆಯ ಐದು ನೌಕೆಗಳನ್ನು ಸನ್ನದ್ಧುಗೊಳಿಸಲಾಗಿದೆ. ಮುನ್ನೆಚ್ಚ ರಿಕೆ ದೃಷ್ಟಿಯಿಂದ ಎರಡು ಡಾರ್ನಿಯರ್‌ ವಿಮಾನವನ್ನು ಸಜ್ಜುಗೊಳಿಸಲಾಗಿದೆ. ಕೊಚ್ಚಿ, ನವಮಂಗಳೂರಿನಲ್ಲಿ ಒಟ್ಟು 6 ರಕ್ಷಣಾ ಪಡೆಯ ನೌಕೆಗಳು ಸನ್ನದ್ಧ ಸ್ಥಿತಿಯಲ್ಲಿವೆ.

ಭಾರೀ ಗಾಳಿ ಮಳೆ ಉಂಟಾಗುವ ಸಾಧ್ಯತೆ ಇರುವುದರಿಂದ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರವು ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಿದೆ. ತುರ್ತು ಸೇವೆಗೆ ಟೋಲ್‌ ಫ್ರೀ ನಂ: 1077, ದೂರವಾಣಿ ಸಂಖ್ಯೆ: 0820-2574802 / 2574360 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

ದಡದತ್ತ ಧಾವಿಸಿದ ಬೋಟುಗಳು
ಮಲ್ಪೆ: “ಕ್ಯಾರ್‌’ ಬಳಿಕ ಈಗ “ಮಹಾ’ ಚಂಡಮಾರುತ ಮೀನುಗಾರರು ತತ್ತರಿಸುವಂತೆ ಮಾಡಿದೆ. ಹವಾಮಾನ ಮತ್ತು ಮೀನುಗಾರಿಕೆ ಇಲಾಖೆ ಎಚ್ಚರಿಸಿದ ಹಿನ್ನೆಲೆಯಲ್ಲಿ ಗುರುವಾರ ಎಲ್ಲ ಬೋಟುಗಳು ಮತ್ತೆ ದಡ ಸೇರುವಂತಾಗಿದೆ. ನ. 4ರ ವರೆಗೆ ಕಡಲಿಗಿಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಗಣೇಶ್‌ ಕೆ. ಎಚ್ಚರಿಸಿದ್ದಾರೆ.

ಮತ್ತೆ ಚಂಡಮಾರುತದ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮಲ್ಪೆಯ ಶೇ. 100ರಷ್ಟು ಬೋಟುಗಳು ಗುರುವಾರ ಮಧ್ಯಾಹ್ನವೇ ದಡ ಸೇರಿವೆ. ಕೆಲವು ಬೋಟುಗಳು ಕಾರವಾರ ಬಂದರಿನಲ್ಲಿವೆ ಎಂದು ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಎಸ್‌. ಸುವರ್ಣ ಹೇಳಿದ್ದಾರೆ.

ಕಾಸರಗೋಡು: ಯೆಲ್ಲೋ ಅಲರ್ಟ್‌
ಕಾಸರಗೋಡು: ಮುಂಜಾಗ್ರತೆಯ ಕ್ರಮವಾಗಿ ಕಾಸರಗೋಡು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಶಾಲೆಗಳಿಗೆ ರಜೆ
ಚಂಡಮಾರುತದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ಕಾಸರಗೋಡು ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತವು ರಜೆ ಘೋಷಿಸಿದೆ.

ದೋಣಿ ಅವಘಡ: 7 ಮಂದಿ ರಕ್ಷಣೆ
ಕಾಸರಗೋಡು: ಮಹಾ ಚಂಡಮಾರುತದ ಪರಿಣಾಮ ಸಮುದ್ರಕ್ಕೆ ತೆರಳಿದ ಎರಡು ಮೀನುಗಾರಿಕೆ ದೋಣಿಗಳು ಮಗುಚಿ ಬಿದ್ದಿದ್ದು, 7 ಮಂದಿ ಆಪಾಯದಿಂದ ಪಾರಾಗಿದ್ದಾರೆ. ಓರ್ವ ಗಾಯಗೊಂಡಿದ್ದಾರೆ.

“ಮಹಾ’ ಪ್ರಭಾವ: ಉತ್ತಮ ಮಳೆ
ಅರಬಿ ಸಮುದ್ರ-ಲಕ್ಷದ್ವೀಪದಲ್ಲಿ ಉಂಟಾದ “ಮಹಾ’ ಚಂಡಮಾರುತವು ಪ್ರಬಲ ಗೊಳ್ಳುತ್ತಿರುವ ಪರಿಣಾಮ ಕರಾವಳಿಯ ಅನೇಕ ಕಡೆಗಳಲ್ಲಿ ಗುರುವಾರ ಉತ್ತಮ ಮಳೆಯಾಗಿದೆ. ಇನ್ನೆರಡು ದಿನ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿದೆ.

ಮಂಗಳೂರು ನಗರದಲ್ಲಿ ಗುರುವಾರ ಬೆಳಗ್ಗೆಯಿಂದಲೇ ಭಾರೀ ಮಳೆಯಾಗಿ ರಾತ್ರಿ ವೇಳೆಗೆ ಬಿರುಸುಗೊಂಡಿತ್ತು. ಗಾಳಿ ಜೋರಾಗಿತ್ತು. ಧರ್ಮಸ್ಥಳ, ಬೆಳ್ತಂಗಡಿ, ಮಡಂತ್ಯಾರು, ಪುತ್ತೂರು, ಉಪ್ಪಿನಂಗಡಿ, ವೇಣೂರು, ಕಡಬ, ಸುಳ್ಯ, ಬಂಟ್ವಾಳ, ಉಳ್ಳಾಲ, ಕಾಸರಗೋಡು, ಕನ್ಯಾನ, ವಿಟ್ಲ, ಪುಂಜಾಲಕಟ್ಟೆ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಉತ್ತಮ ಮಳೆಯಾದ ವರದಿಯಾಗಿದೆ. ಸುಬ್ರಹ್ಮಣ್ಯ ಸುತ್ತಮುತ್ತಲೂ ದಿನವಿಡೀ ಮಳೆಯಾಗಿದೆ. ಹಲವೆಡೆ ವಿದ್ಯುತ್‌ ಸ್ಥಗಿತಗೊಂಡಿತ್ತು.

ಉಡುಪಿ ಜಿಲ್ಲೆಯಾದ್ಯಂತ ಗುರುವಾರ ಉತ್ತಮ ಮಳೆಯಾಗಿದೆ. ತೆಕ್ಕಟ್ಟೆ, ಕಾಪು, ಕಟಪಾಡಿ, ಶಿರ್ವ, ಕೋಟೇಶ್ವರ, ಸಿದ್ದಾಪುರ, ಕೊಲ್ಲೂರು, ವಂಡ್ಸೆ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ ಭಾಗಗಳಲ್ಲಿ ಉತ್ತಮ ಮಳೆ ಸುರಿದಿದೆ.

ವಾಯವ್ಯದತ್ತ “ಮಹಾ’ ಚಲನೆ
“ಮಹಾ’ ಚಂಡಮಾರುತವು ತಾಸಿಗೆ ಸುಮಾರು 18 ಕಿ.ಮೀ. ವೇಗದಲ್ಲಿ ವಾಯವ್ಯ ದಿಕ್ಕಿನತ್ತ ಚಲಿಸುತ್ತ ತೀವ್ರ ಸ್ವರೂಪ ಪಡೆಯುತ್ತಿದ್ದು, ಅ.31ರ ರಾತ್ರಿ 7.30ರ ಹೊತ್ತಿಗೆ ಲಕ್ಷದ್ವೀಪವನ್ನು ದಾಟಿದೆ. ಮುಂದಿನ 24 ತಾಸುಗಳಲ್ಲಿ ಅದು ವಾಯವ್ಯಕ್ಕೇ ಮುಂದುವರಿಯುತ್ತ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದರಿಂದ ಲಕ್ಷದ್ವೀಪದಲ್ಲಿ ಗರಿಷ್ಠ ತೀವ್ರತೆಯ ಗಾಳಿಮಳೆ, ಕೇರಳ, ದ. ತಮಿಳುನಾಡು ಮತ್ತು ಕರ್ನಾಟಕದ ಕರಾವಳಿಯಲ್ಲಿ ವೇಗದ ಗಾಳಿ ಸಹಿತ ಭಾರೀ ಮಳೆಯಾಗಲಿದೆ.

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.