ಅಂಗನವಾಡಿ ಸೂಪರ್‌ ವೈಸರ್‌ಗಳಿಗೆ ಶೀಘ್ರ “ಹುದ್ದೆ ಭಾಗ್ಯ’?


Team Udayavani, Nov 1, 2019, 5:42 AM IST

anganwadi-karnataka

ಬೆಂಗಳೂರು: ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆಯಲ್ಲಿ ಅಂಗನವಾಡಿ ಕೇಂದ್ರಗಳು ಹಾಗೂ ಶಿಶು ಅಭಿವೃದ್ಧಿ ಯೋಜನೆ ಕಚೇರಿ (ಸಿಡಿಪಿಓ)ಗಳ ನಡುವೆ “ಸೇತುವೆ’ಗಳಾಗಿ ಕೆಲಸ ಮಾಡಬೇಕಿರುವ ಅಂಗನವಾಡಿ ಸೂಪರ್‌ವೈಸರ್‌ಗಳ ನೇಮಕಾತಿ ಪ್ರಕ್ರಿಯೆ ಮೂರು ವರ್ಷ ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ.

643 ಅಂಗನವಾಡಿ ಸೂಪರ್‌ವೈಸರ್‌ಗಳ ನೇಮಕಾತಿ ಪ್ರಕ್ರಿಯೆಗೆ 2016ರ ಮಾರ್ಚ್‌ನಲ್ಲಿ ಚಾಲನೆ ಸಿಕ್ಕಿತ್ತು. ಆದರೆ, ಇಲ್ಲಿತನಕ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಇದರಿಂದಾಗಿ ಪರೀಕ್ಷೆ ಬರೆದು, ಸಂದರ್ಶನ ಎದುರಿಸಿ, ಹುದ್ದೆಯ ಅರ್ಹತೆ ಪಡೆದುಕೊಂಡವರಿಗೆ “ಹುದ್ದೆಯ ಭಾಗ್ಯ’ ಮಾತ್ರ ಇನ್ನೂ ಸಿಕ್ಕಿಲ್ಲ.

ನೇಮಕಾತಿ ಆದೇಶ ಹಾಗೂ ಸ್ಥಳ ನಿಯೋಜನೆ ನೀಡಿ ಎಂದು ಇಲಾಖೆಗೆ ಅಲೆದು ಸಾಕಾಗಿದೆ ಎಂದು ನೇಮಕಗೊಂಡಿರುವ ಸೂಪರ್‌ವೈಸರ್‌ಗಳು ಅಳಲು ತೋಡಿಕೊಳ್ಳುತ್ತಿದ್ದರೆ, ದಾಖಲೆಗಳ “ನೈಜತೆ’ ದೃಢೀಕರಣ ಪ್ರಕ್ರಿಯೆ ನಡೆಯುತ್ತಿದ್ದು, ಅದರಿಂದಾಗಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಮಜಾಯಿಷಿ ನೀಡುತ್ತಿದೆ.

ಅಂಗನವಾಡಿಗಳಿಗೆ ಸಂಬಂಧಿಸಿದ ವಿವಿಧ ಫ‌ಲಾನುಭವಿ ಆಧರಿತ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆ, ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ನಿರ್ವಹಣೆ, ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಣೆ ಸೇರಿದಂತೆ ಅಂಗನವಾಡಿ ಕೇಂದ್ರಗಳು ಮತ್ತು ಸಿಡಿಪಿಓ ಕಚೇರಿ ನಡುವೆ ಕೊಂಡಿಗಳನ್ನಾಗಿ ಕೆಲಸ ಮಾಡಲು ನಮ್ಮನ್ನು ನೇಮಿಸಿಕೊಳ್ಳಲಾಗಿದೆ. ಆದರೆ, ನಮಗೆ ನೇಮಕಾತಿ ಆದೇಶ, ಸ್ಥಳ ನಿಯೋಜನೆ ಪತ್ರ ನೀಡಿಲ್ಲ. ಇದರಿಂದಾಗಿ ಅಂಗನವಾಡಿ ಕೇಂದ್ರ ಮತ್ತು ಇಲಾಖೆ ನಡುವೆ ಸಂಪರ್ಕ, ಸಂವಹನಕ್ಕೆ ಸಮಸ್ಯೆ ಆಗುತ್ತಿದೆ ಎಂದು ಹೊಸದಾಗಿ ನೇಮಕಗೊಂಡ ಸೂಪರ್‌ವೈಸರ್‌ಗಳು ಹೇಳುತ್ತಾರೆ.

“ಸಿ’ ದರ್ಜೆ ಹುದ್ದೆಗೆ ಸಮಾನ:
ಅಂಗನವಾಡಿ ಸೂಪರ್‌ವೈಸರ್‌ ಹುದ್ದೆ “ಸಿ’ ದರ್ಜೆ ಹುದ್ದೆಗೆ ಸಮಾನ. ಕರ್ನಾಟಕ ಲೋಕಸೇವಾ ಆಯೋಗದ ನಿಯಮಗಳ ಪ್ರಕಾರ “ಸಿ’ ದರ್ಜೆ ಹುದ್ದೆಗಳಿಗೆ ಅರ್ಜಿ ಆಹ್ವಾನದಿಂದ ನೇಮಕಾತಿ ಆದೇಶದವರೆಗಿನ ಪ್ರಕ್ರಿಯೆ 7ರಿಂದ 9 ತಿಂಗಳಲ್ಲಿ ಪೂರ್ಣಗೊಳ್ಳಬೇಕು. ಆದರೆ, ಅಂತಿಮ ಪ್ರಕಟಕ್ಕೆ ಒಂದೂವರೆ ವರ್ಷ ಆಯಿತು. ಬಳಿಕ, ಹಲವು ಸುತ್ತಿನ ದಾಖಲೆಗಳ ಪರಿಶೀಲನೆ ನಡೆಸಿ ಜುಲೈ 2019ರಲ್ಲಿ 258 ಮಂದಿಯ ಅಂತಿಮ ಪಟ್ಟಿ ಪ್ರಕಟಿಸಲಾಯಿತು. ಈ ಪೈಕಿ ಕೆಲವರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಆದರೆ, ಯಾರಿಗೂ ಸ್ಥಳ ನಿಯೋಜನೆ ನೀಡಿಲ್ಲ. ನಮ್ಮ ಸೇವಾವಧಿ ಯಾವಾಗ ಪ್ರಾರಂಭವಾಗುತ್ತದೆ, ವೇತನ ನಿಗದಿ ಹೇಗೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಹೆಸರು ಹೇಳಲಿಚ್ಛಿಸದ ಸೂಪರ್‌ವೈಸರ್‌ ಒಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.

2016ರ ಮಾರ್ಚ್‌ನಲ್ಲಿ ಅಧಿಸೂಚನೆ:
ಒಟ್ಟು 643 ಅಂಗನವಾಡಿ ಸೂಪರ್‌ವೈಸರ್‌ ಹುದ್ದೆಗಳ ನೇಮಕಾತಿಗೆ 2016ರ ಮಾರ್ಚ್‌ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದೇ ವರ್ಷ ಡಿಸೆಂಬರ್‌ನಲ್ಲಿ ಪರೀಕ್ಷೆ ನಡೆದಿತ್ತು. 628 ಜನ ಆಯ್ಕೆಯಾಗಿದ್ದರು. 2017ರಲ್ಲಿ ಅರ್ಹತಾ ಪಟ್ಟಿ, 2018ರ ಜನವರಿ ಮತ್ತು 2019ರ ಫೆಬ್ರವರಿಯಲ್ಲಿ 2 ಹಂತಗಳಲ್ಲಿ ಅಂತಿಮ ಪಟ್ಟಿ ಪ್ರಕಟಿಸಲಾಗಿತ್ತು. 2019ರ ಜುಲೈ ತಿಂಗಳಲ್ಲಿ 258 ಮಂದಿಗೆ ನೇಮಕಾತಿ ಆದೇಶ ನೀಡಲಾಯಿತು. ಉಳಿದವರ ಸಿಂಧುತ್ವ ಹಾಗೂ ಪೊಲೀಸ್‌ ಪರಿಶೀಲನೆ ಬಾಕಿ ಇದೆ ಎಂದು ಇಲಾಖೆ ಹೇಳಿತ್ತು. ಈ ನಡುವೆ, ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳ ಮೂಲ ಶೈಕ್ಷಣಿಕ ದಾಖಲೆಗಳ ನೈಜತೆಯನ್ನು ಆಯಾ ಶಿಕ್ಷಣ ಮಂಡಳಿ ಅಥವಾ ವಿ.ವಿ.ಗಳು ದೃಢೀಕರಿಸಬೇಕೆಂದು ಸರ್ಕಾರ ಹೊಸ ನಿಯಮ ಜಾರಿಗೆ ತಂದಿರುವುದರಿಂದ ಎಲ್ಲ 628 ಅಭ್ಯರ್ಥಿಗಳ ದಾಖಲೆಗಳನ್ನು ಸಂಬಂಧಪಟ್ಟ ಶಿಕ್ಷಣ ಮಂಡಳಿ ಹಾಗೂ ವಿ.ವಿ.ಗಳಿಗೆ ಕಳಿಸಿಕೊಡಲಾಗಿದೆ. ಇದು ನೇಮಕಾತಿ ಪ್ರಕ್ರಿಯೆಯ ವಿಳಂಬಕ್ಕೆ ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ.

628 ಅಭ್ಯರ್ಥಿಗಳ ಪೈಕಿ ಈವರೆಗೆ 400 ಮಂದಿಗೆ ನೇಮಕಾತಿ ಆದೇಶ ನೀಡಲಾಗಿದೆ. ಅಂಕಪಟ್ಟಿ ಹಾಗೂ ಇತರ ಶೈಕ್ಷಣಿಕ ದಾಖಲೆಗಳ ನೈಜತೆಯನ್ನು ಆಯಾ ವಿ.ವಿ. ಹಾಗೂ ಶಿಕ್ಷಣ ಮಂಡಳಿಗಳಿಂದ ದೃಢಪಡಿಸಿಕೊಂಡ ಬಳಿಕ ನೇಮಕಾತಿ ಆದೇಶ ನೀಡಬೇಕು ಎಂಬ ಸರ್ಕಾರದ ಆದೇಶದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ತಾಂತ್ರಿಕ ಕಾರಣಗಳಿಂದಾಗಿ ಕೆಲವೊಂದು ವಿ.ವಿ.ಗಳಿಂದ ದೃಢೀಕರಣ ಬಂದಿಲ್ಲ. ಶೀಘ್ರವೇ ಎಲ್ಲವೂ ಸರಿ ಆಗಲಿದೆ.
– ಕೆ.ಎ.ದಯಾನಂದ, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

-ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.