ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರವಾಸವನ್ನು ರದ್ದುಪಡಿಸಿದ್ದೇನೆ: ಜಗದೀಶ ಶೆಟ್ಟರ್
Team Udayavani, Nov 1, 2019, 5:07 PM IST
ಬೆಳಗಾವಿ: ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗಾಗಿ ಹೂಡಿಕೆದಾರರನ್ನು ಸೆಳೆಯುವ ಉದ್ದೇಶದಿಂದ ಚೀನಾ ಪ್ರವಾಸ ಕೈಗೊಂಡಿದ್ದೆ. ಆದರೆ,ನೆರೆಯಿಂದಾಗಿ ಜನರು ಸಂಕಷ್ಟದಲ್ಲಿರುವುದರಿಂದ ಪ್ರವಾಸ ರದ್ದುಪಡಿಸಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿದೇಶ ಪ್ರವಾಸವೆಂದರೆ ಪಾಪದ ಕೆಲಸವೇನ್ರೀ?’ಎಂದು ಮಾಧ್ಯಮದವರ ವಿರುದ್ಧ ಹರಿಹಾಯ್ದರು.
ಇದೇನು ನನ್ನ ಖಾಸಗಿ ಪ್ರವಾಸವಾಗಿರಲಿಲ್ಲ. ಚೀನಾ ಸರ್ಕಾರದ ಆಹ್ವಾನದ ಮೇರೆಗೆ ಅಲ್ಲಿಗೆ ಹೋಗಲು ಯೋಜಿಸಿದ್ದೆ. ಜನಪ್ರತಿನಿಧಿಯಾಗಿ ನಾನು ಹೋಗುತ್ತಿಲ್ಲ. ಆದರೆ, ಇಲಾಖೆಯ ಹಿರಿಯ ಅಧಿಕಾರಿಗಳು ಹೋಗುತ್ತಾರೆ. ಇದೇನು ಖಾಸಗಿ ಪ್ರವಾಸವಲ್ಲ. ಸರ್ಕಾರದ ಪರವಾಗಿ ಹೋಗುತ್ತಿದ್ದಾರೆ. ಅಲ್ಲಿನ ಅಧಿಕಾರಿಗಳು ಇಲ್ಲಿಗೆ, ಇಲ್ಲಿನವರು ಬೇರೆ ಕಡೆ ಹೋಗುವುದು ಸಾಮಾನ್ಯ ಪ್ರಕ್ರಿಯೆ. ಇದರಲ್ಲಿ ಹೊಸದೇನೂ ಇಲ್ಲ ಎಂದರು.
ಚೀನಾದ ಸಚಿವರು ಸಹ ಇಲ್ಲಿಗೆ ಬಂದು ಮಾಹಿತಿ ಪಡೆದು ಹೋಗಿದ್ದಾರೆ. ನಾವು ಮುಂದಿನ ದಿನಗಳಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ (ಜಿಮ್) ಮಾಡಬೇಕಾಗಿದೆ. ಅದರ ಸಂಬಂಧ ಮಂತ್ರಿಯಾದ ನಾನು ಸೇರಿದಂತೆ ಅಧಿಕಾರಿಗಳು ವಿದೇಶಗಳಿಗೆ ಹೋಗಬೇಕಾಗುತ್ತದೆ. ರೋಡ್ ಷೋ ನಡೆಸಿ ಕರ್ನಾಟಕದ ಬಗ್ಗೆ ಮಾಹಿತಿ ಕೊಡಬೇಕಾಗುತ್ತದೆ. ಪ್ರಮುಖ ಅಧಿಕಾರಿಗಳು ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲೇಬೇಕಾಗುತ್ತದೆ. ನಾಡು ಹಾಗೂ ದೇಶದಲ್ಲಿ ಕೈಗಾರಿಕೆ ಬೆಳವಣಿಗೆಗೆ ಇರುವ ಪೂರಕ ವಾತಾವರಣದ ಬಗ್ಗೆ ವಿದೇಶಗಳಲ್ಲಿ ತಿಳಿಸಬೇಕಾಗುತ್ತದೆ. ಬಂಡವಾಳ ಆಕರ್ಷಿಸಬೇಕಾಗುತ್ತದೆ. ಇದು ಎಲ್ಲ ಸರ್ಕಾರದಲ್ಲೂ ನಡೆಯುವಂತಹ ಸಹಜ ಪ್ರಕ್ರಿಯೆ ಎಂದು ಸಮರ್ಥಿಸಿಕೊಂಡರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೆರೆ ಸಂತ್ರಸ್ತರನ್ನು ಭೇಟಿಯಾಗಿಲ್ಲ ಎಂಬ ಪ್ರಶ್ನೆಗೆ, ಇಡೀ ಸರ್ಕಾರವೇ ಸಂತ್ರಸ್ತರೊಂದಿಗೆ ಇದೆ. ಅಧಿಕಾರಿಗಳು ಹಾಗೂ ಇತರ ಸಚಿವರು ಹಲವು ಬಾರಿ ಭೇಟಿ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ನಾನೂ ಪ್ರವಾಸ ಮಾಡುತ್ತೇನೆ’ ಎಂದು ಉತ್ತರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.