ನಮ್ಮ ಶಾಲೆ ನಮ್ಮ ಹೆಮ್ಮೆ; ಗ್ರಾಮೀಣ ಪ್ರದೇಶದ ಅಂಡಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

107 ವರ್ಷಗಳ ಇತಿಹಾಸದ ಮಹೋನ್ನತ ಕನ್ನಡ ಶಾಲೆ

Team Udayavani, Nov 2, 2019, 4:33 AM IST

nov-11

ಅಜೆಕಾರು: ಕಾರ್ಕಳ ತಾಲೂಕಿನ ಅತ್ಯಂತ ಗ್ರಾಮೀಣ ಪ್ರದೇಶವಾದ ಅಂಡಾರಿನಲ್ಲಿ
ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಒಂದನೇ ಗುತ್ತಿನ ಅಂಮ್ಚ ಮನೆತನದವರು ದಾನವಾಗಿ ನೀಡಿದ ಸ್ಥಳದಲ್ಲಿ 1912ರಲ್ಲಿ ಶಾಲೆ ಆರಂಭಗೊಂಡು ಯಶಸ್ವಿ ಶತಮಾನ ಕಂಡು ಮುನ್ನಡೆಯುತ್ತಿದೆ.

ಅಂಡಾರು ಹಾಗೂ ಪರಿಸರದ ಗ್ರಾಮಗಳಲ್ಲಿ ಶಾಲೆಗಳು ಇಲ್ಲದೆ ಇರುವುದನ್ನು ಮನಗಂಡ ಸ್ಥಳೀಯರು ಸುಮಾರು 69 ಸೆಂಟ್ಸ್‌ ಜಾಗದಲ್ಲಿ ಕಿರಿಯ ಪ್ರಾಥಮಿಕ ಶಾಲೆ ಆರಂಭಿಸಿದ್ದರು. ಸುಮಾರು 45 ವರ್ಷಗಳವರೆಗೆ ಕಿರಿಯ ಪ್ರಾಥಮಿಕ ಶಾಲೆಯಾಗಿಯೇ ಮುಂದುವರಿದು 1956-57ನೇ ಸಾಲಿನಲ್ಲಿ ಹಿರಿಯ ಪ್ರಾಥಮಿಕ ಶಾಲೆಯಾಗಿ ಭಡ್ತಿ ಹೊಂದಿತ್ತು. ಶಾಲೆಯ ಮೊದಲ ಮುಖ್ಯ ಶಿಕ್ಷಕರಾಗಿ ಅನಂತರಾಜ ಹೆಗ್ಡೆ ಸೇವೆ ಸಲ್ಲಿಸಿದ್ದರು. ಶಾಲೆ ಆರಂಭವಾದ ದಿನಗಳಲ್ಲಿ ಅಂಡಾರು, ಶಿರ್ಲಾಲು, ಕಾಡುಹೊಳೆ, ಮಂಗಳನಗರ, ಬೊಂಡುಕುಮೇರಿ ಭಾಗಗಳಿಂದ ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದರು. ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳಗೊಳ್ಳುತ್ತಾ ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದರು.

ಪ್ರಸ್ತುತ ಶಾಲೆಯ ವ್ಯಾಪ್ತಿ ಕಡಿಮೆಗೊಂಡಿದ್ದು, ಹಿಂದೆ ಬರುತ್ತಿದ್ದ ವ್ಯಾಪ್ತಿಯ ಪ್ರದೇಶಗಳಾದ ‌ ಶಿರ್ಲಾಲುವಿನಲ್ಲಿ ಸೂರ್ಯತೊಕ್ಲು ಶಾಲೆ, ಅಂಡಾರು ಪೈತಾಳ ಕಿ. ಪ್ರಾ. ಶಾಲೆ, ಮಂಗಳನಗರ ಕಿ. ಪ್ರಾ. ಶಾಲೆ, ಬೊಂಡುಕುಮೇರಿ ಹಿ. ಪ್ರಾ. ಶಾಲೆ, ಕಾಡುಹೊಳೆ ಕಿ.ಪ್ರಾ. ಶಾಲೆ ಸೇರಿದಂತೆ ಒಟ್ಟು 5 ಹೊಸ ಶಾಲೆಗಳು ಅನಂತರದ ದಿನಗಳಲ್ಲಿ ಆರಂಭಗೊಂಡವು. ಪ್ರಸ್ತುತ ಅಂಡಾರು ಶತಮಾನ ಕಂಡ ಶಾಲೆಯಲ್ಲಿ ಬಾಲಕರು 48, ಬಾಲಕಿಯರು 55 ಸೇರಿದಂತೆ 103 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ.

ಪ್ರಸ್ತುತ 7 ಖಾಯಂ ಶಿಕ್ಷಕರು ಹಾಗೂ ಒಬ್ಬರು ಇಂಗ್ಲಿಷ್‌ ಸ್ಪೀಕಿಂಗ್‌ ಶಿಕ್ಷಕಿ ಸೇರಿದಂತೆ 2 ಗೌರವ ಶಿಕ್ಷಕಿಯರು ಸೇವೆ ಸಲ್ಲಿಸುತ್ತಿದ್ದಾರೆ. ಶಾಲೆಯು 2009-10ನೇ ಸಾಲಿನಿಂದ 8ನೇ ತರಗತಿಯನ್ನು ಒಳಗೊಂಡಿದ್ದು, ಪ್ರತೀ ವರ್ಷ ಶಾಲೆಯ 7 ಮತ್ತು 8ನೇ ತರಗತಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 3 ವಿದ್ಯಾರ್ಥಿಗಳಿಗೆ ಶಾಲೆಯ ಹಳೆ ವಿದ್ಯಾರ್ಥಿಗಳು ಪ್ರೋತ್ಸಾಹದಾಯಕ ಬಹುಮಾನ ನೀಡುತ್ತಿದ್ದಾರೆ.

ಶಾಲೆಯು 67 ಸೆಂಟ್ಸ್‌ ಪ್ರದೇಶದಲ್ಲಿ ಕಟ್ಟಡ ಹೊಂದಿದ್ದು, ಕೆಲವೇ ಅಂತರದಲ್ಲಿ 4.57 ಎಕ್ರೆ ಪ್ರದೇಶದಲ್ಲಿ ವಿಶಾಲವಾದ ಆಟದ ಮೈದಾನ ಹೊಂದಿದೆ. ಶಾಲೆಯಲಿ Éಕಲಿತ ನೂರಾರು ವಿದ್ಯಾರ್ಥಿಗಳು ಇಂದು ಶಿಕ್ಷಕರಾಗಿ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಡಾಕ್ಟರ್‌, ಇಂಜಿನಿಯರ್‌ ಸೇರಿದಂತೆ ವಿವಿ« ‌ಉನ್ನತ ಹುದ್ದೆಯಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳು ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಸ್ತುತ ಶಾಲೆಯು ಸಾಕಷ್ಟು ತರಗತಿ ಕೊಠಡಿಯನ್ನು ಹೊಂದಿದ್ದು, ಶಾಲಾ ಆವರಣ ಗೋಡೆ, ಕುಡಿಯುವ ನೀರಿನ ಬಾವಿ, ಅಕ್ವಾಗಾರ್ಡ್‌, ಅಡುಗೆ ಕೋಣೆ, ಸುಸಜ್ಜಿತ ಸಭಾಂಗಣ, ಪ್ರೊಜೆಕ್ಟರ್‌ ಸಹಿತ ಎಜ್ಯುಸ್ಯಾಟ್‌, ರಂಗಮಂದಿರ, ಶೌಚಾಲಯ ಸೇರಿದಂತೆ ಮೂಲ ಅವಶ್ಯಕತೆಗಳನ್ನು ಶಾಲೆ ಒಳಗೊಂಡಿದೆ.

ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಸಹಭಾಗಿತ್ವದಲ್ಲಿ ತರಕಾರಿತೋಟ, ಹೂ ತೋಟ ನಿರ್ಮಿಸಲಾಗಿದ್ದು, ಸ್ವತ್ಛತೆ ಬಗ್ಗೆ ಮಕ್ಕಳಿಗೆ ಮನವರಿಕೆ ಮಾಡಲಾಗುತ್ತಿದೆ. “ನಲಿದು ಕಲಿಯೋಣ ಬದುಕು ರೂಪಿಸೋಣ’ ಧ್ಯೇಯ ವಾಕ್ಯವನ್ನು ಶಾಲೆಯಲ್ಲಿ ಅಳವಡಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಕಳೆದ 100 ವರ್ಷಗಳಿಂದಲೂ ಕಾಯ್ದುಕೊಂಡು ಬರಲಾಗಿದೆ.

2012ರಲ್ಲಿ ಶಾಲೆಯ ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೇರಿ ಶತಮಾನೋತ್ಸವನ್ನು ವಿಜೃಂಭಣೆಯಿಂದ ಆಚರಿಸಿದ್ದಾರೆ. ಈ ಸಂದರ್ಭ ಶಾಲೆಗೆ ಅಗತ್ಯವಿರುವ ಸಭಾಭವನ, ರಂಗಮಂದಿರ ಸೇರಿದಂತೆ ಬಹುತೇಕ ಮೂಲ ಸೌಕರ್ಯಗಳನ್ನು ನಿರ್ಮಾಣ ಮಾಡಲಾಗಿದೆ. ಶಾಲೆಯ ವಿದ್ಯಾರ್ಥಿಗಳು ಕ್ರೀಡೆ ಹಾಗೂ ಪ್ರತಿಭಾ ಕಾರಂಜಿಗಳಲ್ಲಿ ಪ್ರತೀ ವರ್ಷ ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸಿ ಬಹುಮಾನ ಪಡೆಯುತ್ತಿದ್ದಾರೆ.

ಗುಣಮಟ್ಟದ ಶಿಕ್ಷಣ
ಶಿಕ್ಷಣ ವಂಚಿತರಾಗುತ್ತಿದ್ದ ಗ್ರಾಮೀಣ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಶಾಲೆಯ ಸ್ಥಾಪನೆಯಾಗಿದ್ದು, ಗುಣ ಮಟ್ಟದ ಶಿಕ್ಷಣವನ್ನು ಶಿಕ್ಷಕರು ನೀಡುತ್ತಾ ಬಂದಿರುವ ಪ್ರತಿಫ‌ಲವಾಗಿ ಕಳೆದ 108 ವರ್ಷಗಳಿಂದ ಶಾಲೆಯಲ್ಲಿ ಮಕ್ಕಳ ಕಲರವ ಇರುವಂತಾಗಿದೆ. ಗ್ರಾಮಸ್ಥರ ಪರಿಪೂರ್ಣ ಸಹಕಾರದೊಂದಿಗೆ ಶಾಲೆ ಮೂಲ ಸೌಕರ್ಯ ಒಳಗೊಂಡಿದೆ.
-ಅಂಡಾರು ಮಹಾವೀರ ಹೆಗ್ಡೆ, ಹಳೆ ವಿದ್ಯಾರ್ಥಿ (ಖ್ಯಾತ ಉದ್ಯಮಿ)

ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಭರಾಟೆಯ ನಡುವೆಯೂ ನಮ್ಮ ಶಾಲೆ ಸಾಕಷ್ಟು ವಿದ್ಯಾರ್ಥಿಗಳನ್ನು ಒಳಗೊಂಡಿದ್ದು, ಗ್ರಾಮಸ್ಥರ ಸಹಕಾರ ಹಾಗೂ ಕೊಡುಗೆಗಳಿಂದ ಶಾಲೆ ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದೆ.
– ಕೆ.ಎಂ. ಹರಿಣಿ ಶೆಟ್ಟಿ, ಮುಖ್ಯ ಶಿಕ್ಷಕರು

-  ಜಗದೀಶ ಅಜೆಕಾರು

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEW-SCHOOL

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜಿಲ್ಲೆಯ ಮೊದಲ ಕ್ರಿಶ್ಚಿಯನ್‌ ಪ್ರೌಢಶಾಲೆಗೆ 121ರ ಸಂಭ್ರಮ

430514561342IMG-20191203-WA0023

ಅನಂತೇಶ್ವರ ದೇಗುಲದ ಪೌಳಿಯಲ್ಲಿ ಪ್ರಾರಂಭವಾದ ಶಾಲೆಗೆ 128ರ ಸಂಭ್ರಮ

sx-22

ಸ್ವಾತಂತ್ರ್ಯಹೋರಾಟಗಾರರನ್ನು ನೀಡಿದ ಶಾಲೆಗೆ 111 ವರ್ಷಗಳ ಸಂಭ್ರಮ

ds-24

112 ವರ್ಷ ಕಂಡಿರುವ ಮೂಡುಬಿದಿರೆಯ ಡಿ.ಜೆ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ds-35

ಮನೆಯ ಚಾವಡಿಯಲ್ಲಿ ಪ್ರಾರಂಭಗೊಂಡಿದ್ದ ಶಾಲೆಗೆ 105ರ ಸಂಭ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.