ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಕನ್ನಡ ಅನುಷ್ಠಾನ: ಶ್ರೀನಿವಾಸ ಪೂಜಾರಿ


Team Udayavani, Nov 2, 2019, 4:40 AM IST

nov-43

ಮಂಗಳೂರು: ರಾಜ್ಯದಲ್ಲಿ ಕನ್ನಡವನ್ನು ಉಳಿಸಿ ಬೆಳೆಸಲು ಪ್ರಸ್ತಾವಿತ ರಾಷ್ಟ್ರೀಯ ಶಿಕ್ಷಣ ನೀತಿ ಆಶಾದಾಯಕವಾಗಿದೆ. ನೂತನ ಶಿಕ್ಷಣ ನೀತಿಯಿಂದ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕನ್ನಡದಲ್ಲಿ ಅನುಷ್ಠಾನಗೊಳಿಸಲು ಅವಕಾಶ ಸಿಗಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ನಗರದ ನೆಹರೂ ಮೈದಾನದಲ್ಲಿ ಶುಕ್ರವಾರ ಜರಗಿದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.

ಕನ್ನಡ ಭಾಷೆಯನ್ನು ಶ್ರೀಮಂತ ಗೊಳಿಸುವುದರೊಂದಿಗೆ ನಮ್ಮದೇ ತುಳು, ಕೊಡವ, ಬ್ಯಾರಿ ಭಾಷೆಗಳ ಸಾಹಿತ್ಯ ಸಂಸ್ಕೃತಿಗಳ ಉತ್ತೇಜನಕ್ಕೂ ಮುಂದಾಗಬೇಕು. ಈ ಜಿಲ್ಲೆ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನೀಡಿರುವ ಕೊಡುಗೆ ಅನನ್ಯವಾದುದು. ಕನ್ನಡದ ಅನೇಕ ಶ್ರೇಷ್ಠ ಸಾಹಿತಿಗಳು, ಚಿಂತಕರು ಈ ನೆಲದವರು ಎಂಬುದು ನಮ್ಮೆಲ್ಲರ ಹೆಮ್ಮೆ ಎಂದರು.

ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕ ಡಾ| ಭರತ್‌ ಶೆಟ್ಟಿ, ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್‌, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ, ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌, ಜಿ.ಪಂ. ಸಿಇಒ ಡಾ| ಸೆಲ್ವಮಣಿ, ಪೊಲೀಸ್‌ ಆಯುಕ್ತ ಡಾ|ಹರ್ಷ, ಎಸ್‌ಪಿ ಲಕ್ಷ್ಮೀಪ್ರಸಾದ್‌, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಮನಪಾ ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ ಉಪಸ್ಥಿತರಿದ್ದರು.

ಕೆಲವೆಡೆ ಹಾರಾಡಿದ ಅನ್ಯ ಧ್ವಜ
ಮಂಗಳೂರು/ ಉಡುಪಿ: ಕರ್ನಾಟಕ ರಾಜ್ಯೋತ್ಸವದ ನಡುವೆಯೇ ಬೆಳ್ತಂಗಡಿಯ ಬಸ್‌ನಿಲ್ದಾಣ ಮತ್ತು ಉಡುಪಿಯ ಶಿರಿಬೀಡಿನಲ್ಲಿ ಅನ್ಯ ಧ್ವಜಗಳು ಹಾರಾಡಿದ ಘಟನೆ ವರದಿಯಾಗಿವೆ.

ಆಕರ್ಷಕ ಪಥಸಂಚಲನ, ಸಾಂಸ್ಕೃತಿಕ ಸಂಭ್ರಮ
ನಗರದ ಅಂಬೇಡ್ಕರ್‌ ವೃತ್ತದಿಂದ ನೆಹರೂ ಮೈದಾನದವರೆಗೆ ತಾಯಿ ಭುವನೇಶ್ವರಿಯ ಮೆರವಣಿಗೆ ಹಲವು ಸ್ತಬ್ಧಚಿತ್ರಗಳ ಸಹಿತ ನಡೆಯಿತು. ಪಥಸಂಚಲನದಲ್ಲಿ ಎರಡು ಪೊಲೀಸ್‌ ಬ್ಯಾಂಡ್‌ ಸೇರಿದಂತೆ ಒಟ್ಟು 13 ತಂಡಗಳು ಭಾಗವಹಿಸಿದವು.

ಮುಂದಿನ ವರ್ಷ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಮನಪಾ ಚುನಾವಣೆ ಘೋಷಣೆ ಆಗಿರುವುದರಿಂದ ನಗರ ವ್ಯಾಪ್ತಿಯಲ್ಲಿ ನೀತಿಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಈ ಬಾರಿ ಆಯೋಜಿಸಿರಲಿಲ್ಲ. ಮುಂದಿನ ವರ್ಷ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಜತೆಯಾಗಿ ನೀಡಲಾಗುವುದು ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.