ಧಾರವಾಡದಲ್ಲೇ ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರ ಸ್ಥಾಪನೆಯಾಗಲಿ
Team Udayavani, Nov 2, 2019, 9:53 AM IST
ಧಾರವಾಡ: ಕರ್ನಾಟಕ ಏಕೀಕರಣ ಚಳವಳಿಗೆ ಚೈತನ್ಯ ತುಂಬಿ ಶಕ್ತಿ ಕೇಂದ್ರವಾಗಿದ್ದ ಧಾರವಾಡದಲ್ಲಿಯೇ ಕನ್ನಡ ಶಾಸ್ತ್ರೀಯ ಭಾಷಾ ಅಧ್ಯಯನ ಕೇಂದ್ರ ಸ್ಥಾಪಿಸಬೇಕು ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು. ಕವಿಸಂನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಏಳು ದಿನಗಳ ಕಾಲ ಹಮ್ಮಿಕೊಂಡಿರುವ ವೈವಿಧ್ಯಮಯ ಕಾರ್ಯಕ್ರಮಕ್ಕೆ ಶುಕ್ರವಾರ ಸಂಜೆ ಚಾಲನೆ ನೀಡಿ ಅವರು ಮಾತನಾಡಿದರು.
ಹಲ್ಮಿಡಿ ಶಾಸನದಿಂದ ಈವರೆಗೆ 30 ಸಾವಿರ ಶಾಸನ ಲಭ್ಯವಾಗಿದೆ. ಇಂತಹ ಕನ್ನಡ ಭಾಷೆಯ ಶಾಸ್ತ್ರೀಯ ಭಾಷೆಯ ಸ್ಥಾನಮಾನಕ್ಕೆ ಹೋರಾಟ ನಡೆದಾಗ ಮನಮೋಹನಸಿಂಗ್ ಅವರಲ್ಲಿ ತಮಿಳಿನಂತೆ ಕನ್ನಡಕ್ಕೂ ಮಾನ್ಯತೆ ನೀಡುವಂತೆ ಕೇಳಿದ್ದೆ. ಇದಕ್ಕೆ ಸ್ಪಂದಿಸಿದ್ದ ಅವರು, ಕ್ಯಾಬಿನೆಟ್ ನಿರ್ಣಯ ಇಲ್ಲದೆಯೇ ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡಿದ್ದರು. ಆದರೆ ಅದರ ಉಪಯೋಗ ಮಾತ್ರ ಈವರೆಗೂ ಮಾಡಿಕೊಂಡಿಲ್ಲ. ಆ ನಂತರ ಬಂದ ಸರಕಾರಗಳಿಗೂ ನಾನು ಪತ್ರ ಬರೆದಿದ್ದೆ. ಆದರೆ ಏನೂ ಆಗಲಿಲ್ಲ. ಕೇಂದ್ರದಿಂದ ಕೊಟ್ಟ ಹಣ ಕೂಡ ಉಪಯೋಗ ಮಾಡಲಿಲ್ಲ ಎಂದರು.
ಸಾನ್ನಿಧ್ಯ ವಹಿಸಿದ್ದ ಬೈರನಟ್ಟಿ ದೊರೆಸ್ವಾಮಿ ಮಠದ ಶಾಂತಲಿಂಗ ಸ್ವಾಮೀಜಿ ಮಾತನಾಡಿ, ಕನ್ನಡ ಶಾಸ್ತ್ರೀಯ ಭಾಷಾ ಅಧ್ಯಯನ ಸಂಸ್ಥೆ ಧಾರವಾಡಕ್ಕೆ ಬರಬೇಕು ಎನ್ನುವುದು ಪಾಪು ಅವರ ಕನಸಾಗಿತ್ತು. ಆದರೆ ಆ ಕನಸು ಇನ್ನೂ ನನಸಾಗಿಲ್ಲ. ಈ ಹಿನ್ನೆಲೆ ಭಾಷಾ ಅಧ್ಯಯನ ಕೇಂದ್ರ ಧಾರವಾಡಕ್ಕೆ ಆಗಮಿಸುವಂತೆ ಹೋರಾಟ ಮಾಡಬೇಕು ಎಂದರು.
ಕರ್ನಾಟಕ ಸಾಹಿತ್ಯ ಅಕಾಡೆಮಿ ನೂತನ ಸದಸ್ಯ ಡಾ| ಜಿನದತ್ತ ಹಡಗಲಿ, ಸಂಘದ ಹಿರಿಯ ಸದಸ್ಯರಾದ ಡಾ| ವೀರಣ್ಣ ರಾಜೂರ, ಡಾ| ಶೈಲಜಾ ಬೆಟಗೇರಿ, ಷಣ್ಮುಖ ಅಡನೂರ, ಆರ್.ಬಿ. ವನಹಳ್ಳಿ ಅವರನ್ನು ಸನ್ಮಾನಿಸಲಾಯಿತು. ಬಳ್ಳಾರಿಯ ಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡದ ಸದಸ್ಯರು ತೊಗಲು ಗೊಂಬೆಯಾಟ ಪ್ರಸ್ತುತಪಡಿಸಿದರು. ಪ್ರಕಾಶ ಉಡಕೇರಿ ಸ್ವಾಗತಿಸಿದರು. ಕೃಷ್ಣ ಜೋಶಿ ಪ್ರಾಸ್ತಾವಿಕ ಮಾತನಾಡಿದರು. ವಿಶ್ವೇಶ್ವರಿ ಹಿರೇಮಠ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.