ರಾಜ್ಯೋತ್ಸವದಲ್ಲೂ ತೆಲುಗು ಚಿತ್ರಗಳ ಅಬ್ಬರ


Team Udayavani, Nov 2, 2019, 12:52 PM IST

cb-tdy-2

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಒಂದೆಡೆ ಶುಕ್ರವಾರ ಕರ್ನಾಟಕ ರಾಜ್ಯೋತ್ಸವ ಸದ್ದು ಕೇಳಿ ಬಂದರೆ, ಮತ್ತೂಂದೆಡೆ ಜಿಲ್ಲೆಯ ಚಿತ್ರ ಮಂದಿರಗಳಲ್ಲಿ ತೆಲುಗು ಭಾಷೆಯ ಚಿತ್ರಗಳು ಅಬ್ಬರದ ಪ್ರದರ್ಶನ ಯಾವುದೇ ಅಡೆತಡೆ ಇಲ್ಲದೇ ಕನ್ನಡ ಅಸ್ಮಿತೆಯನ್ನು ಅಣಕಿಸುವಂತಿದ್ದ ದೃಶ್ಯ ಜಿಲ್ಲಾ ಕೇಂದ್ರದಲ್ಲಿಯೇ ಕಂಡು ಬಂತು.

ನವೆಂಬರ್‌ ತಿಂಗಳ ಪೂರ್ತಿ ಜಿಲ್ಲೆಯ ಚಿತ್ರ ಮಂದಿರಗಳಲ್ಲಿ ಕನ್ನಡ ಚಲನ ಚಿತ್ರಗಳನ್ನು ಪ್ರದರ್ಶಿಸುವಂತೆ ಜಿಲ್ಲಾಡಳಿತ ನೀಡಿದ ಸೂಚನೆಗೂ ಇಲ್ಲಿನ ಚಿತ್ರ ಮಂದಿರಗಳ ಮಾಲೀಕರು ಬಗ್ಗಲಿಲ್ಲ. ಅತ್ತ ಕನ್ನಡ ಚಿತ್ರಗಳನ್ನೇ ಪ್ರದರ್ಶಿಸಬೇಕೆಂದು ಜಿಲ್ಲಾಡಳಿತಕ್ಕೆ ಮನವಿ ಕೊಟ್ಟು ಕನ್ನಡ ಪರ ಸಂಘಟನೆಗಳು ತೆಲುಗು ಭಾಷಾ ಚಿತ್ರಗಳ ಪ್ರದರ್ಶನಕ್ಕೆ ತೆಲೆ ಕೆಡಿಸಿಕೊಳ್ಳದೇ ಸುಮ್ಮನಾದ ಕಾರಣ ರಾಜ್ಯೋತ್ಸವ ತಿಂಗಳ ಮೊದಲ ದಿನವೇ ಜಿಲ್ಲೆಯಲ್ಲಿ ಪರ ಭಾಷಾ ಚಿತ್ರಗಳು ಕೇಕೆ ಹಾಕುವಂತೆ ಆಯಿತು.

ಕನ್ನಡ ಶಾಲೆಗಳು ವಿಲೀನ: ಜಿಲ್ಲೆಯು ಆಂಧ್ರದ ಗಡಿಯಲ್ಲಿದ್ದು ತೆಲುಗು ಭಾಷೆ ಹೆಚ್ಚು ಪ್ರಾಬಲ್ಯವಿದೆ. ಈಗಾಗಲೇ ಜಿಲ್ಲೆಯಲ್ಲಿ ಆಂಗ್ಲ ವ್ಯಾಮೋಹ ದಿಂದ ಕನ್ನಡ ಶಾಲೆಗಳು ಒಂದಂಕಿ ದಾಟದ ಪರಿಸ್ಥಿತಿ ನಿರ್ಮಾಣವಾಗಿ ಜಿಲ್ಲೆಯಲ್ಲಿ ಹತ್ತಾರು ವರ್ಷದಲ್ಲಿ ನೂರಾರು ಕನ್ನಡ ಶಾಲೆಗಳು ಮುಚ್ಚಿ ಇತರೆ ಶಾಲೆಗಳಲ್ಲಿ ಸದ್ದಿಲ್ಲದೇ ವಿಲೀನವಾಗಿದೆ. ಆದರೆ ನವೆಂಬರ್‌ ತಿಂಗಳಲ್ಲಾದರೂ ಕನ್ನಡ ನೆಲ, ಜಲ ಸಂಸ್ಕೃತಿ, ಭಾಷೆ ಬಗ್ಗೆ ಅರಿವು ಮೂಡಿಸುವ ಅಥವಾ ಒಳ್ಳೆಯ ಸದಾಭಿರುಚಿಯ ಕನ್ನಡ ಚಿತ್ರಗಳನ್ನು ಪ್ರದರ್ಶಿಸುವಂತೆ ಚಿತ್ರ ಮಂದಿರದ

ಮಾಲೀಕರಿಗೆ ಜಿಲ್ಲಾಡಳಿತ ಸೂಚಿಸಿದರೂ ಯಾವುದಕ್ಕೂ ಕ್ಯಾರೆ ಎನ್ನದ ಚಿತ್ರ ಮಂದಿರಗಳು, ಕನ್ನಡ ಭಾಷೆಗೆ ಅಪಮಾನ ಮಾಡುವ ರೀತಿಯಲ್ಲಿ ಪರ ಭಾಷಾ ಚಿತ್ರಗಳನ್ನು ಪ್ರದರ್ಶಿಸಿ ತಮ್ಮ ಮೊಂಡುತನ ಪ್ರದರ್ಶಿಸುತ್ತಿರುವುದು ಜಿಲ್ಲೆಯ ಕನ್ನಡ ಪ್ರೇಮಿಗಳಲ್ಲಿ ಬೇಸರ ತರಿಸಿದೆ.

ಜಿಲ್ಲಾಡಳಿತ ಸೂಚನೆ ಲೆಕ್ಕಕ್ಕಿಲ್ಲ: ಸಾಮಾನ್ಯವಾಗಿ ಹಿಂದೆ ಚಿತ್ರದ ಮಂದಿರ ಮಾಲೀಕರೇ ಜಿಲ್ಲಾಡಳಿತದ ಸೂಚನೆಗೆ ಕಿವಿಗೊಟ್ಟು ಕನ್ನಡ ಚಿತ್ರಗಳನ್ನು ವರ್ಷ ಪೂರ್ತಿ ಅಲ್ಲದಿದ್ದರೂ ನವೆಂ ವರ್‌ ತಿಂಗಳ ರಾಜ್ಯೋತ್ಸವದ ಪ್ರಯುಕ್ತ ಪ್ರದ ರ್ಶಿಸಿ ಕನ್ನಡ ಪ್ರೇಮ ಮೆರೆಯುತ್ತಿದ್ದವು. ಆದರೆ ವರ್ಷದಿಂದ ವರ್ಷಕ್ಕೆ ನವೆಂಬರ್‌ ತಿಂಗಳು ಬಂದರೂ ಕೂಡ ಪರಭಾಷಾ ಚಿತ್ರಗಳನ್ನು ಪ್ರದರ್ಶಿಸಿ ಜಿಲ್ಲಾಡಳಿತ ಸೂಚನೆ ಲೆಕ್ಕಿಸದಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಕನ್ನಡ ಚಿತ್ರ ಪ್ರದರ್ಶಿಸಬಹುದು. ಕಡ್ಡಾಯವಲ್ಲ ಅಂತೆ..

ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾಡಳಿತ ಕನ್ನಡ ಚಿತ್ರಗಳನ್ನು ಪ್ರದರ್ಶಿಸುವಂತೆ ಹೇಳಿದೆ. ನೀವು ತೆಲುಗು ಭಾಷೆಯ ಚಿತ್ರಗಳ ಪ್ರದರ್ಶನ ಮುಂದುವರೆಸಿದ್ದೀರಲ್ಲಾ ಎಂದು ಚಿಕ್ಕಬಳ್ಳಾಪುರ ನಗರದ ಬಾಲಾಜಿ ಚಿತ್ರ ಮಂದಿರದ ವ್ಯವಸ್ಥಾಪಕ ವೇಣುರನ್ನು ಪ್ರಶ್ನಿಸಿದರೆ, ಯಾವುದೇ ಭಾಷೆಯ ಚಿತ್ರವನ್ನು ನಾವು ಪ್ರದರ್ಶಿಸಬಹುದು. ಕನ್ನಡ ಚಿತ್ರ ಪ್ರದರ್ಶಿಸಬೇಕೆಂಬ ಕಡ್ಡಾಯ ಇಲ್ಲ ಎಂದರು. ಬಾಲಾಜಿ ಚಿತ್ರ ಮಂದಿರದಲ್ಲಿ ತೆಲುಗು ನಟ ಚಿರಂಜೀವಿ ಅಭಿನಯದ ಸೈರಾ ನರಸಿಂಹರೆಡ್ಡಿ ಚಿತ್ರ ಪ್ರದರ್ಶನಗೊಳ್ಳುತ್ತಿದೆ.

ಪ್ರೇಕ್ಷಕರು ಬರಲ್ಲ ಎಂಬ ಆರೋಪ :  ಕನ್ನಡ ಚಿತ್ರಗಳನ್ನು ಪ್ರದರ್ಶಿಸಬಹುದು. ಆದರೆ ನಾವು ನಿರೀಕ್ಷಿಸಿದಷ್ಟು ಪ್ರೇಕ್ಷಕರು ಸಿನಿಮಾ ನೋಡಲಿಕ್ಕೆ ಬರಲ್ಲ. ಚಿತ್ರ ಮಂದಿರ ನಿರ್ವಹಣೆಗೆ ತಗುಲುವ ವೆಚ್ಚವಾದರೂ ನಮಗೆ  ಬರಬೇಕಲ್ಲ. ಸುಮ್ಮನೆ ಕನ್ನಡ ಚಿತ್ರ ಹಾಕಿ ಎನ್ನುತ್ತಾರೆ. ಒತ್ತಾಯ ಮಾಡುವರೇ ಚಿತ್ರ ಮಂದಿರಗಳಿಗೆ ಬಂದು ಚಿತ್ರಗಳನ್ನು ವೀಕ್ಷಣೆ ಮಾಡುವುದಿಲ್ಲ. ಕಳೆದ ವರ್ಷ ಕನ್ನಡ ಚಿತ್ರಗಳನ್ನು ಸಾಕಷ್ಟು ಪ್ರದರ್ಶನ ಮಾಡಿದೆವು. ಈಗಲೂ ಕನ್ನಡ ಚಿತ್ರಗಳನ್ನು ಪ್ರದರ್ಶನ ಮಾಡುತ್ತಿದ್ದೇವೆ. ಆದರೆ ನಾವು ನಿರೀಕ್ಷಿದಷ್ಟು ಪ್ರೇಕ್ಷಕರು ಬರಲ್ಲ ಎಂದು ನಗರದ ವಾಣಿ ಚಿತ್ರದ ಮಂದಿರದಲ್ಲಿ ಟಿಕೆಟ್‌ ಹಂಚಿಕೆ ಮಾಡುವ ಹೆಸರು ಹೇಳಲು ಇಚ್ಛಿಸದ ವ್ಯಕ್ತಿಯೊಬ್ಬರು ಉದಯವಾಣಿಗೆ ತಿಳಿಸಿದರು.

 

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.