ಗದಗ ಜಿಲ್ಲಾಡಳಿತ ಭವನದಲ್ಲಿ ಅಗ್ನಿ ಅವಘಡ: ಕಂಪ್ಯೂಟರ್, ಕಡತಗಳು ಭಸ್ಮ
Team Udayavani, Nov 2, 2019, 3:50 PM IST
ಗದಗ: ಇಲ್ಲಿನ ಜಿಲ್ಲಾಡಳಿತ ಭವನದ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಕಂಪ್ಯೂಟರ್ ಮತ್ತು ನೂರಾರು ಕಡತಗಳು ಸುಟ್ಟು ಕರಕಲಾಗಿವೆ.
ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 4 ರಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಯಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಂಪ್ಯೂಟರ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಒಂದು ಕಂಪ್ಯೂಟರ್, ಪ್ರಿಂಟರ್ ಹಾಗೂ ಅನೇಕ ಕಡತಗಳು ಸುಟ್ಟು ಕರಕಲಾಗಿದ್ದು, ಕಚೇರಿಯಲ್ಲಿ ದಟ್ಟವಾದ ಹೊಗೆ ಆವರಿಸಿತ್ತು.
ಇದರಿಂದ ಗಾಬರಿಗೊಂಡ ಸಿಬ್ಬಂದಿ ಕಚೇರಿಯಿಂದ ಹೊರಗೆ ಓಡಿ ಬಂದಿದ್ದಾರೆ. ಬಳಿಕ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಮೂಲಕ ಸಂಭವಿಸಬಹುದಾದ ಭಾರೀ ಅನಾಹುತವನ್ನು ತಪ್ಪಿಸಿದರು.
ಮಧ್ಯಾಹ್ನ ಊಟದ ಸಮಯವಾಗಿದ್ದರಿಂದ ಒಬ್ಬಿಬ್ಬರು ಸಿಬ್ಬಂದಿ ಮಾತ್ರ ಕಚೇರಿಯಲ್ಲಿದ್ದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ನಿಗಮದ ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.