ತೆಲುಗು ಚಿತ್ರದಲ್ಲಿ ಅನಂತ್ನಾಗ್ ನಟನೆ
42 ವರ್ಷಗಳ ನಂತರ ತೆಲುಗಿನತ್ತ ಪಯಣ
Team Udayavani, Nov 3, 2019, 5:01 AM IST
ಹಿರಿಯ ನಟ ಅನಂತ್ ನಾಗ್ ಸದಾ ಸಿನಿಮಾ ನಟನೆಯಲ್ಲಿ ಬಿಝಿಯಾಗಿರುತ್ತಾರೆ. ಹೊಸಬರಿಂದ ಹಿಡಿದು, ಸ್ಟಾರ್ ನಟರ ಚಿತ್ರಗಳಲ್ಲೂ ಅನಂತ್ನಾಗ್ ಅವರಿಗೆ ಪ್ರಮುಖ ಪಾತ್ರವಿರುತ್ತದೆ. ಸಿನಿಮಾಕ್ಕೆ ದೊಡ್ಡ ತಿರುವು ಕೊಡುವ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಅನಂತ್ ನಾಗ್ ಅವರನ್ನು ತಮ್ಮ ಚಿತ್ರಕ್ಕೆ ಕರೆತರಬೇಕೆಂದು ಕನಸು ಕಾಣುವ ಸಿನಿಮಾ ಮಂದಿ ಸಾಕಷ್ಟಿದ್ದಾರೆ.
ಇದೇ ರೀತಿ ಕನಸು ಕಂಡ ತೆಲುಗು ನಿರ್ದೇಶಕ ಈಗ ತಮ್ಮ ನಿರ್ದೇಶನದ ಹೊಸ ಚಿತ್ರದಲ್ಲಿ ಅನಂತ್ನಾಗ್ ನಟಿಸುವಂತೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಅನಂತ್ ನಾಗ್ ಅವರು ತೆಲುಗು ಚಿತ್ರವೊಂದರಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂಬ ಸುದ್ದಿ ಜೋರಾಗಿ ಓಡುತ್ತಿದೆ. ತೆಲುಗಿನಲ್ಲಿ ತಯಾರಾಗುತ್ತಿರುವ “ಭೀಷ್ಮ’ ಚಿತ್ರದಲ್ಲಿ ಅನಂತ್ ನಾಗ್ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರಂತೆ.
ಈ ಮೂಲಕ 42 ವರ್ಷಗಳ ನಂತರ ಅನಂತ್ ನಾಗ್ ತೆಲುಗು ಚಿತ್ರದಲ್ಲಿ ನಟಿಸಿದಂತಾಗುತ್ತದೆ. 1977 ತೆರೆಕಂಡ “ಪ್ರೇಮಲೋಕಲು’ ಚಿತ್ರದಲ್ಲಿ ನಟಿಸಿದ್ದರು. ಆ ನಂತರ ತೆಲುಗಿನಿಂದ ಸಾಕಷ್ಟು ಅವಕಾಶಗಳು ಬಂದರೂ ಅನಂತ್ ನಾಗ್ ಅವರು ತೆಲುಗು ಚಿತ್ರಗಳಲ್ಲಿ ನಟಿಸಿರಲಿಲ್ಲ. ಈಗ “ಭೀಷ್ಮ’ ಚಿತ್ರದ ಮೂಲಕ ಮತ್ತೆ ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಿತಿನ್, ರಶ್ಮಿಕಾ ಮಂದಣ್ಣ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.
ಮೂಲಗಳ ಪ್ರಕಾರ, ಈ ಚಿತ್ರದಲ್ಲಿ ಅನಂತ್ ನಾಗ್ ಸಾವಯವ ಕೃಷಿಯಲ್ಲಿ ತೊಡಗಿರುವ ಬ್ರಹ್ಮಚಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಅನಂತ್ ನಾಗ್ ನಟಿಸಿರುವ “ಆಯುಷ್ಮಾನ್ ಭವ’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಇದಲ್ಲದೇ, “ರುದ್ರ ಪ್ರಯಾಗ’ ಸೇರಿದಂತೆ ಇನ್ನೊಂದಿಷ್ಟು ಚಿತ್ರಗಳಲ್ಲಿ ಅನಂತ್ ನಾಗ್ ಬಿಝಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.