ಪರಿಸರ ಸ್ನೇಹಿ ಸಂಚಾರ ವ್ಯವಸ್ಥೆಗೆ ಜರ್ಮನಿಯಿಂದ 7,900 ಕೋಟಿ ಹೂಡಿಕೆ
Team Udayavani, Nov 2, 2019, 9:28 PM IST
ನವದೆಹಲಿ: ದೇಶದ ನಗರ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಸಂಚಾರ ವ್ಯವಸ್ಥೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಜರ್ಮನಿ 7,900 ಕೋಟಿ ರೂ. (1 ಬಿಲಿಯನ್ ಯೂರೋ)ಗಳನ್ನು ಹೂಡಿಕೆ ಮಾಡಲಿದೆ. ಭಾರತ ಪ್ರವಾಸದಲ್ಲಿರುವ ಜರ್ಮನಿಯ ಚಾನ್ಸಲರ್ ಏಂಜೆಲಾ ಮರ್ಕೆಲ್ ನವದೆಹಲಿಯಲ್ಲಿ ಶನಿವಾರ ಈ ವಾಗ್ಧಾನ ಮಾಡಿದ್ದಾರೆ.
ಮುಂದಿನ ಐದು ವರ್ಷಗಳವರೆಗೆ ತಮ್ಮ ದೇಶ ಈ ನೆರವು ನೀಡಲಿದೆ ಎಂದು ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅತ್ಯಂತ ಗಂಭೀರ ರೀತಿಯಲ್ಲಿ ವಾಯು ಮಾಲಿನ್ಯ ಉಂಟಾಗಿರುವ ನಡುವೆಯೇ ಈ ವಾಗ್ಧಾನ ಮಾಡಲಾಗಿದೆ.
ನವದೆಹಲಿಯಾದ್ಯಂತ ಡೀಸೆಲ್ ಬದಲಿಗೆ ವಿದ್ಯುತ್ ಚಾಲಿತ ಬಸ್ಗಳ ಸಂಚಾರ ಶುರು ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಇದರ ಜತೆಗೆ ತಮಿಳುನಾಡಿನಲ್ಲಿ 200 ಮಿಲಿಯನ್ ಯೂರೋಗಳನ್ನು ಬಸ್ ಸಂಚಾರ ಅಭಿವೃದ್ಧಿ ನಿಟ್ಟಿನಲ್ಲಿ ಹೂಡಿಕೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಆರೋಗ್ಯ ಕ್ಷೇತ್ರ, ಕೃಷಿ, ಕೃತಕ ಬುದ್ಧಿಮತ್ತೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಭಾರತದ ಜತೆಗೆ ಕೆಲಸ ಮಾಡಲು ತಮ್ಮ ದೇಶ ಉತ್ಸುಕವಾಗಿದೆ ಎಂದು ಮರ್ಕೆಲ್ ಹೇಳಿದ್ದಾರೆ.
ಇಸ್ರೇಲ್ ಮೂಲದ ಪೆಗಸಾಸ್ ಎಂಬ ಸ್ಪೈ ಸಾಫ್ಟ್ ವೇರ್, ವಾಟ್ಸಾಪ್ ಮೂಲಕ ಸ್ಮಾರ್ಟ್ ಫೋನ್ ಪ್ರವೇಶಿಸಿ ಮಾಹಿತಿ ಕದಿಯುತ್ತಿದೆ. ವಾಟ್ಸಾಪ್ ಮೂಲಕ ಕಳವಿಗೆ ಒಳಗಾದವರಲ್ಲಿ ಭಾರತೀಯರೂ ಇದ್ದು, ಪತ್ರಕರ್ತರು, ರಾಜಕಾರಣಿಗಳು, ಸಾಮಾಜಿಕ ಹೋರಾಟಗಾರರ ಮೇಲೆ ಕಣ್ಣಿಡಲಾಗಿತ್ತು ಎನ್ನಲಾಗಿದೆ. ಈ ಕಾರಣದಿಂದ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.