ಪ್ರತಿಭಟನೆ ಬಿಸಿಗೆ ನೊಂದ ರೋಗಿಗಳು

Team Udayavani, Nov 3, 2019, 3:10 AM IST

pratibhatane

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಿಂಟೋ ಆಸ್ಪತ್ರೆಯಲ್ಲಿ ತರಬೇತಿ ನಿರತ ಸ್ನಾತಕೋತ್ತರ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಸ್ನಾತಕೋತ್ತರ ವಿದ್ಯಾರ್ಥಿಗಳು ಶನಿವಾರವೂ ಪ್ರತಿಭಟನೆ ಮುಂದುವರಿಸಿದರು.

ವಿಕ್ಟೋರಿಯಾ ಸಮುಚ್ಛಯದ ನಿವಾಸಿ ವೈದ್ಯ ಸಂಘದ ಬೆಂಬಲದ ಜತೆಗೆ ಶನಿವಾರ ಬೆಳಗ್ಗೆ ಮಿಂಟೋ ಆಸ್ಪತ್ರೆಯಿಂದ ಬೆಂಗಳೂರು ಮೆಡಿಕಲ್‌ ಕಾಲೇಜುವರೆಗೆ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನಾ ರ್ಯಾಲಿ ನಡೆಸಿದರು. ಮಿಂಟೋ, ವಿಕ್ಟೋರಿಯಾ, ವಾಣಿ ವಿಲಾಸ ಆಸ್ಪತ್ರೆಗಳ ಹೊರರೋಗಿಗಳ ಘಟಕವನ್ನು ಬಂದ್‌ ಮಾಡಿ ಕರವೇ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಮಾಜಿ ಅಧ್ಯಕ್ಷ ಡಾ.ರವೀಂದ್ರ, ವೈದ್ಯರ ಮೇಲೆ ಹಿಂದಿನಿಂದಲೂ ಹಲ್ಲೆ ನಡೆಯುತ್ತಲೇ ಇದೆ. ದೃಷ್ಟಿಗೆ ಸಂಬಂಧಪಟ್ಟಂತೆ ಒಂದು ಸಮಸ್ಯೆ ಎದುರಾಗಿದೆ. ಆ ಪ್ರಕರಣ ನ್ಯಾಯಾಲಯದಲ್ಲಿರುವಾಗ ಹಲ್ಲೆ ಏಕೆ ಮಾಡಬೇಕು. ಸಂಘಟನೆ ಕಾರ್ಯಕರ್ತರು ಪ್ರಚಾರದ ಹುಚ್ಚಿನಿಂದ ಈ ರೀತಿಯ ಹಲ್ಲೆ ಮಾಡಿದ್ದಾರೆ ಎಂದು ಹೇಳಿದರು.

ಯಾರಿಗೇ ಆಗಲಿ ಕನ್ನಡ ಮಾತನಾಡಿ ಎಂದು ಹಲ್ಲೆ ಮಾಡಿರುವುದು ತಪ್ಪು. ಪ್ರೀತಿಯಿಂದ ಕನ್ನಡ ಕಲಿಸಬೇಕೇ ಹೊರತು, ಒತ್ತಡ ಹೇರಬಾರದು. ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಲ್ಲೆ ನಡೆಸಿರುವುದು ವೇದಿಕೆ ಗೌರವಕ್ಕೆ ಧಕ್ಕೆ ತರಲಿದೆ. ಇನ್ನು ಉದ್ದೇಶ ಪೂರ್ವಕವಾಗಿ ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆಯೇ ಹಲ್ಲೆ ಏಕೆ ಮಾಡಲಾಗುತ್ತಿದೆ ಎಂದು ವೇದಿಕೆ ಕಾರ್ಯಕರ್ತರು ತಿಳಿಸಬೇಕು ಎಂದರು.

ಪರದಾಡಿದ ರೋಗಿಗಳು: ಪ್ರತಿಭಟನೆ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಸಮುಚ್ಛಯದ ಎಲ್ಲಾ ಆಸ್ಪತ್ರೆಗಳ ಹೊರರೋಗಿಗಳ ಘಟಕ ಸೇವೆಯಲ್ಲಿ ವ್ಯತ್ಯಯವಾಗಿತ್ತು. ಸಮುಚ್ಛಯದ ಬಹುತೇಕ ಆಸ್ಪತ್ರೆಗಳು ರೋಗಿಗಳ ಚಿಕಿತ್ಸೆಗೆ ಸ್ನಾತಕೋತ್ತರ ವಿದ್ಯಾರ್ಥಿಗಳನ್ನೇ (ತರಬೇತಿನಿರತ ವೈದ್ಯರು) ಹೆಚ್ಚು ಅವಲಂಭಿಸಿದ್ದು ಪ್ರತಿಭಟನೆ ಹಿನ್ನೆಲೆ ರೋಗಿಗಳನ್ನು ತಪಾಸಣೆ ಮಾಡುವವರಿಲ್ಲಂದಾಗಿತ್ತು. ದೂರದ ಊರುಗಳಿಂದ ಬಂದಿದ್ದ ರೋಗಿಗಳು ಚಿಕಿತ್ಸೆಗಾಗಿ ಪರದಾಟ ನಡೆಸಿದರು.

ಅನುಮತಿ ನೀಡಿಲ್ಲ: ರೋಗಿಗಳ ಪರದಾಟ ಕುರಿತು ಆಸ್ಪತ್ರೆ ಮುಖ್ಯಸ್ಥರನ್ನು ಪ್ರಶ್ನಿಸಿದರೆ ಒಪಿಡಿ ಬಂದ್‌ ಮಾಡಲು ಅನುಮತಿ ನೀಡಿಲ್ಲ. ಒಪಿಡಿ ಘಟಕ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳುತ್ತಾರೆ. ಇನ್ನೊಂದೆಡೆ ಸ್ನಾತಕೋತ್ತರ ವಿದ್ಯಾರ್ಥಿಗಳು ಕ್ಷಮೆ ಕೇಳುವವರೆಗೂ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ರಕ್ಷಣೆ ಸಿಗುವ ತನಕ ಕರ್ತವ್ಯಕ್ಕೆ ಹಾಜರಾಗದಿರಲು ತೀರ್ಮಾನಿಸಿದ್ದು, ಭಾನುವಾರವೂ ಕೂಡಾ ಪ್ರತಿಭಟನೆ ಮುಂದುವರೆಯುವ ಸಾಧ್ಯತೆಗಳಿವೆ.

ಪ್ರಕರಣ ದಾಖಲು: ಘಟನೆ ಕುರಿತು ಕರವೇ ಕಾರ್ಯಕರ್ತರ ವಿರುದ್ಧ ವಿವಿ ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಮೆಡಿಕಲ್‌ ಕಾಲೇಜು ಡೀನ್‌ ಡಾ.ಸತೀಶ್‌ ಅವರು ದೂರು ದಾಖಲಿಸಿದ್ದಾರೆ. 30-35 ಕರವೇ ಕಾರ್ಯಕರ್ತರು ಮಿಂಟೋ ಆವರಣಕ್ಕೆ ಬಂದು ವೈದ್ಯರ ಜತೆಗೆ ಅನುಚಿತ ವರ್ತನೆ ಮತ್ತು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

ಹಲ್ಲೆ ನೆಪದಲ್ಲಿ ಪ್ರಕರಣ ತಿರುಚುವ ಯತ್ನ: ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಕರವೇ ಮಹಿಳಾ ಘಟಕದ ಉಪಾಧ್ಯಕ್ಷೆ ಅಶ್ವಿ‌ನಿ ಗೌಡ, ಕಿರಿಯ ವೈದ್ಯರ ಮೇಲೆ ನಾವು ಹಲ್ಲೆ ಮಾಡಿಲ್ಲ. ಕಣ್ಣು ಕಳೆದುಕೊಂಡವರಿಗೆ ನ್ಯಾಯ ಕೇಳಲು ಹೋದಾಗ ಕನ್ನಡ ಭಾಷೆ ಬಗ್ಗೆ ವೈದ್ಯೆ ತುಂಬಾ ಹಗುರವಾಗಿ ಮಾತನಾಡಿದ್ದಾರೆ. ಕನ್ನಡ ಭಾಷೆ ಗೊತ್ತಿದ್ದರೂ ಏಕೆ ಉಡಾಫೆ ಅಂತ ಪ್ರಶ್ನಿಸಿದಾಗ, “ನನ್ನ ಇಷ್ಟ’ ಎಂದು ಉತ್ತರ ನೀಡಿದರು. ಆ ವೇಳೆ ಸೌಜನ್ಯದಿಂದಲೇ ಕನ್ನಡದಲ್ಲಿ ಮಾತನಾಡಿ ಅಂತ ಹೇಳಿದ್ದು, ಯಾವುದೇ ಹಲ್ಲೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಮಿಂಟೋ ಆಸ್ಪತ್ರೆ ವೈದ್ಯರು ತಮ್ಮ ನಿರ್ಲಕ್ಷ್ಯದಿಂದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೇಳೆ 22 ಮಂದಿ ಬಡ ಹಾಗೂ ವಯಸ್ಸಾದವರಿಗೆ ಕಣ್ಣು ಕಳೆದಿದ್ದಾರೆ. ನಾಲ್ಕು ತಿಂಗಳಾದರೂ ಈವರೆಗೂ ಯಾವುದೇ ಪರಿಹಾರ ನೀಡಿಲ್ಲ. ಇಂದಿಗೂ ಅವರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ. ಇನ್ನು ಮಿಂಟೋ ವೈದ್ಯರು ಸುಳ್ಳು ಆರೋಪ ಮಾಡಿ, ಹಲ್ಲೆ ನೆಪದಲ್ಲಿ ಪ್ರಕರಣವನ್ನು ತಿರುಚುವ ಪ್ರಯತ್ನ ಮಾಡುತ್ತಿದ್ದಾರೆ. ಕಣ್ಣು ಕಳೆದುಕೊಂಡವರಿಗಾಗಿ ನಮ್ಮ ನಾಯ್ಯಯುತ ಹೋರಾಟ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.