ಆರಂಭವಾಗದ ಕೋಲಾರ- ವೈಟ್‌ಫೀಲ್ಡ್ ರೈಲು!


Team Udayavani, Nov 3, 2019, 4:30 PM IST

kolar-tdy

ಕೋಲಾರ: ವಯಾ ಚಿಕ್ಕಬಳ್ಳಾಪುರ ಮಾರ್ಗವಾಗಿ ಕೋಲಾರ -ವೈಟ್‌ಫೀಲ್ಡ್ ನಡುವೆ ಅ.31ರಿಂದ ಹೊಸ ರೈಲು ಸಂಚರಿಸಲಿದೆ ಎಂದು ಸಂಸದ ಎಸ್‌. ಮುನಿಸ್ವಾಮಿ ಘೋಷಿಸಿದ್ದು, ಹುಸಿಯಾಯಿತೇ ಎಂಬ ಅನುಮಾನ ಸಾರ್ವಜನಿಕರನ್ನು ಕಾಡುವಂತಾಗಿದೆ. ಕಳೆದ 30 ವರ್ಷಗಳಿಂದಲೂ ಅವಿಭಜಿತ ಕೋಲಾರ ಜಿಲ್ಲೆಯ ಜನತೆ ರೈಲ್ವೆ ಯೋಜನೆಗಳ ಕುರಿತಂತೆ ಹುಸಿ ಭರವಸೆಗಳನ್ನು ನೋಡಿ ಬೇಸತ್ತಿದ್ದು, ನೂತನ ಬಿಜೆಪಿ ಸಂಸದ ಎಸ್‌.ಮುನಿಸ್ವಾಮಿ ಅವರಿಂದಲೂ ಹುಸಿ ಭರವಸೆ ಬಂತೇ ಎಂದು ಜನತೆ ಅನುಮಾನದಿಂದ ಕಾಣುವಂತಾಗಿದೆ.

ಅನುಷ್ಠಾನಕ್ಕೆ ಬಂದಿಲ್ಲ: ಕೋಲಾರದಲ್ಲಿ ರೈಲ್ವೆ ಕೋಚ್‌ ಫ್ಯಾಕ್ಟರಿ, ಕೋಲಾರ ಜಿಲ್ಲೆಯ ಮುಳಬಾಗಿಲು, ಕೋಲಾರ ಮಾರ್ಗವಾಗಿ ಕಡಪಾದಿಂದ ವೈಟ್‌ಫೀಲ್ಡ್ ಹೊಸ ರೈಲ್ವೆ ಮಾರ್ಗ, ಕೋಲಾರ ವೈಟ್‌ಫೀಲ್ಡ್ ನಡುವೆ ಹೊಸ ರೈಲು ಮಾರ್ಗ, ಮುಳಬಾಗಿಲು ಕೋಲಾರದ ನಡುವೆ ಹೊಸ ರೈಲು ಮಾರ್ಗ, ಕುಪ್ಪಂ ಮಾರಿಕುಪ್ಪಂ ನಡುವೆ ರೈಲುಸಂಪರ್ಕ, ಶ್ರೀನಿವಾಸಪುರ-ಮದನಪಲ್ಲಿ (ಸಿಟಿಎಂ)ನಿಲ್ದಾಣಕ್ಕೆ ಸಂಪರ್ಕ ಇತ್ಯಾದಿ ರೈಲ್ವೇ ಯೋಜನೆಗಳ ಕುರಿತಂತೆ ಜನತೆ ಹಲವು ದಶಕಗಳಿಂದ ಕಾಯುತ್ತಿದ್ದರೂ ಅನುಷ್ಠಾನಕ್ಕೆ ಬಂದಿಲ್ಲ.

ನೂರಾರು ಬಾರಿ ಹೇಳಿಕೆ: ಆಶ್ಚರ್ಯವೆಂದರೆ ಈ ಎಲ್ಲಾ ರೈಲ್ವೆ ಯೋಜನೆಗಳು ಕೇಂದ್ರ ರೈಲ್ವೆ ಬಜೆಟ್‌ನಲ್ಲಿ ಪ್ರಕಟಗೊಂಡಿರುವ ಯೋಜನೆಗಳೇ ಆಗಿವೆ. ಈ ರೈಲ್ವೇ ಯೋಜನೆಗಳ ಕುರಿತಂತೆ ಈವರೆಗೂ ಸಂಬಂಧಪಟ್ಟ ಜನಪ್ರತಿನಿಧಿಗಳು ಹೊಸ ರೈಲು ಮಾರ್ಗದ ಸರ್ವೆ ಕಾರ್ಯ ನಡೆದಿದೆ, ಭೂ ಸ್ವಾಧೀನ ಆಗಬೇಕಾಗಿದೆ ಎಂಬ ಪತ್ರಿಕಾ ಹೇಳಿಕೆಗಳನ್ನು ನೂರಾರು ಬಾರಿ ನೀಡಿದ್ದರು. ಆದರೆ, ಯಾವುದೇ ರೈಲ್ವೆ ಯೋಜನೆ ಅನುಷ್ಠಾನಕ್ಕೆ ಬಂದಿರಲಿಲ್ಲ.

ಹುಸಿ ಭರವಸೆ: ಕೋಲಾರ  -ಚಿಕ್ಕಬಳ್ಳಾಪುರ ಜಿಲ್ಲೆಗೆ ರೈಲ್ವೆ ಮಂತ್ರಿಯಾಗಿದ್ದಾಗ ಜಾಫ‌ರ್‌ ಷರೀಫ್ಮಂ ಜೂರು ಮಾಡಿದ್ದ ಬ್ರಾಡ್‌ಗ್ರೇಜ್ ಪರಿವರ್ತನೆ ಕಾಮಗಾರಿಯೂ ರೈಲ್ವೆ ಇಲಾಖೆಯ ಕಡತಗಳಲ್ಲಿತ್ತು. ಕೆ.ಎಚ್‌.ಮುನಿಯಪ್ಪ ರೈಲ್ವೆ ಖಾತೆ ಸಹಾಯಕ ಸಚಿವರಾಗಿದ್ದಾಗ ಬ್ರಾಡ್‌ಗ್ರೇಜ್ ಕಾರ್ಯ ಪೂರ್ಣಗೊಳಿಸಿದ್ದರು. ನಂತರ ದೇಶದ ಯಾವುದೇ ಮೂಲೆಗಾ ದರೂ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಆರಂಭ ವಾಗುತ್ತದೆ ಎಂಬ ನಿರೀಕ್ಷೆ ಜೋಡಿ ಜಿಲ್ಲೆಯ ಜನರಲ್ಲಿತ್ತು. ಆದರೆ, ರೈಲ್ವೆ ಯೋಜನೆಗಳ ವಿಚಾರದಲ್ಲಿ ಜನ ಪ್ರತಿನಿಧಿಗಳ ಹುಸಿ ಭರವಸೆಗಳಷ್ಟೇ ನೀಡುತ್ತಿದ್ದಾರೆ.

ಕಟ್ರಾ ರೈಲು ಸ್ಥಗಿತ: ಕಳೆದ ಲೋಕಸಭಾ ಚುನಾವಣೆ ವೇಳೆಗೆ ಯಶವಂತಪುರದಿಂದ ಚಿಕ್ಕಬಳ್ಳಾಪುರ, ಕೋಲಾರ ಮಾರ್ಗವಾಗಿ ಜಮ್ಮು ಕಾಶ್ಮೀರದ ಕಟ್ರಾವರೆಗೂ ಮೂರು ತಿಂಗಳ ಕಾಲ ವಾರಕ್ಕೊಮ್ಮೆ ರೈಲು ಸಂಚಾರ  ಆರಂಭವಾಗಿತ್ತು. ಪ್ರತಿ ಗುರುವಾರ ಕೋಲಾರಕ್ಕೆ ಆಗಮಿಸುತ್ತಿದ್ದ ಈ ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ರೈಲಿನಿಂದ ಕೋಲಾರ -ಚಿಕ್ಕಬಳ್ಳಾಪುರ ಜನತೆ ನೇರವಾಗಿ ತಿರುಪತಿ, ದೆಹಲಿ, ವೈಷ್ಣೋದೇವಿ ದರ್ಶನ ಮಾಡಲು ಅನುಕೂಲವಾಗಿತ್ತು. ಆದರೆ, ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಈ ರೈಲನ್ನು ನಿಲ್ಲಿಸಲಾಯಿತು. ಇದರಿಂದ ಕೋಲಾರ ಮಾರ್ಗಕ್ಕೆ ಯಥಾಪ್ರಕಾರ ಬೆಳಗ್ಗೆ ಮಧ್ಯಾಹ್ನ ಸಂಜೆ ಸಂಜೆ ವಾಪಸ್‌ ಬರುವ ರೈಲುಗಳಷ್ಟೇ ಗತಿಯಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿಯಿಂದ ಕೋಲಾರ ಕ್ಷೇತ್ರದಲ್ಲಿ ಮೊದಲ ಬಾರಿಗೆ ಸಂಸದರಾದ ಎಸ್‌. ಮುನಿಸ್ವಾಮಿ, ಅ.16 ರಂದು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲೆಯ ರೈಲ್ವೆ ಪ್ರಯಾಣಿಕರ

ಕುಂದುಕೊರತೆ ಆಲಿಸಲು ಹಾಗೂ ಜಿಲ್ಲೆಗೆ ರೈಲ್ವೆ ಸೌಲಭ್ಯಗಳನ್ನು ಒದಗಿಸಲು ರೈಲಿನಲ್ಲಿಯೇ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಂಸದ ಎಸ್‌.ಮುನಿಸ್ವಾಮಿ ಅ.31ರಂದು ಕೋಲಾರ -ವೈಟ್‌ಫೀಲ್ಡ್ ನಡುವೆ ಹೊಸ ರೈಲು ಸಂಚರಿಸಲಿದೆ ಎಂದು ಘೋಷಿಸಿದ್ದರು. ಇದೀಗ ಜನತೆಗೆ ಅನುಕೂಲವಲ್ಲದ ವೇಳೆಯಲ್ಲಿ ಸಂಚರಿಸುತ್ತಿರುವ ರೈಲುಗಳ ನಡುವೆ, ಕೋಲಾರ ವೈಟ್‌ಫೀಲ್ಡ್ ನಡುವೆ ಚಿಕ್ಕಬಳ್ಳಾಪುರ ಮಾರ್ಗವಾಗಿ ಮತ್ತೂಂದು ರೈಲಿನ ಸಂಚಾರ ಆರಂಭವಾದರೆ ಕೋಲಾರ -ಚಿಕ್ಕಬಳ್ಳಾಪುರ ಜಿಲ್ಲೆಯ ರೈಲ್ವೆ ಪ್ರಯಾಣಿಕರಿಗೆ ಅನುಕೂಲವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಈ ಯೋಜನೆಯನ್ನು ಜೋಡಿ ಜಿಲ್ಲೆಯ ಜನತೆ ಬಹು ಕಾತುರದಿಂದಲೂ ನಿರೀಕ್ಷಿಸುತ್ತಿದ್ದರು. ಆದರೆ, ಸಂಸದರು ಘೋಷಿಸಿದಂತೆ ಅ.31ರಂದು ಕೋಲಾರ ವೈಟ್‌ಫೀಲ್ಡ್ ನಡುವಿನ ರೈಲು ಸಂಚಾರ ಆರಂಭವಾಗಲೇ ಇಲ್ಲ. ಹಿಂದಿನ ಭರವಸೆಗಳಂತೆ ಇದು ಸಹ ಹುಸಿ ಭರವಸೆಯೇ ಎಂದು ಜನತೆ ನಿರಾಸೆ ಅನುಭವಿಸುವಂತಾಗಿದೆ.

 

-ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.