ಅನರ್ಹ ಶಾಸಕರನ್ನು ಸೋಲಿಸುವುದೇ ಕಾಂಗ್ರೆಸ್ ಗುರಿ
Team Udayavani, Nov 4, 2019, 3:00 AM IST
ಚಿಕ್ಕಬಳ್ಳಾಪುರ: ಪಕ್ಷದಿಂದ ಎಲ್ಲವನ್ನೂ ಪಡೆದು ಕೊನೆಗೆ ಪಕ್ಷ ಕಷ್ಟ ಕಾಲದಲ್ಲಿ ಇದ್ದಾಗ ಪಕ್ಷಕ್ಕೆ ದ್ರೋಹ ಬಗೆದ ಅನರ್ಹ ಶಾಸಕರನ್ನು ಉಪ ಚುನಾವಣೆಯಲ್ಲಿ ಸೋಲಿಸುವುದು ಕಾಂಗ್ರೆಸ್ ಪಕ್ಷದ ಗುರಿ ಎಂದು ಎಐಸಿಸಿ ರಾಜ್ಯ ಉಸ್ತುವಾರಿ ವಿ.ಸಿ.ವಿಷ್ಣನಾಥನ್ ತಿಳಿಸಿದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂದಿ ಅಂಜನಪ್ಪ ಪರ ಭಾನುವಾರ ತಾಲೂಕಿನ ವಿವಿಧೆಡೆ ಪ್ರಚಾರ ನಡೆಸಿ ಮಾತನಾಡಿದ ಬಳಿಕ ಹಾರೋಬಂಡೆಯ ಶಿರಡಿಸಾಯಿ ಆಶ್ರಮದಲ್ಲಿ ಪಕ್ಷದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪು ಏನೇ ಬರಲಿ, ಆದರೆ ಅನರ್ಹರನ್ನು ಉಪಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕೆಂದು ಹೇಳಿದರು.
ಬಿಜೆಪಿ ಆಮಿಷಕ್ಕೆ ಬಲಿ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಠ ಹಿಡಿದು ಸುಧಾಕರ್‌ರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಮಾಡಿದರು. ಅವರ ಅಧಿಕಾರದ ಅವಧಿಯಲ್ಲಿ ಸಾವಿರಾರು ಕೋಟಿ ಅನುದಾನ ಕ್ಷೇತ್ರಕ್ಕೆ ನೀಡಿದರು. ಕೊನೆಗೆ ಅವರ ಮಾತಿಗೂ ಬೆಲೆ ಕೊಡದೆ ಬಿಜೆಪಿ ಆಮಿಷಕ್ಕೆ ಬಲಿಯಾದರು. ಈಗ ಬಿಜೆಪಿ ಪಕ್ಷದಲ್ಲಿ ಸಮುದ್ರದ ನೀರಿನಿಂದ ದಡಕ್ಕೆ ಹಾಕಿದ ಮೀನಿನಂತೆ ನರಳುವ ಪರಿಸ್ಥಿತಿಗೆ ಬಂದಿದ್ದಾರೆ ಎಂದು ದೂರಿದರು.
ಅನರ್ಹ ಶಾಸಕರ ವಿರುದ್ಧ ಬಿಜೆಪಿಯಲ್ಲಿ ಸಾಕಷ್ಟು ಅಸಮಾಧಾನ ಇದೆ. ಇದಕ್ಕೆ ಯಡಿಯೂರಪ್ಪ ತಮ್ಮ ಅಸಹಾಯಕತೆ ವ್ಯಕ್ತಪಡಿಸಿರುವುದೇ ಸಾಕ್ಷಿ. ಬಿಜೆಪಿ ಅನೈತಿಕ ಮಾರ್ಗದಲ್ಲಿ ಅಧಿಕಾರ ಹಿಡಿದಿರುವುದು ಯಡಿಯೂರಪ್ಪ ಆಡಿಯೋ ಸ್ಪಷ್ಟಪಡಿಸುತ್ತದೆ ಎಂದರು.
ಪಾಠ ಕಲಿಸಿ: ಮಾತೃ ಪಕ್ಷದಲ್ಲಿ ಎಲ್ಲಾ ಅಧಿಕಾರ ಅನುಭವಿಸಿ ಪಕ್ಷ ದ್ರೋಹ ಬಗೆದವರಿಗೆ ಉಪ ಚುನಾವಣೆಯಲ್ಲಿ ಬುದ್ಧಿ ಕಲಿಸಬೇಕು. ಇದಕ್ಕೆ ಪಕ್ಷದ ಕಾರ್ಯಕರ್ತರು ಸವಾಲಾಗಿ ಪಕ್ಷದ ಸಂಘಟನೆ ಹಾಗೂ ಚುನಾವಣಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆಂದರು.
ಬೂತ್ ಮಟ್ಟದಲ್ಲಿ ಸಂಘಟನೆ: ಮುಂದಿನ ಒಂದು ವಾರದೊಳಗೆ ಪಂಚಾಯಿತಿ ಮತ್ತು ಬೂತ್ ಮಟ್ಟಕ್ಕೆ ಒಬ್ಬರಂತೆ ನಿಷ್ಠಾವಂತ ಮುಖಂಡರ ಪಟ್ಟಿಯನ್ನು ತಯಾರಿಸಿ ಅವರ ಮುಖಾಂತರ ಪಕ್ಷ ಸಂಘಟಿಸಬೇಕು. ಬೂತ್ ಮಟ್ಟದ ಮುಖಂಡರಿಗೆ ಚುನಾವಣೆಯ ಜವಾಬ್ದಾರಿ ನೀಡಿ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಬೇಕೆಂದು ಮುಖಂಡರಿಗೆ ಸೂಚಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರಿಂದ ನಾಯಕರೇ ಹೊರತು ನಾಯಕರಿಂದ ಕಾರ್ಯಕರ್ತರಲ್ಲ. ಚುನಾವಣೆಯಲ್ಲಿ ಕಾರ್ಯಕರ್ತರ ಶಕ್ತಿ ಏನೆಂದು ಅನರ್ಹ ಶಾಸಕರನ್ನು ಸೋಲಿಸುವ ಮುಖಾಂತರ ಪಾಠ ಕಲಿಸಬೇಕೆಂದರು. ಚುನಾವಣೆಯ ಪ್ರಕ್ರಿಯೆಗಳು ಪ್ರಾರಂಭ ಆದ ಮೇಲೆ ರಾಷ್ಟ್ರ ಮಟ್ಟದ ನಾಯಕರು ಸಹಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಶಾಸಕರಾದ ವಿ.ಮುನಿಯಪ್ಪ, ಎನ್.ಹೆಚ್.ಶಿವಶಂಕರರೆಡ್ಡಿ, ಮಾಜಿ ಶಾಸಕರಾದ ಎನ್.ಸಂಪಂಗಿ, ಎಸ್.ಎಂ.ಮುನಿಯಪ್ಪ, ಅನಸೂಯಮ್ಮ , ಕಾಂಗ್ರೆಸ್ ಅಭ್ಯರ್ಥಿ ನಂದಿ ಅಂಜನಪ್ಪ , ಮುಖಂಡರಾದ ಜಿ.ಹೆಚ್.ನಾಗರಾಜ, ಕೆ.ವಿ.ನವೀನ್ ಕಿರಣ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೇಶವ ರೆಡ್ಡಿ, ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಂ, ಮುಖಂಡರಾದ ಜಾವೀದ್, ಪ್ರಸ್ ಸುರೇಶ್, ಅರುಣ್, ಶಂಕರ್, ಸುಮಿತ್ರಮ್ಮ, ನಾರಾಯಣಮ್ಮ, ಕೋಡೇಸ್ ವೆಂಕಟೇಶ್, ಮರಸನಹಳ್ಳಿ ಪ್ರಕಾಶ್, ಕೃಷ್ಣನ್, ಅಮಾನುಲ್ಲಾ ಉಪಸ್ಥಿತರಿದ್ದರು.
ಅಮಿತ್ ಶಾ ಅವರು ರಾಷ್ಟ್ರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವ ಸ್ಥಾನದಲ್ಲಿದ್ದರೂ ಆಪರೇಷನ್ ಕಮಲದಲ್ಲಿ ಭಾಗಿಯಾಗಿ ದೇಶದ ಜನರ ಮುಂದೆ ಬೆತ್ತಲಾಗಿದ್ದಾರೆ. ಈಗಾಗಲೇ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಜನರಿಂದ ತಿರಸ್ಕಾರಕ್ಕೆ ಬಿಜೆಪಿ ಪಕ್ಷ ಒಳಗಾಗಿದೆ. ದಿನೇ ದಿನೆ ದೇಶದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ ಕುಸಿಯುತ್ತಿದೆ. ವಾಮಾ ಮಾರ್ಗದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಹೆಚ್ಚು ದಿನ ಅಧಿಕಾರದಲ್ಲಿ ಇರುವುದಿಲ್ಲ.
-ವಿ.ಸಿ.ವಿಷ್ಣುನಾಥನ್, ಎಐಸಿಸಿ ಕಾರ್ಯದರ್ಶಿ
ಚಿಕ್ಕಬಳ್ಳಾಪುರ ಕ್ಷೇತ್ರದ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಕ್ಷೇತ್ರದ ಜನರಿಗೆ ಎಷ್ಟೇ ಆಸೆ, ಆಮಿಷ ತೋರಿದರೂ ಈ ಬಾರಿ ಸೋಲುವುದು ಖಚಿತ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದೆ. ಸುಧಾಕರ್ ಕೊಡುಗೆ ಶೂನ್ಯ. ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಬಿಜೆಪಿ ಸರ್ಕಾರ ಮಂಜೂರು ಮಾಡಿದೆ ಎಂದು ಜನತೆಗೆ ಸುಳ್ಳು ಹೇಳುತ್ತಿದ್ದಾರೆ.
-ಎನ್.ಹೆಚ್.ಶಿವಶಂಕರರೆಡ್ಡಿ, ಮಾಜಿ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.