ಸುಳ್ಯ: 134 ಅನರ್ಹ ಪಡಿತರ ಚೀಟಿ ಪತ್ತೆ

ಒಟ್ಟು 1,81,476 ರೂ. ದಂಡ ವಸೂಲಿ: ಪರಿಶೋಧನೆ ಪ್ರಗತಿಯಲ್ಲಿ

Team Udayavani, Nov 4, 2019, 5:19 AM IST

RATION-CARD2

ಸುಳ್ಯ: ಸರಕಾರದ ಮಾನ ದಂಡಗಳಿಗೆ ವಿರುದ್ಧವಾಗಿ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ತಾಲೂಕಿನ 134 ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ, ದಂಡ ವಸೂಲಿ ಮಾಡ ಲಾಗಿದೆ. ಇನ್ನುಳಿದ ಅನರ್ಹ ಪಡಿತರ ಚೀಟಿದಾರರನ್ನು ಗುರುತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಈ ತನಕ 64 ಮಂದಿ ಸ್ವಯಂಪ್ರೇರಿತರಾಗಿ ಪಡಿತರ ಚೀಟಿ ಒಪ್ಪಿಸಿದ್ದು, ಬಾಕಿ ಕಾರ್ಡ್‌ ಪತ್ತೆ ಆಹಾರ ಇಲಾಖೆ ಮೂಲಕ ನಡೆಯುತ್ತಿದೆ.

134 ಅನರ್ಹ ಪಡಿತರ ಚೀಟಿ
ತಾಲೂಕಿನಲ್ಲಿ ನಿಯಮ ಮೀರಿ 134 ಕುಟುಂಬಗಳು ಬಿಪಿಎಲ್‌ (ಆದ್ಯತಾ ಪಡಿತರ ಚೀಟಿ) ಪಡಿತರ ಚೀಟಿ ಪಡೆದು, ಅದರ ಸವಲತ್ತುಗಳನ್ನು ಉಪ ಯೋಗಿಸುತ್ತಿರುವುದು ಪತ್ತೆ ಆಗಿದೆ. ತಾಲೂಕಿನಲ್ಲಿ 29,766 ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿದ್ದು, 10,314 ಎಪಿಎಲ್‌ ಪಡಿತರ ಚೀಟಿ, 19,452 ಬಿಪಿಎಲ್‌ ಪಡಿತರ ಚೀಟಿ, 1,562 ಅಂತ್ಯೋದಯ ಪಡಿ ತರ ಚೀಟಿ ದಾರರಿದ್ದಾರೆ. ಇವರಲ್ಲಿ ಉಳಿದ ಅನರ್ಹ ಕಾರ್ಡ್‌ದಾರರ ಪತ್ತೆ ನಡೆಯುತ್ತಿದೆ.

1,81,476 ರೂ.ದಂಡ ವಸೂಲಿ
ಅನರ್ಹ ಪಡಿತರ ಚೀಟಿ ಪತ್ತೆ ಮಾಡಿ, ತಾಲೂಕಿನಲ್ಲಿ ಈ ತನಕ 1,81,476 ರೂ. ದಂಡ ವಸೂಲಿ ಮಾಡಲಾಗಿದೆ. 64 ಮಂದಿ ಸರಕಾರದ ಗಡುವಿನಲ್ಲಿ ಸ್ವಯಂಪ್ರೇರಿತರಾಗಿ ಕಾರ್ಡ್‌ ಒಪ್ಪಿಸಿದ ಕಾರಣ ಅವರು ದಂಡದಿಂದ ವಿನಾಯಿತಿ ಪಡೆದಿದ್ದಾರೆ. ಬಿಪಿಎಲ್‌ ಪಡಿತರ ಕಾರ್ಡ್‌ ಅನ್ನು ಆ ಕುಟುಂಬ ಯಾವಾಗ ಪಡೆದುಕೊಂಡಿತು ಮತ್ತು ಸರಕಾರದ ಸವಲತ್ತು ಉಪಯೋಗಿಸಿದ ಪ್ರಮಾಣ ಆಧರಿಸಿ ದಂಡ ವಿಧಿಸಲಾ ಗುತ್ತದೆ. ಇಲಾಖೆ ವಿಧಿಸಿದ ದಂಡವನ್ನು ಎ. 2ರ ಒಳಗೆ ಬ್ಯಾಂಕ್‌ ಖಾತೆಗೆ ಜಮೆ ಮಾಡಬೇಕಾಗುತ್ತದೆ. ಈ ವರೆಗೆ ಕುಟುಂಬವೊಂದಕ್ಕೆ 20 ಸಾವಿರ ರೂ. ದಂಡ ವಿಧಿಸಿರುವುದೇ ಗರಿಷ್ಠ ಮೊತ್ತ ಎಂದು ಇಲಾಖೆ ಮಾಹಿತಿ ನೀಡಿದೆ.

ಎರಡು ಬಾರಿ ಅವಕಾಶ
ಸರಕಾರದ ಮಾನದಂಡಗಳನ್ನು ಮೀರಿ ಬಿಪಿಎಲ್‌ ಪಡಿತರ ಚೀಟಿ ಹೊಂದಿದ್ದರೆ ದಂಡ ರಹಿತವಾಗಿ 2019 ಸೆ. 3ರೊಳಗೆ ಆಯಾ ತಾಲೂಕು ಕಚೇರಿಯ ಆಹಾರ ಶಾಖೆಗೆ ತೆರಳಿ ಪಡಿತರ ಚೀಟಿ ಒಪ್ಪಿಸಿ, ರದ್ದು ಮಾಡುವಂತೆ ಸರಕಾರ ಸೂಚನೆ ನೀಡಿತ್ತು. ಆ ಬಳಿಕ ಅ. 15ರ ತನಕ ಅವಧಿ ವಿಸ್ತರಿಸಿತು. ಎರಡು ಬಾರಿ ನೀಡಿದ ಅವಕಾಶದಲ್ಲಿ ಪಡಿತರ ಚೀಟಿ ರದ್ದು ಮಾಡದೆ ಇದ್ದ ಅನರ್ಹ ಪಡಿತರ ಚೀಟಿದಾರರು ಸರಕಾರದ ನಿಯಮ ದಂತೆ ದಂಡ ಕಟ್ಟಬೇಕಿದೆ.

ಮನೆಗೆ ನೋಟಿಸ್‌
ತಾಲೂಕು ಆಹಾರ ಇಲಾಖೆಯು ಕುಟುಂಬ ಗಳು ಹೊಂದಿ ರುವ ಬಿಪಿಎಲ್‌, ಅಂತ್ಯೋ ದಯ ಪಡಿತರ ಚೀಟಿಗಳ ಬಗ್ಗೆ ತನಿಖೆ ನಡೆಸುತ್ತಿದೆ. ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ. ಅನರ್ಹ ಪಡಿತರ ಚೀಟಿದಾರರು ರದ್ದುಪಡಿಸದೆ ಇದ್ದರೆ ಜಿಲ್ಲಾಧಿಕಾರಿ ಕಚೇರಿಯಿಂದ ಆಯಾ ಪಡಿತರದಾರನ ಮನೆಗೆ ನೋಟಿಸ್‌ ಜಾರಿಯಾಗುತ್ತದೆ. ಜಿಲ್ಲಾಧಿಕಾರಿ ಕಚೇರಿ ಆರ್‌ಟಿಒ, ಮೆಸ್ಕಾಂ ಮಾಹಿತಿ ಆಧರಿಸಿ ಅನರ್ಹ ಫಲಾನುಭವಿಗಳ ಪತ್ತೆ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರ ನೋಟಿಸ್‌ ಜಾರಿಯಾಗುವ ಸಾಧ್ಯತೆ ಇದೆ.

ದಂಡ ಕಟ್ಟುವುದು ಹೇಗೆ?
ಅನರ್ಹ ಪಡಿತರ ಚೀಟಿದಾರರು ತಾಲೂಕು ಕೇಂದ್ರದಲ್ಲಿರುವ ತಾಲೂಕು ಕಚೇರಿಯ ಕಂದಾಯ ಇಲಾಖೆಯ ಆಹಾರ ಶಾಖೆಯಲ್ಲಿ ಸ್ವತಃ ತೆರಳಿ ಮಾಹಿತಿ ನೀಡಬೇಕಾಗಿದೆ.
ಈಗಲೂ ಸ್ವಯಂ ಪ್ರೇರಿತರಾಗಿ ಕಾರ್ಡ್‌ ಒಪ್ಪಿಸಿದರೆ ದಂಡ ಮೊತ್ತದಲ್ಲಿ ಸ್ವಲ್ಪ ವಿನಾಯಿತಿ ಸಿಗಲಿದೆ. ಇಲಾಖೆ ಪತ್ತೆ ಹಚ್ಚಿದ ಅನಂತರ ಕಾರ್ಡ್‌ ಒಪ್ಪಿಸಿದರೆ ಪೂರ್ಣ ಪ್ರಮಾಣದ ದಂಡ ಪಾವತಿಸಬೇಕು.

ಯಾರೆಲ್ಲ ಅನರ್ಹರು?
-ಕುಟುಂಬದಲ್ಲಿ ಸರಕಾರಿ ಅಥವಾ ಅರೆ ಸರಕಾರಿ ಉದ್ಯೋಗ ಹೊಂದಿರುವರು.
– ಆದಾಯ ತೆರಿಗೆ ಪಾವತಿಸುವವರು.
– ಪಡಿತರ ಚೀಟಿ ವಿಳಾಸದಲ್ಲಿ ವಾಸ್ತವ್ಯ ಇಲ್ಲದೇ ಇರುವವರು
– ಒಂದು ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವವರು.
– ಮರಣ ಹೊಂದಿದವರ ಮತ್ತು ಕುಟುಂಬದಲ್ಲಿ ವಾಸ್ತವ್ಯವಿಲ್ಲದೇ ಇರುವವರ ಹೆಸರನ್ನು ಪಡಿತರ ಚೀಟಿಯಿಂದ ತೆಗೆಯದೇ ಉಳಿಸಿಕೊಂಡವರು.
– ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್‌ ಭೂಮಿ ಹಾಗೂ ನಗರ ಪ್ರದೇಶಗಳಲ್ಲಿ 1,000 ಸಾವಿರ ಚ.ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಸ್ವಂತವಾಗಿ ಹೊಂದಿರುವವರು.
– ಸ್ವಂತ ಉಪಯೋಗಕ್ಕಾಗಿ ಕಾರು, ಲಾರಿ, ಜೆಸಿಬಿ ಇತ್ಯಾದಿ ವಾಹನ ಹೊಂದಿರುವನರು.
-ವಾರ್ಷಿಕ ಆದಾಯ 1.20 ಲಕ್ಷ ರೂ.ಗಳಿಗಿಂತ ಅಧಿಕ ಇರುವ ಕುಟುಂಬಗಳು.

ನೋಟಿಸ್‌ ಜಾರಿ
ತಾಲೂಕಿನಲ್ಲಿ ಅ. 30ರ ವರೆಗೆ 134 ಕಾರ್ಡ್‌ದಾರರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. 64ಕ್ಕೂ ಹೆಚ್ಚು ಬಿಪಿಎಲ್‌ ಪಡಿತರ ಚೀಟಿದಾರರು ಕಂದಾಯ ಇಲಾಖೆಯ ಆಹಾರ ಶಾಖೆಯಲ್ಲಿ ಸ್ವತಃ ಬಂದು ಕಾರ್ಡ್‌ ರದ್ದುಪಡಿಸಿ, ದಂಡ ಪಾವತಿಸಿದ್ದಾರೆ. ಈ ತನಕ 1,81,476 ರೂ. ದಂಡ ಸಂಗ್ರಹವಾಗಿದೆ. ಸ್ವಯಂಪ್ರೇರಿತರಾಗಿ ಕಾರ್ಡ್‌ ಒಪ್ಪಿಸಿದ್ದಲ್ಲಿ ಅವರಿಗೆ ವಿಧಿಸುವ ದಂಡದ ಮೊತ್ತದಲ್ಲಿ ಸ್ವಲ್ಪ ವಿನಾಯಿತಿ ನೀಡಲಾಗುವುದು.
ಎನ್‌.ಎ. ಕುಂಞಿ ಅಹಮದ್‌
ತಹಶೀಲ್ದಾರ್‌, ಸುಳ್ಯ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.