ವೀಡಿಯೋ ಆತಂಕ; ಕಾಂಗ್ರೆಸ್‌ನಿಂದ ಇಂದು ಸುಪ್ರೀಂಗೆ ಕ್ಲಿಪ್ಪಿಂಗ್ ಸಲ್ಲಿಕೆ
Team Udayavani, Nov 4, 2019, 6:15 AM IST
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅನರ್ಹ ಶಾಸಕರ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ವೀಡಿಯೋವನ್ನು ಸೋಮವಾರ ಸುಪ್ರೀಂ ಕೋರ್ಟಿಗೆ ಸಲ್ಲಿಸಲು ಕಾಂಗ್ರೆಸ್ ನಿರ್ಧರಿಸಿದ ಬೆನ್ನಲ್ಲೇ, ಮುಂದಿನ ಬೆಳ ವಣಿಗೆ ಗಳ ಬಗ್ಗೆ ಅನರ್ಹ ಶಾಸಕರು ಆತಂಕಗೊಂಡಿದ್ದಾರೆ.
ಮೈತ್ರಿ ಸರಕಾರದ ನಾಯಕತ್ವದ ವಿರುದ್ಧ ಅಸಮಾಧಾನ ಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳುತ್ತ ಬಂದಿದ್ದ ಅನರ್ಹ ಶಾಸಕರ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಕ್ಷದ ಸಭೆ ಯಲ್ಲಿ ಆಡಿದ್ದಾರೆ ಎನ್ನಲಾದ ಮಾತುಗಳಿಂದ ಕಾನೂ ನಾತ್ಮಕ ವಾಗಿ ಹಾಗೂ ರಾಜಕೀಯವಾಗಿ ಆಗುವ ಪರಿಣಾಮಗಳ ಬಗ್ಗೆ ಅನರ್ಹರು ಆತಂಕ ಕ್ಕೊಳಗಾಗಿದ್ದಾರೆ ಎನ್ನಲಾಗುತ್ತಿದೆ.
ಅನರ್ಹಗೊಂಡ ಶಾಸಕ ಗೋಪಾಲಯ್ಯ ನೇರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಭವಿಷ್ಯದಲ್ಲಿ ರಾಜಕೀಯವಾಗಿ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ತಾನು ಚುನಾವಣೆ ಪ್ರಚಾರ ಸಂಬಂಧ ಇಕ್ಕಟ್ಟಿಗೆ ಸಿಲುಕಿರುವುದಾಗಿ ಯಡಿಯೂರಪ್ಪ ಬಳಿ ಅಳಲು ತೋಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಬಂಡಾಯ ಶಾಸಕರ ನಾಯಕರಾಗಿದ್ದ ರಮೇಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಪ್ತರ ಎದುರು ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಈ ನಡುವೆ ಯಡಿಯೂರಪ್ಪ ಮಾತನಾಡಿದ್ದಾರೆ ಎನ್ನಲಾದ ವೀಡಿಯೋ ಬಗ್ಗೆ ಬಿಜೆಪಿ ನಾಯಕರಲ್ಲಿಯೇ ಗೊಂದಲ ಉಂಟಾ ಗಿದೆ. ಸ್ವತಃ ಯಡಿಯೂರಪ್ಪ ವೀಡಿಯೋದಲ್ಲಿರುವ ಧ್ವನಿ ತಮ್ಮದೇ ಎಂದು ಒಪ್ಪಿ ಕೊಂಡಿದ್ದರೂ ಅನರ್ಹರ ವಿಷಯ ದಲ್ಲಿ ತಮ್ಮ ಮಾತು ತಿರುಚಲಾಗಿದೆ ಎಂದು ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ.
ಇಂದು ಸಲ್ಲಿಕೆ
ಈ ವೀಡಿಯೋ ಟೇಪನ್ನು ಸೋಮವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್, ಧ್ವನಿಮುದ್ರಿಕೆಯಲ್ಲಿರುವ ಧ್ವನಿ ತಮ್ಮದೇ ಎಂದು ಯಡಿಯೂರಪ್ಪ ಹೇಳಿದ್ದಾರೆ. ಅದು ಬಿಜೆಪಿ ಸಭೆ ಯಾಗಿದ್ದರಿಂದ ಅಲ್ಲಿ ಪಾಲ್ಗೊಂಡವರೆಲ್ಲರೂ ಬಿಜೆಪಿ ನಾಯಕರೇ ಆಗಿದ್ದಾರೆ.
ಆತಂಕಕ್ಕೆ ಕಾರಣ
ಅನರ್ಹ ಶಾಸಕರು ಮೈತ್ರಿ ಸರಕಾರದ ನಾಯಕತ್ವದ ವಿರುದ್ಧ ಬಂಡಾಯ ಸಾರಿದಾಗ ಅವರನ್ನು ಮುಂಬಯಿಗೆ ಕರೆದುಕೊಂಡು ಹೋಗಿ ಹೊಟೇಲ್‌ನಲ್ಲಿ ರಕ್ಷಣೆ ನೀಡಿರುವ ಆರೋಪ ಕೇಳಿ ಬಂದಿದ್ದರೂ ಬಿಜೆಪಿ ನಾಯಕರು ಹಾಗೂ ಅನರ್ಹ ಶಾಸಕರು ಕಾಂಗ್ರೆಸ್ ನಾಯಕರ ವಾದವನ್ನು ತಿರಸ್ಕರಿಸಿದ್ದರು. ಅಷ್ಟೇ ಅಲ್ಲದೆ ಸುಪ್ರೀಂ ಕೋರ್ಟ್ ಮುಂದೆಯೂ ಬಿಜೆಪಿಗೂ ತಮ್ಮ ರಾಜೀನಾಮೆಗೂ ಯಾವುದೇ ಸಂಬಂಧ ಇಲ್ಲ ಎನ್ನುವುದನ್ನು ತಮ್ಮ ವಕೀಲರ ಮೂಲಕ ಕೋರ್ಟ್‌ಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದ್ದರು.
ಆದರೆ ಈಗ ಯಡಿಯೂರಪ್ಪ ಅವರೇ ಮಾತನಾಡಿರುವುದು ಎನ್ನಲಾದ ವೀಡಿಯೋ ಅನರ್ಹ ಶಾಸಕರ ಕಾನೂನು ಹೋರಾಟದ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೀಗಾದರೆ ತಮ್ಮ ಮುಂದಿನ ರಾಜಕೀಯ ಭವಿಷ್ಯ ಮಂಕಾಗುತ್ತದೆ ಎನ್ನುವ ಭಯ ಅನರ್ಹ ಶಾಸಕರನ್ನು ಕಾಡುತ್ತಿದೆ.
ಇದರಿಂದ ಬಿಜೆಪಿ ಸಂವಿಧಾನ ಬಾಹಿರವಾಗಿ ಮೈತ್ರಿ ಸರಕಾರ ಉರುಳಿಸಿರುವುದು ಸ್ಪಷ್ಟವಾಗಿದೆ.ಸುಪ್ರೀಂ ಕೋರ್ಟ್ ಮುಂದೆಯೂ ಕೂಡ ಇದೇ ಮಾಹಿತಿಯನ್ನು ನೀಡುತ್ತೇವೆ ಎಂದು ಹೇಳಿದರು.
ಅನರ್ಹರಿಗೆ ಟಿಕೆಟ್ ಕೊಡುವುದಾಗಿ ಹೇಳಿಲ್ಲ: ಬಿಎಸ್‌ವೈ
ಅನರ್ಹಗೊಂಡ ಶಾಸಕರು ಅವರದ್ದೇ ಕಾರಣಗಳಿಗಾಗಿ ರಾಜೀನಾಮೆ ನೀಡಿದ್ದಾರೆ. ಅವರಿಗೆ ಶಾಸಕರಿಗೆ ಟಿಕೆಟ್ ನೀಡುತ್ತೇವೆ ಎಂದು ನಾವೆಲ್ಲೂ ಹೇಳಿಲ್ಲ. ಮುಂದೇನು ಮಾಡಬೇಕು ಎಂಬುದನ್ನು ಅವರೇ ನಿರ್ಧರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಗೊಂದಲ ಉಂಟುಮಾಡಬೇಕು ಎಂಬ ಉದ್ದೇಶದಿಂದ ಅನರ್ಹಗೊಂಡಿರುವ ಶಾಸಕರ ಪರವಾಗಿ ನಾನು ಮಾತನಾಡಿದ್ದೇನೆ ಎಂದು ಹೇಳಿಕೊಂಡು ಕಾಂಗ್ರೆಸ್ ಇಡೀ ಪ್ರಕರಣವನ್ನು ತಿರುಚುವ ಪ್ರಯತ್ನ ಮಾಡುತ್ತಿದೆ ಎಂದರು.
ಖರ್ಗೆ,ಸಿದ್ದು ತಡೆಯಬಹುದಿತ್ತು: ರಮೇಶ್
ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರು ವೀಡಿಯೋ ಪ್ರಕರಣದ ಕುರಿತು, ಬಿಜೆಪಿಯಲ್ಲಿನ ಬೆಳವಣಿಗೆಗಳ ಕುರಿತು ತಮ್ಮ ಆಪ್ತರೊಂದಿಗೆ ಬೇಸರ ವ್ಯಕ್ತಪಡಿಸಿದ್ದು, ತಾವು ಪಕ್ಷ ತೊರೆಯಲು ಮೈತ್ರಿ ಸರಕಾರದಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಕಾರಣರು ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ಅವರೂ ತಾವು ಪಕ್ಷ ತೊರೆಯಲು ಕಾರಣ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.