ವಿಂಡೀಸ್ ವಿರುದ್ಧ ಗೆದ್ದು ಸೇಡು ತೀರಿಸಿಕೊಂಡ ಮಿಥಾಲಿ ಪಡೆ
Team Udayavani, Nov 4, 2019, 10:08 AM IST
ಆಂಟಿಗುವಾ: ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಎರಡನೇ ಏಕದಿನ ಪಂದ್ಯದಲ್ಲಿ 53 ರನ್ ಗಳಿಂದ ಗೆದ್ದುಕೊಂಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತು. ಪೂನಂ ರಾವತ್ 77 ರನ್ ಗಳಿಸಿದರೆ ನಾಯಕಿ ಮಿಥಾಲಿ ರಾಜ್ 40 ಮತ್ತು ಹರ್ಮನ್ ಪ್ರೀತ್ ಕೌರ್ 46 ರನ್ ಗಳಿಸಿದರು.
ಮಿಥಾಲಿ ಪಡೆ ನೀಡಿದ 192 ರನ್ ಗುರಿ ಬೆನ್ನತ್ತಿದ ವಿಂಡೀಸ್ ಮಹಿಳೆಯರು, ಕೇವಲ 138 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡರು. ಕೀಪರ್ ಶರ್ಮನ್ ಕ್ಯಾಂಪ್ ಬೆಲ್ 39 ರನ್ ಗಳಿಸಿದ್ದು ಬಿಟ್ಟರೆ ಮತ್ಯಾರು ಹೋರಾಟ ನಡೆಸಲಿಲ್ಲ.
ಭಾರತದ ಪರ ರಾಜೇಶ್ವರಿ ಗಾಯಕ್ವಾಡ್, ಪೂನಂ ಯಾದವ್ ಮತ್ತು ದೀಪ್ತಿ ಶರ್ಮಾ ತಲಾ ಎರಡು ವಿಕೆಟ್ ಪಡೆದರು.
ಅರ್ಧಶತಕ ಬಾರಿಸಿದ ಪೂನಂ ರಾವತ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಮೊದಲ ಪಂದ್ಯದಲ್ಲಿ ಕೇವಲ ಒಂದು ರನ್ ನಿಂದ ಸೋಲನುಭವಿಸಿದ್ದ ಮಿಥಾಲಿ ಪಡೆ ಎರಡನೇ ಪಂದ್ಯದಲ್ಲಿ ಜಯ ಸಾಧಿಸಿ ಸೇಡು ತೀರಿಸಿಕೊಂಡಿದ್ದಾರೆ.
ಸರಣಿಯ ಅಂತಿಮ ಪಂದ್ಯ ಬುಧವಾರ ನಡೆಯಲಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.