ಕಾನೂನು ಸಾಕ್ಷರತಾ ಶಿಬಿರ ಉದ್ಘಾಟನೆ
Team Udayavani, Nov 4, 2019, 2:25 PM IST
ಗೋಕಾಕ: ಜನಸಾಮಾನ್ಯರ ಆರೋಗ್ಯ ರಕ್ಷಣೆಗಾಗಿ ಇರುವ ಅನೇಕ ಸೌಲಭ್ಯಗಳ ಹೊರತಾಗಿಯೂ ವಿಶೇಷವಾಗಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವಿವಿಧ ಸೌಲಭ್ಯ ಒದಗಿಸಲು ಮುಂದಾಗಿರುವ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಗಳ ಕ್ರಮ ಶ್ಲಾಘನೀಯ ಎಂದು ಇಲ್ಲಿಯ 2ನೇ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಧೀಶ ಮೋಹನ ಪೋಳ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲೂಕು ಆರೋಗ್ಯ ಇಲಾಖೆ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಮತ್ತು ಇತರೆ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಗೆಳತಿ ವಿಶೇಷ ಚಿಕಿತ್ಸಾ ಘಟಕ ಮೂಲಕ ವಿವಿಧ ಸೌಲಭ್ಯಗಳು ಎಂಬ ವಿಷಯ ಕುರಿತ ಕಾನೂನು ಸಾಕ್ಷರತಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿ, ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಅಗತ್ಯ ಸಹಾಯ ಒದಗಿಸುವುದು ಮಾನವೀಯತೆಯಾಗಿದೆ ಎಂದರು.
ಶಿಬಿರಾರ್ಥಿಗಳಿಗೆ ವಕೀಲೆ ಸಂಗೀತಾ ಬನ್ನೂರ ಮತ್ತು ಸರ್ಕಾರಿ ಆಸ್ಪತ್ರೆ ಸಾಂಕ್ರಾಮಿಕ ರೋಗಗಳ ವಿಭಾಗಗಳ ವೈದ್ಯಾಧಿ ಕಾರಿ ಡಾ| ಶ್ರೀದೇವಿ ಪೂಜೇರಿ ಮಹಿಳೆಯರಿಗೆ ಸಂಬಂಧಿ ಸಿದ ವಿವಿಧ ವಿಷಯ ಕುರಿತು ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಯು.ಬಿ. ಸಿಂಪಿ, ತಾಲೂಕು ಆರೋಗ್ಯ ವೈದ್ಯಾಧಿ ಕಾರಿ ಡಾ| ರವೀಂದ್ರ ಅಂಟಿನ, ಡಾ| ಜಗದೀಶ ಜಿಂಗಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿ ಕಾರಿ ಬಿ.ಬಿ. ಈಶ್ವರಪ್ಪಗೋಳ, ಸಹಾಯಕ ಸಿಡಿಪಿಒ ನಸರೀನ ಕೊಣ್ಣೂರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.