ನವೆಂಬರ್ ಒಳಗೆ ರಸ್ತೆ ಗುಂಡಿ ಮುಚ್ಚಲು ಡಿಸಿಎಂ ಗಡುವು
Team Udayavani, Nov 5, 2019, 3:05 AM IST
ಬೆಂಗಳೂರು: ರಾಜ್ಯಾದ್ಯಂತ ಲೋಕೋಪ ಯೋಗಿ ಇಲಾಖೆ ನಿರ್ವಹಣೆ ವ್ಯಾಪ್ತಿಗೆ ಬರುವ ರಸ್ತೆಗಳಲ್ಲಿ ನವೆಂಬರ್ ಒಳಗೆ ಗುಂಡಿ ಮುಚ್ಚಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನೆ ನಡೆ ಸಿದ ಅವರು, ರಸ್ತೆ ಗುಂಡಿ ಮುಚ್ಚುವಲ್ಲಿ ವಿಫಲರಾ ಗುವ ಅಧಿಕಾರಿಗಳನ್ನು ರಜೆ ಮೇಲೆ ಮನೆಗೆ ಕಳುಹಿಸಿ.
ಅವರ ಸೇವಾವಧಿ ಪುಸ್ತಕದಲ್ಲಿ ಲೋಪ ದಾಖಲಿಸಿ ಎಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ ನೆರೆ ಹಾಗೂ ಪ್ರವಾಹದಿಂದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ಸಾರ್ವಜನಿಕರಿಗೆ ತೊಂದರೆ ಯಾಗಿದೆ. ಇರುವ ಆರ್ಥಿಕ ಮಿತಿಯಲ್ಲಿ ಸ್ಥಳೀಯ ಮಟ್ಟದಲ್ಲಿ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಯನ್ನೇ ಹೊಣೆ ಮಾಡಲಾಗುವುದು ಎಂದರು.
ರಸ್ತೆ, ಸೇತುವೆಗಳ ಅಭಿವೃದ್ಧಿ ಹಾಗೂ ದುರಸ್ತಿಗೆ 1500 ಕೋಟಿ ರೂ. ಕ್ರಿಯಾ ಯೋಜನೆ ತಯಾರಿಸಲಾಗಿದ್ದು, ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ನೆರವೇರಿಸಲಾಗುವುದು. ಪ್ರತಿ ಕಾಮ ಗಾರಿಗೆ ಮುನ್ನ ಆರ್ಥಿಕ ಇಲಾಖೆ ಒಪ್ಪಿಗೆ ದೊರೆತಿದೆಯಾ ಎಂಬುದನ್ನು ಖಾತರಿಪಡಿಸಿಕೊಳ್ಳಿ. ಒಪ್ಪಿಗೆ ಇಲ್ಲದೆ ಯಾವುದೇ ಕಾಮಗಾರಿ ಪ್ರಾರಂಭಿಸಬೇಡಿ ಎಂದು ತಾಕೀತು ಮಾಡಿದರು.
ಪ್ರವಾಸಿ ಮಂದಿರಗಳು ತೀರಾ ಅನಿವಾರ್ಯ ಇರುವ ಕಡೆ ಈ ವರ್ಷ 20 ರಿಂದ 30 ಪ್ರವಾಸಿ ಮಂದಿರ ನಿರ್ಮಾಣಕ್ಕೆ ಯೋಜನೆ ರೂಪಿಸಿ, ಎಸ್ಸಿಪಿ ಹಾಗೂ ಟಿಎಸ್ಪಿ ಯೋಜನೆಯ ಹಣ ಆಯಾ ವರ್ಷ ಬಳಕೆಗೆ ಕ್ರಮ ಕೈಗೊಳ್ಳಬೇಕು. ಹಣ ವೆಚ್ಚ ಮಾಡಬೇಕೆಂಬ ಕಾರಣಕ್ಕೆ ಯೋಜನೆ ರೂಪಿಸಬಾರದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.