ವೈದ್ಯರೊಂದಿಗೆ ಸಂಧಾನ ಸಭೆ ಬಹುತೇಕ ಸಫ‌ಲ


Team Udayavani, Nov 5, 2019, 3:09 AM IST

sandhana

ಬೆಂಗಳೂರು: ಮಿಂಟೊ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ನಡುವೆ ಸೋಮವಾರ ನಡೆದ ಸಂಧಾನ ಸಭೆ ಬಹುತೇಕ ಸಫಲವಾಗಿದ್ದು, ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಡುವ ಸಾಧ್ಯತೆಯಿದೆ. ಕಳೆದ ಎರಡು ದಿನಗಳಿಂದ ಮೌನ ಪ್ರತಿಭಟನೆಗೆ ಮುಂದಾಗಿದ್ದ ಕಿರಿಯ ವೈದ್ಯರು ಸೋಮವಾರ ಕರವೇ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ದಿನವಿಡೀ ನಡೆಸಿದ ಸಭೆಗೂ ಜಗ್ಗದ ಮಿಂಟೊ ಆಸ್ಪತ್ರೆಯ ಕಿರಿಯ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಆದರೆ, ಸರ್ಕಾರದಿಂದ ಸೂಕ್ತ ಭದ್ರತೆ ಒದಗಿಸುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರ ಸಡಿಲಗೊಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಸಂತ್ರಸ್ತರ ಪರ ಪ್ರತಿಭಟನೆ ವೇಳೆ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ. ಆಡಳಿತ ಮಂಡಳಿಯಿಂದಾದ ತಪ್ಪಿಗೆ ವೈದ್ಯ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವುದು ಸರಿಯಲ್ಲ. ಅವರಿಗೆ ಹೆಚ್ಚಿನ ಭದ್ರತೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಸಭೆ ಬಳಿಕ ಮಾತನಾಡಿದ ಡಾ.ಅಶ್ವತ್ಥ್ ನಾರಾಯಣ, ಹೆಚ್ಚಿನ ರಕ್ಷಣೆಗೆ ಕೇಂದ್ರ ಕೈಗಾರಿಕೆ ಭದ್ರತಾ ಪಡೆ ಹಾಗೂ ಕರ್ನಾಟಕ ಭದ್ರತಾ ಪಡೆ ನಿಯೋಜಿಸಲಾಗುವುದು. ಕೃತಕ ಬುದ್ಧಿಮತ್ತೆಯಂಥ ಆಧುನಿಕ ತಂತ್ರಜ್ಞಾನ ಬಳಕೆಯಿಂದ ಹೆಚ್ಚಿನ ಸುರಕ್ಷತೆ ಕ್ರಮಕೈಗೊಳ್ಳಲಾಗುವುದು. ಹೆಚ್ಚಿನ ಸಿಸಿಟಿವಿ ಅಳವಡಿಸಲಾಗುವುದು. ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲೂ ಸುರಕ್ಷಿತ ವಾತಾವರಣ ಸೃಷ್ಟಿಸುತ್ತೇವೆ ಎಂದು ಆಸ್ವಾಸನೆ ನೀಡಿದ್ದಾರೆ.

ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಬಳಿಕ ದೃಷ್ಟಿ ಕಳೆದುಕೊಂಡಿರುವ ಪ್ರಕರಣ ಸಂಬಂಧ ಜಯದೇವ ಹೃದ್ರೋಗ ಸಂಸ್ಥೆ ಡಾ.ರವೀಂದ್ರ ನೇತೃತ್ವದಲ್ಲಿ ಸತ್ಯ ಶೋಧನೆ ಸಮಿತಿ ರಚಿಸಲಾಗಿದೆ. ಸಮಿತಿಯಿಂದ ಮಾಹಿತಿ ಪಡೆಯಲಾಗಿದೆ. ಸಂಬಂಧಪಟ್ಟವರ ವಿಚಾರಣೆಯೂ ಆಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಮೂರು ಲಕ್ಷ ಪರಿಹಾರ: ಮಿಂಟೋ ಆಸ್ಪತ್ರೆಯಲ್ಲಿ ಜುಲೈ ತಿಂಗಳಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೇಳೆ ಸಂಭವಿಸಿದ ಅನಾಹುತದಿಂದ ದೃಷ್ಟಿ ಕಳೆದುಕೊಂಡವರಿಗೆ ರಾಜ್ಯ ಸರ್ಕಾರ 3 ಲಕ್ಷ ರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡವಾಗಿದೆ. ಅವರ ನೋವು ಅರ್ಥ ಮಾಡಿಕೊಂಡಿರುವ ರಾಜ್ಯ ಸರ್ಕಾರ ತಕ್ಷಣವೇ ಪರಿಹಾರ ನೀಡಲಿದೆ.

ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಾಗುವುದು. ಜೊತೆಗೆ ಮುಂದಿನ ದಿನಗಳಲ್ಲಿ ತಪ್ಪಿತಸ್ಥ ಕಂಪನಿಯಿಂದ ಆ ಹಣ ವಸೂಲಿ ಮಾಡಲಾಗುವುದು. ಆದರೆ, ತಕ್ಷಣಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ನೀಡಲಾಗುತ್ತದೆ. ಎಷ್ಟೇ ದುಬಾರಿಯಾದರೂ ದೃಷ್ಟಿ ಕಳೆದುಕೊಂಡವರಿಗೆ ಅಗತ್ಯ ಚಿಕಿತ್ಸೆ ಕೊಡಿಸುವುದು ಸರ್ಕಾರದ ಜವಾಬ್ದಾರಿ. ಈ ವಿಷಯದಲ್ಲಿ ರಾಜಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಟಾಪ್ ನ್ಯೂಸ್

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.